Karnataka news paper

ವಿಧಾನಮಂಡಲ ಜಂಟಿ ಅಧಿವೇಶನಕ್ಕೆ ಕಾಂಗ್ರೆಸ್ ಸಿದ್ಧತೆ; ಫೆಬ್ರವರಿ 14 ಕ್ಕೆ ಸಿಎಲ್‌ಪಿ ಸಭೆ


ಬೆಂಗಳೂರು: ಫೆಬ್ರವರಿ 14 ರಿಂದ ವಿಧಾನಮಂಡಲ ಜಂಟಿ ಅಧಿವೇಶನದ ಆರಂಭಗೊಳ್ಳಲಿದ್ದು, ಸದನದಲ್ಲಿ ಆಡಳಿತ ಪಕ್ಷವನ್ನು ಕಟ್ಟಿಹಾಕಲು ಕಾಂಗ್ರೆಸ್ ಸಜ್ಜಾಗುತ್ತಿದೆ. ಈ ನಿಟ್ಟಿನಲ್ಲಿ ಚರ್ಚೆ ನಡೆಸಲು ಫೆಬ್ರವರಿ 14 ರಂದು ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.

ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ನಗರದ ಖಾಸಗಿ ಹೋಟೆಲ್‌ನಲ್ಲಿ ಸಭೆ ನಡೆಯಲಿದ್ದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌, ಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್, ಶಾಸಕಾಂಗ ಪಕ್ಷದ ಉಪನಾಯಕ ಯು.ಟಿ ಖಾದರ್, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂಬಿ ಪಾಟೀಲ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರುಗಳು ಭಾಗಿಯಾಗಲಿದ್ದಾರೆ.

10 ದಿನಗಳ ಕಾಲ ನಡೆಯಲಿರುವ ಅಧಿವೇಶದಲ್ಲಿ ಯಾವ ಯಾವ ವಿಚಾರಗಳನ್ನು ಚರ್ಚೆಗೆ ಕೈಗೆತ್ತಿಗೊಳ್ಳಬೇಕು ಹಾಗೂ ಆಡಳಿತ ಪಕ್ಷದ ವಿರುದ್ಧ ಸದನದಲ್ಲಿ ಯಾವ ರೀತಿಯಾಗಿ ಹೋರಾಟ ರೂಪಿಸಬೇಕು ಎಂಬ ನಿಟ್ಟಿನಲ್ಲಿ ಸಿಎಲ್‌ಪಿ ಸಭೆಯಲ್ಲಿ ಚರ್ಚೆ ನಡೆಯಲಿದೆ.

ಇವರನ್ನೂ ಕಾಂಗ್ರೆಸ್‌ಗೆ ಸೇರಿಸಿಕೊಳ್ಳಿ ಸರ್! ಸಿದ್ದರಾಮಯ್ಯಗೆ ವೈಎಸ್‌ವಿ ದತ್ತ ಬೆಂಬಲಿಗರ ಮನವಿ!

ಬೆಳಗಾವಿ ಅಧಿವೇಶನದಲ್ಲಿ ಬೆಲೆ ಏರಿಕೆ ವಿಚಾರವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಹೋರಾಟ ರೂಪಿಸಿತ್ತು.ಬಿಟ್‌ ಕಾಯಿನ್ , ಭ್ರಷ್ಟಾಚಾರ ಇನ್ನಿತರ ವಿಚಾರಗಳು ಕಾಂಗ್ರೆಸ್ ಬತ್ತಳಿಕೆಯಲ್ಲಿ ಇದ್ದಿದ್ದರೂ ಅದನ್ನು ಪ್ರಯೋಗ ಮಾಡಲು ಸಾಧ್ಯವಾಗಿರಲಿಲ್ಲ.

ಈ ನಿಟ್ಟಿನಲ್ಲಿ ಜಂಟಿ ಅಧಿವೇಶನದಲ್ಲಿ ಪ್ರಮುಖ ವಿಚಾರಗಳನ್ನು ಇಟ್ಟುಕೊಂಡು ಆಡಳಿತ ಪಕ್ಷದ ವಿರುದ್ಧ ಸದನದಲ್ಲಿ ಹೋರಾಟ ರೂಪಿಸಲು ಕಾಂಗ್ರೆಸ್ ಸಿದ್ಧತೆ ನಡೆಸುತ್ತಿದೆ.

ಕಾಂಗ್ರೆಸ್‌ನಲ್ಲೇ ಸಿಎಂ ಇಬ್ರಾಹಿಂ ಉಳಿಸಿಕೊಳ್ಳೋ ಯತ್ನ; ಆಪ್ತನ ಮೂಲಕ ಸಂಧಾನಕ್ಕೆ ಮುಂದಾದ ಸಿದ್ದರಾಮಯ್ಯ!

ಇದೀಗ ಬಿಟ್‌ ಕಾಯಿನ್ ಮತ್ತೆ ಸದ್ದು ಮಾಡುತ್ತಿದ್ದು ಈ ಬಾರಿಯ ಅಧಿವೇಶನದಲ್ಲಿ ಕಾಂಗ್ರೆಸ್ ಈ ವಿಚಾರವನ್ನು ಮುನ್ನೆಲೆಗೆ ತರುವ ತಂತ್ರ ರೂಪಿಸುತ್ತಿದೆ. ಅದರ ಜೊತೆ ರೈತರ ಸಮಸ್ಯೆಗಳು, ಮೇಕೆದಾಟು, ಮಹದಾಯಿ ಸೇರಿದಂತೆ ನಿರಾವರಿ ಯೋಜನೆಗಳ ಜಾರಿಯಲ್ಲಿನ ವಿಳಂಬ ವಿಚಾರಗಳನ್ನು ಮುಂದಿಟ್ಟುಕೊಂಡು ಹೋರಾಟ ರೂಪಿಸುವ ಸಾಧ್ಯತೆ ಇದೆ. ಈ ಎಲ್ಲಾ ವಿಚಾರವಾಗಿ ಫೆಬ್ರವರಿ 14 ರಂದು ನಡೆಯಲಿರುವ ಸಿಎಲ್‌ಪಿ ಸಭೆಯಲ್ಲಿ ಮಹತ್ವದ ಚರ್ಚೆಗಳು ನಡೆಯಲಿವೆ.



Read more

[wpas_products keywords=”deal of the day sale today offer all”]