ವಕೀಲೆ ಗೀತಾ ಮಿಶ್ರಾ ಸಲ್ಲಿಸಿದ್ದ ಪಿಐಎಲ್ ಅನ್ನು ಸಿಜೆ ರಿತುರಾಜ್ ಅವಸ್ಥಿ ಹಾಗೂ ನ್ಯಾ. ಸಚಿನ್ ಶಂಕರ್‌ಮಗದಂ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಬಳಿಕ ಸರಕಾರದ ಹೇಳಿಕೆಯನ್ನು ದಾಖಲಿಸಿಕೊಂಡು ಅರ್ಜಿ ವಿಲೇವಾರಿ ಮಾಡಿದ ನ್ಯಾಯಪೀಠ, ‘ಸರಕಾರ ಈಗಾಗಲೇ ಬಾಡಿ ವೋರ್ನ್ ಕ್ಯಾಮೆರಾ ಖರೀದಿಗೆ ಕ್ರಮ ಕೈಗೊಂಡಿದೆ. ಸ್ಮಾರ್ಟ್ ಟ್ರಾಫಿಕ್ ನಿರ್ವಹಣಾ ವ್ಯವಸ್ಥೆ ಜಾರಿಗೆ ಅವುಗಳನ್ನು ಪರಿಣಾಮಕಾರಿಯಾಗಿ ಬಳಕೆ ಮಾಡಬೇಕು. ಕರ್ತವ್ಯ ನಿರ್ವಹಣೆ ವೇಳೆ, ಕ್ಯಾಮೆರಾ ಧರಿಸುವಂತೆ ಪೊಲೀಸ್ ಸಿಬ್ಬಂದಿಗೆ ಸೂಕ್ತ ನಿರ್ದೇಶನ ನೀಡಬೇಕು’ ಎಂದು ನಿರ್ದೇಶಿಸಿತು.
‘ಒಟ್ಟು 2,680 ಬಾಡಿ ವೋರ್ನ್ ಕ್ಯಾಮೆರಾಗಳ ಖರೀದಿಗೆ ಕಾರ್ಯಾದೇಶ ಹೊರಡಿಸಲಾಗಿದ್ದು,ಮೂರು ಪ್ರತ್ಯೇಕ ಕಂಪನಿಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಈಗಾಗಲೇ ಕಂಪನಿಗಳು 1,097 ಕ್ಯಾಮೆರಾಗಳನ್ನು ಪೂರೈಸಿವೆ. ಉಳಿದವುಗಳನ್ನು ಖರೀದಿಸಿದ ನಂತರ, ಸಿಬ್ಬಂದಿಗೆ ಸೂಕ್ತ ತರಬೇತಿ ನೀಡಿ ಅವುಗಳ ಬಳಕೆ ಮಾಡಲಾಗುವುದು’ ಎಂದು ಸರಕಾರಿ ವಕೀಲರು ನ್ಯಾಯಾಲಯದ ಗಮನಕ್ಕೆ ತಂದರು.
ಅರ್ಜಿದಾರರ ಪರ ವಾದಿಸಿದ ವಕೀಲ ಜಿ.ಆರ್. ಮೋಹನ್, ‘ಈ ಹಿಂದೆಯೂ ಸರಕಾರ 75 ಲಕ್ಷ ರೂ. ವೆಚ್ಚ ಮಾಡಿ 50 ಬಾಡಿ ವೋರ್ನ್ ಕ್ಯಾಮೆರಾಗಳನ್ನು ಖರೀದಿಸಿತ್ತು. ಆದರೆ, ಅವುಗಳನ್ನು ಬಳಕೆ ಮಾಡಿರಲಿಲ್ಲ. ಆದ್ದರಿಂದ, ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಸಿ, ಅವುಗಳನ್ನು ಬಳಕೆ ಮಾಡಲು ಹಾಗೂ ಹೆಚ್ಚುವರಿ ಕ್ಯಾಮೆರಾಗಳನ್ನು ಖರೀದಿಸಲು ಸರಕಾರಕ್ಕೆ ನಿರ್ದೇಶನ ನೀಡುವಂತೆ ಕೋರಲಾಗಿತ್ತು. ಈಗ ಖರೀದಿಸುವ ಕ್ಯಾಮೆರಾಗಳನ್ನೂ ಹಿಂದಿನಂತೆಯೇ ಬಳಕೆ ಮಾಡದಂತೆ ಇಡಬಾರದು ಎಂದು ಸರಕಾರಕ್ಕೆ ನಿರ್ದೇಶಿಬೇಕು’ ಎಂದು ಕೋರಿದರು.
‘ಬಾಡಿ ಕ್ಯಾಮರಾ ಅಳವಡಿಸಿಕೊಳ್ಳುವುದರಿಂದ ಪೊಲೀಸ್ ಸಿಬ್ಬಂದಿ ಎಸಗುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬಹುದು. ಸಿಬ್ಬಂದಿ ಕಾರ್ಯವೈಖರಿಯನ್ನು ಸಂಬಂಧಪಟ್ಟ ಠಾಣೆಗಳಿಂದಲೇ ಗಮನಿಸಿ ಮೇಲ್ವಿಚಾರಣೆ ನಡೆಸಬಹುದು. ಇದಲ್ಲದೆ, ಬಾಡಿ ಕ್ಯಾಮರಾ ಧರಿಸುವುದರಿಂದ ಪೊಲೀಸರ ಮೇಲೆ ಹಲ್ಲೆ ನಡೆಸುವವರಿಗೂ ಭಯ ಹುಟ್ಟುವುದರ ಜತೆಗೆ, ಪೊಲೀಸರಿಗೂ ರಕ್ಷಣೆ ಸಿಕ್ಕಂತಾಗುತ್ತದೆ. ಆದ್ದರಿಂದ, ರಾಜ್ಯಾದ್ಯಂತ ಹೆಚ್ಚಿನ ಪ್ರಮಾಣದಲ್ಲಿ ಬಾಡಿ ಕ್ಯಾಮರಾ ಖರೀದಿಗೆ ನಿರ್ದೇಶನ ನೀಡಬೇಕು’ ಎಂದು ಅರ್ಜಿದಾರರು ನ್ಯಾಯಾಲಯವನ್ನು ಕೋರಿದ್ದರು.
Read more
[wpas_products keywords=”deal of the day sale today offer all”]