Karnataka news paper

10 ಜಿಲ್ಲೆಗಳಿಗೆ ವ್ಯಾಪಿಸಿದ ಹಿಜಾಬ್ v/s ಕೇಸರಿ ವಿವಾದದ ಕಿಚ್ಚು: ಬೋಧಕ ವರ್ಗ ಹೈರಾಣ; ರಾಜಕೀಯ ಬಣ್ಣ ಲೇಪನ


Online Desk

ಬೆಂಗಳೂರು: ಹಿಜಾಬ್-ಕೇಸರಿ ಶಾಲು ಧರಿಸಿಕೊಂಡು ಶಾಲೆ-ಕಾಲೇಜಿಗೆ ಬರುವ ವಿವಾದ ರಾಜಕೀಯ ಬಣ್ಣ ಪಡೆದುಕೊಂಡು ಇಂದು ರಾಜ್ಯದ 10 ಜಿಲ್ಲೆಗಳಿಗೆ ವ್ಯಾಪಿಸಿದೆ, ಉಡುಪಿಯಲ್ಲಿ ಆರಂಭವಾದ ಹಿಜಾಬ್ ವಿವಾದ ಇಂದು ವಿಜಯಪುರ, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಶಿವಮೊಗ್ಗ ಮೊದಲಾದ ಜಿಲ್ಲೆಗಳಿಗೆ ವ್ಯಾಪಿಸಿದೆ.

ನೀವು ಹಿಜಾಬ್ ಧರಿಸಿಕೊಂಡು ಬಂದರೆ ನಾವು ಕೇಸರಿ ಶಾಲು ಧರಿಸಿಕೊಂಡು ಬರುತ್ತೇವೆ, ನೀವು ಹಿಜಾಬ್ ತೆಗೆಯುವವರೆಗೂ ನಾವು ಕೇಸರಿ ಶಾಲು ಬಿಡುವುದಿಲ್ಲ ಎಂದು ಮುಸಲ್ಮಾನ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿಗಳು ಸವಾಲು ಹಾಕಿದ್ದಾರೆ.

ಇಂದು ರಾಜ್ಯದ ಬಹುತೇಕ ಕಾಲೇಜುಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ (Hijab) ಧರಿಸಿ ಬಂದಿದ್ದಾರೆ. ಹಾಗೂ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದಾರೆ. ಇದರಿಂದ ಕಾಲೇಜು ಆಡಳಿತ ಮಂಡಳಿಗೆ ತಲೆ ನೋವಾಗಿದ್ದು ಮುಂದೆ ಏನು ಎಂಬ ಭಯದಲ್ಲಿ ಕುಳಿತಿದ್ದಾರೆ. ಸದ್ಯ ಕೆಲ ಕಾಲೇಜುಗಳಲ್ಲಿ ರಜೆ ಘೋಷಿಸಲಾಗಿದೆ. ಕೆಲವು ಕಡೆ ವಿದ್ಯಾರ್ಥಿಗಳಿಗೆ ಕ್ಲಾಸ್ ರೂಂ ಪ್ರವೇಶಕ್ಕೆ ತಡೆ ಹಿಡಿಯಲಾಗಿದೆ. ಮತ್ತೇ ಕೆಲವು ಕಡೆ ಕಾಲೇಜುಗಳ ಮುಂದೆ ವಿದ್ಯಾರ್ಥಿಗಳು ಜೈಶ್ರೀರಾಮ್ ಎಂದು ಘೋಷಣೆ ಕೂಗುತ್ತಿದ್ದಾರೆ. ಕುಂದಾಪುರದಲ್ಲಿ ಇಂದು ಪೊಲೀಸರ ಭದ್ರತೆ ನಡುವೆ ಹಿಜಾಬ್ ಧರಿಸಿಕೊಂಡು ಬಂದವರನ್ನು ತರಗತಿಗಳಿಗೆ ಬಿಡಲಾಗುತ್ತಿದ್ದರೂ ಪ್ರತ್ಯೇಕ ಕೊಠಡಿಗಳಲ್ಲಿ ಇರಿಸಲಾಗುತ್ತಿದೆ.

ಈ ಮಧ್ಯೆ ಮೊದಲೇ ಕೋವಿಡ್ ಲಾಕ್ ಡೌನ್ ನಿಂದ ತರಗತಿಗಳನ್ನು ಕಳೆದೆರಡು ವರ್ಷಗಳಿಂದ ಸರಿಯಾಗಿ ನಡೆಸಲಾಗದೆ ಇದೀಗ ತಾನೇ ಶಾಲಾ-ಕಾಲೇಜು ಮತ್ತೆ ಆರಂಭವಾಗಿರುವುದರ ಮಧ್ಯೆ ಆಡಳಿತ ಮಂಡಳಿಗೆ, ಬೋಧಕ ವರ್ಗದವರಿಗೆ, ಪ್ರತಿಭಟನೆ-ಹೋರಾಟದ ಕಿಚ್ಚನ್ನು ನಿಯಂತ್ರಿಸಬೇಕಾದ ಪೊಲೀಸರಿಗೆ ಹೊಸ ತಲೆನೋವು ಶುರುವಾಗಿದೆ.

ಇದನ್ನೂ ಓದಿ: ರಾಜ್ಯದ ಇತರೆಡೆಗೂ ವ್ಯಾಪಿಸಿದ ಹಿಜಾಬ್ ವಿವಾದ: ವಿಜಯಪುರದ ಕಾಲೇಜಿಗೆ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು, ತರಗತಿ ರದ್ದು

ಹಿಜಾಬ್ ಧರಿಸಿಕೊಂಡು ಬಂದ ವಿದ್ಯಾರ್ಥಿಗಳನ್ನು ಇಂದು ಕುಂದಾಪುರದ ಸರ್ಕಾರಿ ಪಿಯು ಕಾಲೇಜಿನ ಕ್ಯಾಂಪಸ್‌ಗೆ ಪ್ರವೇಶಿಸಲು ಅನುಮತಿ ನೀಡಿದರೂ ಪ್ರತ್ಯೇಕ ತರಗತಿ ಕೊಠಡಿಗಳಲ್ಲಿ ಕೂರಿಸಲಾಯಿತು. ಕುಂದಾಪುರದಲ್ಲಿ ಪರಿಸ್ಥಿತಿ ಹತೋಟಿಯಲ್ಲಿದ್ದು ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಿ ಕಾಲೇಜುಗಳಿಗೆ ಬರಲು ಹಾಗೂ ಕ್ಯಾಂಪಸ್‌ಗೆ ಅವಕಾಶ ಮಾಡಿಕೊಡಲಾಗುತ್ತಿದೆ. ಕುಂದಾಪುರದಲ್ಲಿ ಕಾನೂನು ಸುವ್ಯವಸ್ಥೆಯಲ್ಲಿದೆ ಎಂದು ಹೆಚ್ಚುವರಿ ಎಸ್ಪಿ ಎಸ್.ಟಿ.ಸಿದ್ದಲಿಂಗಪ್ಪ ಹೇಳಿದ್ದಾರೆ.

ವಿಜಯಪುರದ ಶಾಂತೇಶ್ವರ ಎಜುಕೇಶನ್ ಟ್ರಸ್ಟ್‌ನಲ್ಲಿ ಕೆಲ ವಿದ್ಯಾರ್ಥಿಗಳು ಕೇಸರಿ ವಸ್ತ್ರ ಧರಿಸಿ ಕ್ಯಾಂಪಸ್‌ಗೆ ಆಗಮಿಸಿದ ಹಿನ್ನೆಲೆಯಲ್ಲಿ ತರಗತಿಗಳನ್ನು ಸ್ಥಗಿತಗೊಳಿಸಲಾಗಿದೆ. 

ಬೆಳಗಾವಿಯಲ್ಲಿ ಅಖಿಲ ಭಾರತ ಮಜಲಿಸ್ ಎ ಇತ್ತೆಹಾದುಲ್ ಮುಸ್ಲಿಮೀನ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡು ಹೋಗಲು ಅವಕಾಶ ನೀಡಬೇಕು ಎಂದು ಆಗ್ರಹಿಸಿ ಮತ್ತು ಸರ್ಕಾರದ ಸಮವಸ್ತ್ರ ನೀತಿ ಖಂಡಿಸಿ ಪ್ರತಿಭಟನೆ ನಡೆಯಿತು. 

ಇದನ್ನೂ ಓದಿ: ಹಿಜಾಬ್ ಇಂದು ನಿನ್ನೆಯ ಬೇಡಿಕೆಯಲ್ಲ, ಹಲವು ವರ್ಷಗಳಿಂದ ಕೇಳುತ್ತಿದ್ದೇವೆ: ಉಡುಪಿ ವಿದ್ಯಾರ್ಥಿನಿಯರ ವಾದ

ಹಿಜಾಬ್ ಧರಿಸುವುದು ಮೂಲಭೂತ ಹಕ್ಕು, ಆದರೆ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿಗಳಿಗೆ ತರಗತಿಗಳಿಗೆ ಹೋಗಲು ರಾಜಕೀಯ ಕಾರಣಕ್ಕೆ ಅವಕಾಶ ನಿರಾಕರಿಸಲಾಗುತ್ತದೆ. ಸರ್ಕಾರದ ನಡೆ ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ರಾಜಕೀಯ ಸ್ಪರ್ಶ: ಇನ್ನು ಹಿಜಾಬ್-ಕೇಸರಿ ಶಾಲು ವಿವಾದದ ಕಿಚ್ಚು ಹೆಚ್ಚಾಗುತ್ತಿದ್ದಂತೆ ರಾಜಕೀಯ ಸ್ವರೂಪ ಪಡೆಯುತ್ತಿದೆ. ಬಿಜೆಪಿ-ಕಾಂಗ್ರೆಸ್ ನಾಯಕರ ಮಧ್ಯೆ ವಾಕ್ಸಮರ ಜೋರಾಗುತ್ತಿದೆ. ಹಿಜಾಬ್ ಧರಿಸಿಕೊಂಡೇ ಬರುತ್ತೇವೆ ಎಂದು ವಿದ್ಯಾರ್ಥಿನಿಯರು ಹಠ ಬಿದ್ದಿರುವುದರ ಹಿಂದೆ ರಾಜಕೀಯ ನಾಯಕರ ಕೈವಾಡವಿದೆ ಎಂದು ಈಗಾಗಲೇ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಆರೋಪಿಸಿದ್ದಾರೆ. 



Read more

[wpas_products keywords=”deal of the day”]