Karnataka news paper

ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಎನ್ ಕೌಂಟರ್: ಒಬ್ಬ ಉಗ್ರ ಹತ್ಯೆ


Source : The New Indian Express

ಜಮ್ಮು: ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಮಂಗಳವಾರ ನಸುಕಿನ ಜಾವ ನಡೆದ ಎನ್ ಕೌಂಟರ್ ನಲ್ಲಿ ಉಗ್ರನೊಬ್ಬ ಹತನಾಗಿದ್ದಾನೆ. 

ಉಗ್ರರ ಇರುವಿಕೆ ಬಗ್ಗೆ ಮಾಹಿತಿ ಪಡೆದ ಭದ್ರತಾ ಪಡೆ ಯೋಧರು ಪೂಂಚ್ ಜಿಲ್ಲೆಯ ಸುರಂಕೊಟೆ ಪ್ರದೇಶದವನ್ನು ಸುತ್ತುವರಿದು ಶೋಧ ಕಾರ್ಯ ಆರಂಭಿಸಿದರು. ಕಾರ್ಯಾಚರಣೆ ಎನ್ ಕೌಂಟರ್ ಆಗಿ ಬದಲಾಯಿತು. ಉಗ್ರರು ಮೊದಲಿಗೆ ಗುಂಡಿನ ಮಳೆಗೈಯಲಾರಂಭಿಸಿದರು. ಅದಕ್ಕೆ ಪ್ರತ್ಯುತ್ತರ ನೀಡಿದ ಭದ್ರತಾ ಪಡೆ ಒಬ್ಬ ಉಗ್ರನನ್ನು ಹೊಡೆದುರುಳಿಸಿದೆ.

ಸ್ಥಳದಲ್ಲಿ ಗುಂಡಿನ ಚಕಮಕಿ ಇನ್ನೂ ಮುಂದುವರಿದಿದೆ. ಮೃತ ಉಗ್ರನ ಶರೀರವನ್ನು ಹೊರತೆಗೆಯಬೇಕಿದೆ.



Read more