Karnataka news paper

ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಗೆ ಅನುಮೋದನೆ ನೀಡಿ; ರಾಜನಾಥ್ ಸಿಂಗ್ ಗೆ ಬಸವರಾಜ ಬೊಮ್ಮಾಯಿ ಮನವಿ


ಹೊಸದಿಲ್ಲಿ: ಸಂಗೊಳ್ಳಿಯಲ್ಲಿ 189 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಮುಕ್ತಾಯದ ಹಂತದಲ್ಲಿದ್ದು ಈ ಶಾಲೆಯನ್ನು ಸೈನಿಕ ಸ್ಕೂಲ್ ಸೊಸೈಟಿಗೆ ಹಸ್ತಾಂತರಿಸಲು ಅನುವು ಮಾಡಿಕೊಡುವಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಿಎಂ ಬಸವರಾಜ ಬೊಮ್ಮಾಯಿ ಮನವಿ ಮಾಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.

ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಕಡಿವಾಣಕ್ಕೆ ಪ್ರಯತ್ನ! ನಗದು ಘೋಷಣೆ ಲೆಡ್ಜರ್ ನಿರ್ವಹಣೆಗೆ ನಿರ್ದೇಶನ

ಸೈನಿಕ್ ಸ್ಕೂಲ್ ಸೊಸೈಟಿಯ ಅಧಿಕಾರಿಗಳು ಹಾಗೂ ಬೆಳಗಾವಿ ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿಯು ಈಗಾಗಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದೆ. ಸೈನಿಕ ಸ್ಕೂಲ್ ಮಾನದಂಡಗಳ ಪಾಲನೆಗೆ ಕ್ರಮ ವಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶೀಘ್ರವೇ ಈ ಶಾಲೆಯನ್ನು ಸೈನಿಕ್ ಸ್ಕೂಲ್ ಸೊಸೈಟಿಯ ಅಧೀನಕ್ಕೆ ಒಳಪಡಿಸಲು ಅನುಮೋದನೆ ನೀಡುವಂತೆ ಕೋರಿದರು.

ಈ ಸಂದರ್ಭದಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮತ್ತು ಇತರ ಹಿರಿಯ ಅಧಿಕಾರಿಗಳೂ ಉಪಸ್ಥಿತರಿದ್ದರು. ಇದಕ್ಕೂ ಮುನ್ನ ದೆಹಲಿಯಲ್ಲಿ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಕುರಿತಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಜೊತೆಗೆ ಚರ್ಚೆ ನಡೆಸುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ದೆಹಲಿಯಲ್ಲಿ ಮಂಗಳವಾರ ಮಾತನಾಡಿದ ಅವರು, ನಡ್ಡಾ ಅವರ ಸಮಯ ಕೇಳಿದ್ದೇನೆ, ಅವರು ಸಿಕ್ಕರೆ ಸಂಪುಟ ವಿಸ್ತರಣೆ, ಪಕ್ಷದ ಬಗ್ಗೆ ಚರ್ಚೆ ಮಾಡುತ್ತೇನೆ ಎಂದಿದ್ದಾರೆ.

ಇನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದೇನೆ. ಕೆಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದೇನೆ. ಸಂಪುಟ ವಿಸ್ತರಣೆ ಬಗ್ಗೆ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿ ಮಾಡಿ ಮಾತನಾಡಿ ಅಂದಿದ್ದಾರೆ ಎಂದು ತಿಳಿಸಿದ್ದಾರೆ.



Read more

[wpas_products keywords=”deal of the day sale today offer all”]