Deal Of The Day
oi-Manthesh
ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಆನ್‌ಲೈನ್ ಶಾಪಿಂಗ್ ಪ್ರಿಯರ ಪ್ರಮುಖ ತಾಣವಾಗಿ ಕಾಣಿಸಿಕೊಂಡಿದೆ. ಅಮೆಜಾನ್ ತಾಣವು ಒಂದಿಲ್ಲೊಂದು ಆಫರ್ ಆಯೋಜಿಸುತ್ತಲೆ ಇರುತ್ತದೆ. ಆ ಪೈಕಿ ಅಮೆಜಾನ್ ತಾಣವು ಸ್ಮಾರ್ಟ್‌ಫೋನ್‌ಗಳಿಗೆ ವಿಶೇಷ ರಿಯಾಯಿತಿ ನೀಡುತ್ತ ಸಾಗಿದೆ. ಹಬ್ಬದ ಸೇಲ್‌ನಲ್ಲಿ ಫೋನ್‌ಗಳಿಗೆ ಬೊಂಬಾಟ್ ಕೊಡುಗೆ ಘೋಷಿಸುತ್ತದೆ. ಅದಾಗ್ಯೂ ವಿಶೇಷ ಸೇಲ್ ಇಲ್ಲದ ಸಂದರ್ಭದಲ್ಲಿಯೂ ಆಯ್ದ ಫೋನ್‌ಗಳು ರಿಯಾಯಿತಿ ಬೆಲೆಯಲ್ಲಿ ಲಭ್ಯ.

ಹೌದು, ಅಮೆಜಾನ್ ತಾಣವು ಕೆಲವು ಆಯ್ದ ಫೋನ್‌ಗಳಿಗೆ ರಿಯಾಯಿತಿ ದರದಲ್ಲಿ ಲಭ್ಯ. ಜನಪ್ರಿಯ ಸ್ಮಾರ್ಟ್‌ಫೋನ್ ಬ್ರ್ಯಾಂಡ್ ಸ್ಯಾಮ್‌ಸಂಗ್ ಕಂಪನಿಯ ಭಿನ್ನ ಶ್ರೇಣಿಯಲ್ಲಿ ಸ್ಮಾರ್ಟ್‌ಫೋನ್‌ಗಳ ಆಯ್ಕೆ ಹೊಂದಿದೆ. ಸ್ಯಾಮ್‌ಸಂಗ್ ಕಂಪನಿಯ ಕೆಲವು ಹೈ ಎಂಡ್ ಫೀಚರ್ಸ್‌ಗಳ ಸ್ಮಾರ್ಟ್‌ಫೋನ್‌ಗಳು ಅಮೆಜಾನ್‌ನಲ್ಲಿ ವಿಶೇಷ ಪ್ರೈಸ್ ಟ್ಯಾಗ್‌ನಲ್ಲಿ ಕಾಣಿಸಿಕೊಂಡಿವೆ. ಹಾಗಾದರೇ ಅಮೆಜಾನ್‌ನಲ್ಲಿ ಆಕರ್ಷಕ ದರದಲ್ಲಿ ಕಾಣಿಸಿಕೊಂಡ ಹೈ ಎಂಡ್ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S20 FE 5G ಸ್ಮಾರ್ಟ್‌ಫೋನ್
ಗ್ಯಾಲಕ್ಸಿ S20FE 5G ಸ್ಮಾರ್ಟ್‌ಫೋನ್ 2400 × 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಫುಲ್ ಹೆಚ್‌ಡಿ + ಸೂಪರ್ ಅಮೋಲೆಡ್ ಇನ್ಫಿನಿಟಿ-ಒ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 865 ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ಆಪರೇಟಿಂಗ್ ಸಿಸ್ಟಮ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 15W ವೇಗದ ಚಾರ್ಜಿಂಗ್ ಮತ್ತು ವೈರ್‌ಲೆಸ್ ಚಾರ್ಜಿಂಗ್‌ಗೆ ಬೆಂಬಲವನ್ನು ಹೊಂದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A22 5G ಸ್ಮಾರ್ಟ್‌ಫೋನ್
ಸ್ಯಾಮ್‌ಸಂಗ್ ಗ್ಯಾಲಕ್ಸಿ A22 5G ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.6 ಇಂಚಿನ ಫುಲ್-ಹೆಚ್‌ಡಿ + ಇನ್ಫಿನಿಟಿ-ವಿ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಒನ್ ಯುಐ ಕೋರ್ 3.1 ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಜೊತೆಗೆ 6GB RAM + 128GB ಮತ್ತು 8GB RAM + 128GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಎರಡು ವೇರಿಯೆಂಟ್ ಆಯ್ಕೆಯನ್ನು ಪಡೆದುಕೊಂಡಿದೆ. ಹಾಗೆಯೇ ಈ ಫೋನಿನ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದ್ದು, ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 15W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್ 20 ಸ್ಮಾರ್ಟ್‌ಫೋನ್
ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್ 20 ಸ್ಮಾರ್ಟ್‌ಫೋನ್ 1080×2400 ಪಿಕ್ಸಲ್ ಸಾಮರ್ಥ್ಯದೊಂದಿಗೆ 6.7 ಇಂಚಿನ ಸೂಪರ್ AMOLED ಡಿಸ್‌ಪ್ಲೇ ಹೊಂದಿದೆ. ಇದು Exynos 990 SoC ಚಿಪ್‌ಸೆಟ್ ಸಾಮರ್ಥ್ಯದ ಪ್ರೊಸೆಸರ್ ಹೊಂದಿದ್ದು, ಅದಕ್ಕೆ ಪೂರಕವಾಗಿ ಒನ್ UI 2.0 ಬೆಂಬಲಿತ ಆಂಡ್ರಾಯ್ಡ್ 10 ಓಎಸ್ ಸಪೋರ್ಟ್ ಇದೆ. ಒಟ್ಟು ಮೂರು ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಮುಖ್ಯ ಕ್ಯಾಮೆರಾವು 64ಎಂಪಿ ಸೆನ್ಸಾರ್ ಹೊಂದಿದೆ. ಇನ್ನು ಸೆಕೆಂಡರಿ ಮತ್ತು ತೃತೀಯ ಕ್ಯಾಮೆರಾಗಳೆರಡು ಸಹ ಕ್ರಮವಾಗಿ 12 ಎಂಪಿಯ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿವೆ. ಹಾಗೆಯೇ ಈ ಫೋನ್ 4,500mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದಿದ್ದು, ಹಾಗೆಯೇ ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಸಹ ಹೊಂದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್ 21 ಸ್ಮಾರ್ಟ್‌ಫೋನ್
ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್ 21 ಸ್ಮಾರ್ಟ್‌ಫೋನ್ 1,080×2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.2-ಇಂಚಿನ ಫ್ಲಾಟ್ ಫುಲ್-ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 20: 9 ರಚನೆಯ ಅನುಪಾತವನ್ನು ಹೊಂದಿದೆ. ಇದು ಆಕ್ಟಾ-ಕೋರ್ ಎಕ್ಸಿನೋಸ್ 2100 SoC ಪ್ರೊಸೆಸರ್ ಅನ್ನು ಹೊಂದಿದ್ದು,ಆಂಡ್ರಾಯ್ಡ್ 11 ನಲ್ಲಿ ಒನ್ ಯುಐ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಪ್ರೈಮರಿ ಕ್ಯಾಮೆರಾ 12 ಮೆಗಾ ಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್‌ನೊಂದಿಗೆ 120 ಡಿಗ್ರಿಗಳಷ್ಟು ಫೀಲ್ಡ್-ಆಫ್-ವ್ಯೂ ಹೊಂದಿದೆ. ಇದು 4,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು USB PD 3.0 ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್ 21 + ಸ್ಮಾರ್ಟ್‌ಫೋನ್
ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್ 21 + ಸ್ಮಾರ್ಟ್‌ಫೋನ್ 6.7-ಇಂಚಿನ ಫ್ಲಾಟ್ ಫುಲ್-ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ ಹೆಚ್‌ಡಿಆರ್ 10 + ಬೆಂಬಲ ಮತ್ತು 120 Hz ಅಡಾಪ್ಟಿವ್ ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಇನ್ನು ಗ್ಯಾಲಕ್ಸಿ ಎಸ್ 21 + ಎಕ್ಸಿನೋಸ್ 2100SoC ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 8GB RAM + 128GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಪ್ರೈಮರಿ ಕ್ಯಾಮೆರಾ 12 ಮೆಗಾ ಪಿಕ್ಸೆಲ್ ಡ್ಯುಯಲ್ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 12 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್ ಶೂಟರ್ ಮತ್ತು ಮೂರನೇ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಟೆಲಿಫೋಟೋ ಸೆನ್ಸಾರ್ ಹೊಂದಿದೆ. ಜೊತೆಗೆ 10 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಸೆನ್ಸಾರ್ ಕೂಡ ಇದೆ. ಈ ಸ್ಮಾರ್ಟ್‌ಫೋನ್ 4,800 ಎಮ್‌ಎಹೆಚ್ ಬ್ಯಾಟರಿಯನ್ನು ಒದಗಿಸಿದೆ.
Disclaimer: This site contains affiliate links to products. We may receive a commission for purchases made through these links. However, this does not influence or impact any of our articles, such as reviews, comparisons, opinion pieces and verdicts.
Read more…
[wpas_products keywords=”smartphones under 15000 6gb ram”]