Karnataka news paper

ಪ್ರತಿದಿನ 1.5GB ಡೇಟಾ ಸೌಲಭ್ಯದ ಮೂರು ಅತ್ಯುತ್ತಮ ಪ್ಲ್ಯಾನ್‌ಗಳ ಮಾಹಿತಿ ಇಲ್ಲಿದೆ!


|

ಜಿಯೋ, ಏರ್‌ಟೆಲ್‌ ಹಾಗೂ ವಿ ಟೆಲಿಕಾಂಗಳು ಚಂದಾದಾರರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳಲು ಹಲವು ಆಕರ್ಷಕ ಪ್ಲ್ಯಾನ್‌ಗಳನ್ನು ಪರಿಚಯಿಸಿ ಸೈ ಅನಿಸಿಕೊಂಡಿವೆ. ಅವುಗಳಲ್ಲಿ ಬಹುತೇಕ ಯೋಜನೆಗಳು ದೈನಂದಿನ ಡೇಟಾ ಸೌಲಭ್ಯವನ್ನು ಪಡೆದಿದ್ದು, ಜೊತೆಗೆ ವಾಯಿಸ್‌ ಕರೆ ಹಾಗೂ ಆಕರ್ಷಕ ವ್ಯಾಲಿಡಿಟಿ ಪ್ರಯೋಜನವನ್ನು ಹೊಂದಿವೆ. ಗ್ರಾಹಕರು ಸಹ ದೈನಂದಿನ ಡೇಟಾ ಜೊತೆಗೆ ಹಾಗೂ ವ್ಯಾಲಿಡಿಟಿ ಸೌಲಭ್ಯದ ಪ್ರಿಪೇಯ್ಡ್‌ ಪ್ಲ್ಯಾನ್‌ಗಳನ್ನು ಆಯ್ಕೆ ಮಾಡಲು ಮುಂದಾಗುತ್ತಾರೆ.

ಪ್ರತಿದಿನ 1.5GB ಡೇಟಾ ಸೌಲಭ್ಯದ ಮೂರು ಅತ್ಯುತ್ತಮ ಪ್ಲ್ಯಾನ್‌ಗಳ ಮಾಹಿತಿ ಇಲ್ಲಿದೆ!

ಹೌದು, ದೈನಂದಿನ ಡೇಟಾ ಜೊತೆಗೆ ಆಕರ್ಷಕ ವ್ಯಾಲಿಡಿಟಿ ಸೌಲಭ್ಯದ ಪ್ರಿಪೇಯ್ಡ್‌ ಯೋಜನೆಗಳಿಗೆ ಹೆಚ್ಚಿನ ಬೇಡಿಕೆ. ಈ ನಿಟ್ಟಿನಲ್ಲಿ ಜಿಯೋ, ಏರ್‌ಟೆಲ್ ಮತ್ತು ವಿ ಟೆಲಿಕಾಂಗಳು ಪ್ರತಿದಿನ 1 GB ಯಿಂದ, 1.5 GB, 2 GB ಮತ್ತು 3 GB ವರೆಗೆ ಡೇಟಾ ಪ್ರಯೋಜನಗಳ ಭಿನ್ನ ಪ್ಲ್ಯಾನ್‌ಗಳನ್ನು ಹೊಂದಿವೆ. ಅವುಗಳಲ್ಲಿ ಬಹುತೇಕ ಚಂದಾದಾರರು ಪ್ರತಿದಿನ 1.5GB ಬಯಸಿದರೇ, ಇನ್ನು ಕೆಲವು ಚಂದಾದಾರರಿಗೆ ಪ್ರತಿದಿನ 2GB ಡೇಟಾ ಅಗತ್ಯವಾಗಿದೆ. ಜಿಯೋ, ಏರ್‌ಟೆಲ್ ಮತ್ತು ವಿ ಟೆಲಿಕಾಂಗಳ ಪ್ರತಿದಿನ 1.5GB ಡೇಟಾ ಹಾಗೂ ದೀರ್ಘಾವಧಿ ವ್ಯಾಲಿಡಿಟಿ ಸೌಲಭ್ಯದ ಪ್ಲ್ಯಾನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಲಾಗಿದೆ. ಮುಂದೆ ಓದಿರಿ.

ಪ್ರತಿದಿನ 1.5GB ಡೇಟಾ ಸೌಲಭ್ಯದ ಮೂರು ಅತ್ಯುತ್ತಮ ಪ್ಲ್ಯಾನ್‌ಗಳ ಮಾಹಿತಿ ಇಲ್ಲಿದೆ!

ಜಿಯೋದ 666ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು
ಜಿಯೋ 666ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಜೊತೆಗೆ ಜಿಯೋ ಆಪ್ಸ್‌ ಲಭ್ಯ.

ವಿ ಟೆಲಿಕಾಂನ 719ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ಪ್ರತಿದಿನ 1.5GB ಡೇಟಾ ಸೌಲಭ್ಯದ ಮೂರು ಅತ್ಯುತ್ತಮ ಪ್ಲ್ಯಾನ್‌ಗಳ ಮಾಹಿತಿ ಇಲ್ಲಿದೆ!

ಏರ್‌ಟೆಲ್‌ 719ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು
ಏರ್‌ಟೆಲ್‌ ಟೆಲಿಕಾಂನ 719ರೂ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದ್ದು, ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಿಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 126GB ಡೇಟಾ ಲಭ್ಯ ಆಗುತ್ತದೆ. ಹೆಚ್ಚುವರಿಯಾಗಿ ಏರ್‌ಟೆಲ್‌ ವೆಂಕ್ ಮ್ಯೂಸಿಕ್, ಫಾಸ್ಟ್‌ಟ್ಯಾಗ್ ಕ್ಯಾಶ್‌ಬ್ಯಾಕ್, ಉಚಿತ ಹೆಲೋ ಟ್ಯೂನ್‌ ಸೌಲಭ್ಯ ದೊರೆಯುತ್ತದೆ.

ಜಿಯೋದ 2545ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು
ಜಿಯೋ ಟೆಲಿಕಾಂನ 2545ರೂ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 336 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 1.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

Best Mobiles in India

  • 54,535

  • 1,19,900

  • 54,999

  • 86,999

  • 49,975

  • 49,990

  • 20,999

  • 1,04,999

  • 44,999

  • 64,999

  • 20,699

  • 49,999

  • 11,499

  • 54,999

  • 7,999

  • 8,980

  • 17,091

  • 10,999

  • 34,999

  • 39,600


  • 25,750


  • 33,590


  • 27,760


  • 44,425


  • 13,780


  • 1,25,000


  • 45,990


  • 1,35,000


  • 82,999


  • 17,999

English summary

Jio, Airtel, Vi: Best Prepaid Plans with 1.5GB Daily Data.

Story first published: Thursday, February 10, 2022, 12:51 [IST]



Read more…

[wpas_products keywords=”smartphones under 15000 6gb ram”]