Karnataka news paper

Covid-19 Karnataka Update: 30 ಲಕ್ಷ ದಾಟಿದ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಶನಿವಾರ 320 ಹೊಸ ಕೋವಿಡ್‌ ಹೊಸ ಪ್ರಕರಣಗಳು ದೃಢಪಟ್ಟಿದ್ದು, ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 30 ಲಕ್ಷದ (30,00,105) ಗಡಿ ದಾಟಿದೆ. ಆ ಪೈಕಿ 38,257 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ.

ಇದುವರೆಗೆ 29,54,513 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 7,306 ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ 0.30 ರಷ್ಟಿದ್ದು, ಮರಣ ಪ್ರಮಾಣ ಶೇ 0.62 ರಷ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 190 ಹೊಸ ಪ್ರಕರಣ ಪತ್ತೆಯಾಗಿದ್ದು, ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ 20, ಕೊಡಗು 26, ಕೊಡಗು 21, ಮೈಸೂರು 14 ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೊಸದಾಗಿ 10 ಪ್ರಕರಣಗಳು ದೃಢರಟ್ಟಿವೆ.

Source link

Leave a Reply

Your email address will not be published. Required fields are marked *