ಬೆಂಗಳೂರು: ಬಹುಭಾಷಾ ನಟಿ ಮೀರಾ ಜಾಸ್ಮಿನ್ ಅವರು ಗ್ಲಾಮರಸ್ ಫೋಟೊಶೂಟ್ ಮಾಡಿಸಿಕೊಳ್ಳುವ ಮೂಲಕ ಸುದ್ದಿಯಲ್ಲಿದ್ದಾರೆ.
ಸದ್ಯ ದುಬೈ ಪ್ರವಾಸದಲ್ಲಿರುವ ಜಾಸ್ಮಿನ್, ಕಪ್ಪು ಬಣ್ಣದ ಜಾಕೆಟ್ ಮತ್ತು ಪ್ಯಾಂಟ್‌ನಲ್ಲಿ ಕ್ಯಾಮರಾಗೆ ಪೋಸ್ ನೀಡಿದ್ದಾರೆ. ಈ ಫೋಟೊವನ್ನು ಹೃದಯದ ಎಮೋಜಿಯೊಂದಿಗೆ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಇತ್ತೀಚಿಗಷ್ಟೇ ಇನ್‌ಸ್ಟಾಗ್ರಾಮ್‌ನಲ್ಲಿ ಖಾತೆ ತೆರೆದಿರುವ ಜಾಸ್ಮಿನ್, ಪ್ರವಾಸ, ಸಮಾರಂಭದ ಹೊಸ ಫೋಟೊ, ವಿಡಿಯೊಗಳನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳ ಗಮನ ಸೆಳೆಯುತ್ತಿದ್ದಾರೆ.
ರಾಷ್ಟ್ರ ಪ್ರಶಸ್ತಿ ವಿಜೇತೆ ಮೀರಾ ಜಾಸ್ಮಿನ್, ಜಯರಾಂ ನಾಯಕನಾಗಿ ನಟಿಸಿರುವ ಸತ್ಯನ್ ಅಂತಿಕ್ಕಾಡ್ ನಿರ್ದೇಶನದ ‘ಮಕಲ್’ ಚಿತ್ರದ ಮೂಲಕ ಮಲಯಾಳಂ ಚಿತ್ರರಂಗಕ್ಕೆ ಮರುಪ್ರವೇಶ ಮಾಡಲು ಸಜ್ಜಾಗಿದ್ದಾರೆ.
ಮೀರಾ ಜಾಸ್ಮಿನ್ ಅವರು 2004ರಲ್ಲಿ ತೆರೆಕಂಡ ಪುನೀತ್ ರಾಜ್‌ಕುಮಾರ್ ಅಭಿನಯದ ‘ಮೌರ್ಯ’ ಹಾಗೂ 2006ರಲ್ಲಿ ‘ಅರಸು’ ಚಿತ್ರದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ಬಳಿಕ ‘ದೇವರು ಕೊಟ್ಟ ತಂಗಿ’, ‘ಹೂ’ ಚಿತ್ರಗಳಲ್ಲಿ ಅಭಿನಯಿಸಿದ್ದರು.
ಓದಿ… ನಟ ಜಗ್ಗೇಶ್ ಅಭಿನಯದ ‘ತೋತಾಪುರಿ’ ಚಿತ್ರದ ‘ಬಾಗ್ಲು ತೆಗಿ ಮೇರಿ ಜಾನ್’ ಹಾಡಿನ ಮೋಡಿ
Read More…Source link
[wpas_products keywords=”deal of the day party wear for men wedding shirt”]