Karnataka news paper

Hijab Row: ಹಿಜಾಬ್ ಪ್ರಕರಣಕ್ಕೆ ವಿಸ್ತೃತ ಪೀಠ ರಚನೆ: ವಿಚಾರಣೆ ನಡೆಸುವ ನ್ಯಾಯಮೂರ್ತಿಗಳು ಯಾರು?


ಬೆಂಗಳೂರು: ರಾಜ್ಯಾದ್ಯಂತ ಭುಗಿಲೆದ್ದಿರುವ ಹಿಜಾಬ್ ವಿವಾದ ಪ್ರಕರಣದ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ಗುರುವಾರ ವಿಶೇಷ ಪೀಠ ರಚನೆ ಮಾಡಿದೆ. ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರ ಏಕಸದಸ್ಯ ಪೀಠವು ಈ ಪ್ರಕರಣ ವೈಯಕ್ತಿಕ ಕಾನೂನು ಹಾಗೂ ಸಂವಿಧಾನಾತ್ಮಕ ವಿಚಾರ ಎರಡನ್ನೂ ಒಳಗೊಂಡಿರುವುದರಿಂದ ವಿಸ್ತೃತ ಪೀಠ ವಿಚಾರಣೆ ನಡೆಸಿದರೆ ಹೆಚ್ಚು ಸೂಕ್ತವಾಗಿರಲಿದೆ ಎಂದು ತೀರ್ಮಾನವನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಬಿಟ್ಟಿದ್ದರು.

ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರು ಮೂವರು ನ್ಯಾಯಮೂರ್ತಿಗಳ ವಿಸ್ತೃತ ಪೀಠವನ್ನು ರಚನೆ ಮಾಡಿದ್ದಾರೆ. ಈ ಪೀಠವು ಸಿಜೆ ರಿತುರಾಜ್ ಅವಸ್ಥಿ, ನ್ಯಾ. ಕೃಷ್ಣ ದೀಕ್ಷಿತ್ ಮತ್ತು ನ್ಯಾ. ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ ಅವರನ್ನು ಒಳಗೊಂಡಿದೆ.
Hijab Row: ವಿಸ್ತೃತ ಪೀಠಕ್ಕೆ ಹಿಜಾಬ್ ವಿವಾದ ಪ್ರಕರಣ ವರ್ಗಾವಣೆ: ತ್ರಿಶಂಕು ಸ್ಥಿತಿಯಲ್ಲಿ ವಿದ್ಯಾರ್ಥಿಗಳು

ಗುರುವಾರ ಮಧ್ಯಾಹ್ನ ಹಿಜಾಬ್ ಪ್ರಕರಣದ ವಿಚಾರಣೆ ಆರಂಭವಾಗಲಿದೆ. ಶಾಲೆ ಹಾಗೂ ಕಾಲೇಜುಗಳಲ್ಲಿ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು ಸಮವಸ್ತ್ರದೊಟ್ಟಿಗೆ ಹಿಜಾಬ್ ಧರಿಸಿ ಬರಲು ಕಾನೂನಿನ ಅಡಿ ಅವಕಾಶ ಇದೆಯೇ ಅಥವಾ ಇಲ್ಲವೇ ಎಂಬುದನ್ನು ಹೈಕೋರ್ಟ್ ನಿರ್ಧರಿಸಲಿದೆ. ಇದಕ್ಕೂ ಮೊದಲು ಈ ಪ್ರಕರಣದಲ್ಲಿ ಮಧ್ಯಂತರ ಪರಿಹಾರಕ್ಕೆ ಕೂಡ ಮನವಿ ಮಾಡಲಾಗಿದೆ.

ಹಿಜಾಬ್ ವಿವಾದ ಕೆಲವು ಜಿಲ್ಲೆಗಳಲ್ಲಿ ಹಿಂಸಾತ್ಮಕ ಸ್ವರೂಪ ಪಡೆದುಕೊಂಡಿದ್ದರಿಂದ ರಾಜ್ಯ ಸರ್ಕಾರವು ಕಾಲೇಜುಗಳಿಗೆ ರಜೆ ಘೋಷಿಸಿತ್ತು. ಸೋಮವಾರ ಕಾಲೇಜುಗಳು ಮತ್ತೆ ಆರಂಭವಾಗಬೇಕಿದೆ. ಹೀಗಾಗಿ ಅದಕ್ಕೂ ಮುನ್ನ ವಿದ್ಯಾರ್ಥಿಗಳು ತರಗತಿಗೆ ಹಾಜರಾಗಲು ಅವಕಾಶ ನೀಡುವ ಸಂಬಂಧ ಮಧ್ಯಂತರ ಪರಿಹಾರ ಆದೇಶ ನೀಡಬೇಕೆಂದು ಅರ್ಜಿದಾರರ ಪರ ವಕೀಲರು ಮನವಿ ಮಾಡಿದ್ದರು.



Read more

[wpas_products keywords=”deal of the day sale today offer all”]