Karnataka news paper

ನಲಪಾಡ್‌ಗೆ ಯುವ ಕಾಂಗ್ರೆಸ್‌ ಪಟ್ಟ; ಪದಗ್ರಹಣ ವೇಳೆ ರಕ್ಷಾರಾಮಯ್ಯ ಗೈರು! ಮತ್ತೊಮ್ಮೆ ಅಸಮಾಧಾನ ಸ್ಫೋಟ


ಬೆಂಗಳೂರು: ಕರ್ನಾಟಕ ಪ್ರದೇಶ‌ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಮೊಹಮ್ಮದ್ ನಲಪಾಡ್ ಗುರುವಾರ ಅಧಿಕಾರ ಸ್ವೀಕಾರ ಮಾಡಿದರು. ಆದರೆ ಅಧಿಕಾರ ಹಸ್ತಾಂತರ ಮಾಡಬೇಕಾದ ಯೂತ್‌ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ರಕ್ಷಾ ರಾಮಯ್ಯ ಕಾರ್ಯಕ್ರಮಕ್ಕೆ ಗೈರಾಗಿದ್ದು, ಈ ಮೂಲಕ ಯೂತ್‌ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಅಸಮಾಧಾನ ಮತ್ತೊಮ್ಮೆ ಬಹಿರಂಗಗೊಂಡಿದೆ.

ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಪ್ರಮುಖ ನಾಯಕರ ಸಮ್ಮುಖದಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಿತು. ಅಧಿಕಾರ ಹಸ್ತಾಂತರ ಕಾರ್ಯಕ್ರಮಕ್ಕೆ ಯೂತ್ ಕಾಂಗ್ರೆಸ್ ನಿಕಟ ಪೂರ್ವ ಅಧ್ಯಕ್ಷ ರಕ್ಷಾ ರಾಮಯ್ಯ ಅವರನ್ನು ಆಹ್ವಾನಿಸಲಾಗಿತ್ತು. ಆದರೆ ರಕ್ಷಾ ರಾಮಯ್ಯ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ. ಇದರ ಪರಿಣಾಮ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಹಾಗೂ ಇತರ ಮುಖಂಡರಿಂದ ನಲಪಾಡ್ ಯೂತ್ ಕಾಂಗ್ರೆಸ್ ಧ್ವಜ ಪಡೆದುಕೊಳ್ಳುವ ಮೂಲಕ ಅಧಿಕಾರ ಸ್ವೀಕಾರ ಮಾಡಿದರು.
ಯುವ ಕಾಂಗ್ರೆಸ್‌ ನಾಯಕತ್ವ ನಲಪಾಡ್‌ಗೆ; ರಾಷ್ಟ್ರ ಸಂಘಟನೆಗೆ ರಕ್ಷಾ ರಾಮಯ್ಯ?
ಯೂತ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ವಿಚಾರವಾಗಿ ನಲಪಾಡ್ ಹಾಗೂ ರಕ್ಷಾ ರಾಮಯ್ಯ ನಡುವೆ ಭಿನ್ನಾಭಿಪ್ರಾಯ ತಲೆದೋರಿತ್ತು. ಯೂತ್ ಕಾಂಗ್ರೆಸ್ ಚುನಾವಣೆಯಲ್ಲಿ ನಲಪಾಡ್‌ ಹೆಚ್ಚಿನ ಮತ ಬಂದಿದ್ದರೂ ಅಧ್ಯಕ್ಷ ಸ್ಥಾನ ಸಿಕ್ಕಿರಲಿಲ್ಲ. ಭಾರೀ ಮತಗಳಿಕೆ ಹಿಂದೆ ಮೊಹಮ್ಮದ್‌ ನಲಪಾಡ್‌ ಗೆಳೆಯ ಅಂತಾರಾಷ್ಟ್ರೀಯ ಹ್ಯಾಕರ್‌ ಶ್ರೀಕಿ ಅಲಿಯಾಸ್‌ ಶ್ರೀಕೃಷ್ಣ ಭಟ್‌ ಕೈವಾಡ ಇರುವ ಗುಮಾನಿಯೂ ಇತ್ತು. ಹ್ಯಾಕ್‌ ಮಾಡಿ ನಕಲಿ ಮತದಾನ ಮಾಡಲಾಗಿದೆ ಎಂಬ ಶಂಕೆಯೂ ವ್ಯಕ್ತವಾಗಿತ್ತು. ಈ ಬಗ್ಗೆ ಗಂಭೀರವಾದ ಚರ್ಚೆಗಳು ನಡೆದಿದ್ದವು. ಇನ್ನೊಂದೆಡೆ ನಲಪಾಡ್‌ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿದ್ದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ರಕ್ಷಾ ರಾಮಯ್ಯಗೆ ಅಧಿಕಾರ ನೀಡಲು ನಿರ್ಧಾರ ಮಾಡಿದ್ದರು. ಇದೀಗ ಕೊನೆಗೂ ನಲಪಾಡ್ ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ.
ಸಿಎಂ ಸ್ಥಾನ ಬಿಟ್ಟುಬಿಡಿ, ಮಂತ್ರಿ ಸ್ಥಾನದ ಮೇಲೂ ಕಣ್ಣಿಟ್ಟಿಲ್ಲ! ವಿ.ಕ ವೆಬ್‌ ಸಂದರ್ಶನದಲ್ಲಿ ಬಿ.ಕೆ ಹರಿಪ್ರಸಾದ್
ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ಬಳಿಕ ಮಾತನಾಡಿದ ನಲಪಾಡ್‌, ‘ಒಂದೊಂದು ದಿನ ಕೂಡಾ ನನಗೆ ಪಾಠ.‌ ಕಳೆದ ವರ್ಷ ಫಲಿತಾಂಶ ಬಂದರೂ ಇವತ್ತು ಅಧಿಕಾರ ಸ್ವೀಕಾರ ಮಾಡುತ್ತಿದ್ದೇನೆ. ಕಳೆದ ಒಂದು ವರ್ಷದಲ್ಲಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಛಲ ತೊಟ್ಟಿದ್ದೆ. ಯೂತ್ ಕಾಂಗ್ರೆಸನ್ನು ಯಾವ ಧಿಕ್ಕಿನಲ್ಲಿ ಕೊಂಡೊಯ್ಯಬೇಕಿದೆ ಎಂಬ ಅಜೆಂಡಾ ಸ್ಪಷ್ಟವಾಗಿದೆ’ ಎಂದರು.

ನನ್ನಿಂದ ತಪ್ಪೊಂದಾಗಿತ್ತು ಕ್ಷಮಿಸಿ!
ಇದೇ ಸಂದರ್ಭದಲ್ಲಿ ಭಾವನಾತ್ಮಕವಾಗಿ ಮಾತನಾಡಿದ ಅವರು, ‘ನನ್ನಿಂದ ಒಂದು ತಪ್ಪು ಆಗಿತ್ತು. ಯೂತ್ ಕಾಂಗ್ರೆಸ್ ಚುನಾವಣೆಯಲ್ಲಿ ಗೆದ್ದರೂ ಅಧಿಕಾರ ಸಿಗದಿದ್ದಾಗ ತಪ್ಪು ಅರಿವಾಯಿತು. ಆದರೆ ನಿಮ್ಮ ಮನೆ ಮಗನಾಗಿ ತಪ್ಪನ್ನು ಕ್ಷಮಿಸಬೇಕು’ ಎಂದು ಮನವಿ ಮಾಡಿದರು.



Read more

[wpas_products keywords=”deal of the day sale today offer all”]