Online Desk
ಬೆಂಗಳೂರು: ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಕೋರಿ ಮುಷ್ಕರದಲ್ಲಿ ಭಾಗಿಯಾಗಿದ್ದ ಸಾರಿಗೆ ನೌಕರರನ್ನು ನೌಕರಿಯಿಂದ ವಜಾ ಮಾಡಲಾಗಿತ್ತು. ಇದೀಗ ಅವರನ್ನೆಲ್ಲ ಮರು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.
ಪ್ರತಿಭಟನೆ ವೇಳೆ ಭಾಗಿಯಾಗಿದ್ದ ನೌಕರರನ್ನು ನೌಕರಿಯಿಂದ ವಜಾ ಮಾಡಲಾಗಿತ್ತು. ಇದೀಗ ಅವರನ್ನೆಲ್ಲ ಮರು ನೇಮಕ ಮಾಡಿಕೊಳ್ಳಲಾಗುತ್ತಿದೆ. ಇಂದು 100 ನೌಕರರು, ನಾಳೆ 200 ನೌಕರರ ಮರು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಕೋರಿ ಮುಷ್ಕರ ನಡೆಸಿದ್ದ ನೌಕರರಲ್ಲಿ ಈಗಾಗಲೇ 1500 ಜನರನ್ನು ಅಮಾನತುಗೊಂಡವರನ್ನು ವಾಪಸ್ ಪಡೆಯಲಾಗಿದೆ. 1353 ಜನರು ವಜಾಗೊಂಡಿದ್ದಾರೆ, ವಜಾಗೊಂಡವರನ್ನು ವಾಪಸ್ ನೇಮಕ ಮಾಡಿಕೊಳ್ಳಲು ಕಾನೂನಿನಲ್ಲಿ ಅವಕಾಶ ಇಲ್ಲ. ಮಾನವೀಯತೆಯ ದೃಷ್ಟಿಯಿಂದ. ಮರು ನೇಮಕ ಆದೇಶ ನೀಡಲಾಗುತ್ತಿದೆ, ಮೊದಲ ಹಂತದಲ್ಲಿ 100 ಜನರಿಗೆ ನೇಮಕ ಮಾಡಲಾಗುತ್ತಿದೆ ಉಳಿದವರಿಗೆ ಹಂತ ಹಂತವಾಗಿ ಮರು ನೇಮಕ ಮಾಡಲಾಗುತ್ತಿದೆ. ಈ ತಿಂಗಳ ಒಳಗೆ 700 ಮಂದಿಗೆ ನೇಮಕಾತಿ ನೀಡಲಾಗುವುದು ಎಂದು ಸಾರಿಗೆ ಸಚಿವ ಶ್ರೀರಾಮುಲು ತಿಳಿಸಿದರು.
ಸರ್ಕಾರದ ವಿರುದ್ಧ ಪ್ರತಿಭಟನೆ ಮುಷ್ಕರ ಮಾಡಿದರೆ ನಿಮ್ಮನ್ನು ರಕ್ಷಣೆ ಮಾಡುವುದು ಕಷ್ಟ. ಸರ್ಕಾರದ ಬಗ್ಗೆ ನಿಮಗೆ ಗೌರವ ಇರಬೇಕು. ಇನ್ನು ಮುಂದೆ ಪ್ರತಿ ತಿಂಗಳು ಸಂಬಳ ದೊರೆಯುವಂತೆ ನೋಡಿಕೊಳ್ಳಲಾಗುವುದು. ಈಗ ನೇಮಕಗೊಂಡವರು ಇನ್ನುಮುಂದೆ ಮುಷ್ಕರಕ್ಕೆ ಹೋಗಬಾರದು ಎಂದು ಷರತ್ತು ವಿಧಿಸಲಾಗಿದೆ. ನೌಕರರು ಮುಷ್ಕರಕ್ಕೆ ಹೋದರೆ ನೌಕರಿ ಕಳೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದ್ದರು.
ಇದನ್ನೂ ಓದಿ: ಸಾರಿಗೆ ಇಲಾಖೆಯಲ್ಲಿ 30 ಜನಸ್ನೇಹಿ ಸಂಪರ್ಕ ರಹಿತ ಸೇವೆಗಳು ಲಭ್ಯ: ಮುಖ್ಯಮಂತ್ರಿ ಬೊಮ್ಮಾಯಿ
ಸಾರಿಗೆ ನೌಕರರು ಈ ಹಿಂದೆ ತಮ್ಮ ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಒತ್ತಾಯಿಸಿ ಅನಿರ್ಧಿಷ್ಠಾವಧಿ ಮುಷ್ಕರವನ್ನ ನಡೆಸಿದ್ದರು. ಈ ಸಂದರ್ಭದಲ್ಲಿ ನೌಕರರು ಕೆಲಸಕ್ಕೆ ಹಾಜರಾಗದೇ ಬಸ್‍ಗಳು ರಸ್ತೆಗಿಳಿದಿರಲಿಲ್ಲ, ನೌಕರರು ಮುಷ್ಕರ ಕೈಗೊಂಡ ಸಂದರ್ಭದಲ್ಲಿ ಸರ್ಕಾರ ಮುಷ್ಕರ ನಿರತರಿಗೆ ಎಚ್ಚರಿಕೆಯನ್ನ ನೀಡಿತ್ತು, ಸರ್ಕಾರದ ಎಚ್ಚರಿಕೆಗೆ ಜಗ್ಗದೆ ಮುಷ್ಕರ ಮುಂದುವರೆಸಿದ ಕಾರಣ ಅಂದಿನ ಸರ್ಕಾರ ಶಿಸ್ತುಕ್ರಮ ಕೈಗೊಂಡಿತ್ತು.
Read more
[wpas_products keywords=”deal of the day”]