Karnataka news paper

ಚಾಮುಂಡೇಶ್ವರಿ ಕ್ಷೇತ್ರಕ್ಕೆ ನಾನೇ ಬರ್ತೇನೆ: ಕುಮಾರಸ್ವಾಮಿ ರಾಜಕೀಯ ದಾಳ


ಮೈಸೂರು:ಚಾಮುಂಡೇಶ್ವರಿ ಕ್ಷೇತ್ರದ ರಾಜಕೀಯ ಅಖಾಡದಲ್ಲಿ ಮಿಂಚಿನ ಸಂಚಲನ ಉಂಟಾಗಿದೆ. ಮುಂದಿನ ಚುನವಣೆಯಲ್ಲಿ ಇಲ್ಲಿನ ಅಭ್ಯರ್ಥಿ ನಾನೇ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೊಸ ದಾಳ ಹಾಕಿದ್ದಾರೆ.

ಚಾಮುಂಡೇಶ್ವರಿ ಕ್ಷೇತ್ರದ ಸಮಸ್ಯೆ ಬಗೆಹರಿಸಿ, ಮುಂದಿನ ಚುನಾವಣೆಗೆ ಚಾಮುಂಡೇಶ್ವರಿಗೆ ಯಾರು ಬರ್ತಾರೆ. ಹೀಗೆ ಜೆಡಿಎಸ್ ಕಾರ್ಯಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ, ನಾನೇ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಬರುತ್ತೇನೆ ಎನ್ನುವ ಮೂಲಕ ಚಾಮುಂಡೇಶ್ವರಿ ಕ್ಷೇತ್ರದ ಚುನಾವಣಾ ಕಣಕ್ಕೆ ಹೊಸ ಟ್ವಿಸ್ಟ್ ಕೊಟ್ಟಿದ್ದಾರೆ.

ಚಾಮುಂಡೇಶ್ವರಿ ಕ್ಷೇತ್ರಕ್ಕೆ ಹೊಸ ನಾಯಕತ್ವದ ಹುಡುಕಾಟ: ಜಿಟಿಡಿಗೆ ಎಚ್‌ಡಿಕೆ ಸಂದೇಶ!

ಮೈಸೂರಿನಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಅನಿತಾ ಕುಮಾರಸ್ವಾಮಿ ಸ್ಪರ್ಧೆ ಬೇಡ ಎಂದಿದ್ದೇನೆ. ನಾನು, ಅವರು ಚರ್ಚೆ ಮಾಡಿದ್ದೇವೆ. ಕುಟುಂಬ ರಾಜಕಾರಣದ ಹೆಸರಿನಲ್ಲಿ ನಮ್ಮ ಮೇಲೆ ಅಪಪ್ರಚಾರ ನಡೆಯುತ್ತಿದೆ. ಈ ಅಪಪ್ರಚಾರದಿಂದ ದೂರವಾಗಲು ಇಂತಹ ಚರ್ಚೆಯನ್ನ ನಾನು ಅನಿತಾ ಕುಮಾರಸ್ವಾಮಿ ಮಾಡಿದ್ದೇವೆ. ಈ ಬಗ್ಗೆ ಅಂತಿಮ ತೀರ್ಮಾನ ಚುನಾವಣೆ ಘೋಷಣೆ ನಂತರ ಮಾಡುತ್ತೇವೆ ಎಂದರು.

ನಿಖಿಲ್ ಕುಮಾರಸ್ವಾಮಿಯನ್ನು ರಾಜಕೀಯ ಕ್ಷೇತ್ರಕ್ಕೆ ತರುವುದು ನನಗೆ ಇಷ್ಟವಿರಲಿಲ್ಲ. ಮುಖಂಡರ ಒತ್ತಡದ ಮೇರೆಗೆ ಅವರನ್ನ ರಾಜಕಾರಣಕ್ಕೆ ತಂದೆ. ಕುಟುಂಬ ರಾಜಕಾರಣದ ವಿಚಾರದಲ್ಲಿ ನಾನು ಈಗ ಕೇವಲ ನನ್ನ ಕುಟುಂಬದ ಬಗ್ಗೆ ಮಾತ್ರ ಮಾತನಾಡುತ್ತೇನೆ. ನಾನು ನಮ್ಮ ಸಹೋದರರು ಬೇರೆಯಾಗಿದ್ದೇವೆ. ಹಾಗಾಗಿ ನಾನು, ನನ್ನ ಪತ್ನಿ, ನನ್ನ ಮಗನ ಬಗ್ಗೆ ಮಾತ್ರ ಪ್ರಸ್ತಾಪ ಮಾಡುತ್ತಿದ್ದೇನೆ. ಒಟ್ಟಾರೆ ಎಚ್.ಡಿ ದೇವೇಗೌಡರ ಕುಟುಂಬದ ಬಗ್ಗೆ ನಾನು ಮಾತನಾಡುತ್ತಿಲ್ಲ. ನನ್ನ ಕುಟುಂಬದ ಬಗ್ಗೆ ಮಾತನಾಡುತ್ತಿದ್ದೇನೆ ಎಂದು ಎಚ್.ಡಿ ಕುಮಾರಸ್ವಾಮಿ ಹೇಳಿದರು.

ಬಾದಾಮಿ ಜನ ಒಳ್ಳೆಯವರು, ಚಾಮುಂಡೇಶ್ವರಿ ಕ್ಷೇತ್ರದವರು ನನ್ನನ್ನು ಸೋಲಿಸಿದರು; ಸಿದ್ದರಾಮಯ್ಯ

ಹಿಜಾಬ್, ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಎಚ್.ಡಿ ಕುಮಾರಸ್ವಾಮಿ, ಈ ವಿವಾದ ದೊಡ್ಡದಾಗಬೇಕು ಎಂಬುದು ಸರಕಾರದ ಆಶಯ. ಕಿಡಿಯಂತಿದ್ದ ವಿವಾದ ಈಗ ಬೆಂಕಿಯಾಗಿ ರಾಜ್ಯದ ತುಂಬ ಹಬ್ಬಲು ಸರಕಾರವೇ ಕಾರಣ. ಸರಕಾರ ತನ್ನ ಆಡಳಿತದ ವೈಫಲ್ಯ ಮುಚ್ಚಿಕೊಳ್ಳಲು ಈ ವಿಚಾರವನ್ನು ದೊಡ್ಡದು ಮಾಡುತ್ತಿದೆ. ಮುಸ್ಲಿಮರನ್ನು ಕಾಂಗ್ರೆಸ್‌ ಎತ್ತಿಕಟ್ಟಿ ರಾಜಕಾರಣ ಮಾಡುತ್ತಿದೆ. ಬಿಜೆಪಿಯ ಅಂಗ ಸಂಸ್ಥೆಗಳು ಹಿಂದೂಗಳನ್ನ ಎತ್ತಕಟ್ಟಿ ರಾಜಕಾರಣ ಮಾಡುತ್ತಿದ್ದಾರೆ. ಈ ಎರಡೂ ಪಕ್ಷಗಳ ಉದ್ದೇಶಕ್ಕೆ ವಿದ್ಯಾರ್ಥಿಗಳು ಬಲಿಯಾಗಬಾರದು. ಈಗ ಗಲಾಟೆ ಮಾಡಿದ ವಿದ್ಯಾರ್ಥಿಗಳ ಮೇಲೆ ಮುಂದೆ ಕೇಸ್ ಬೀಳುವುದು ನಿಶ್ಚಿತ. ಈಗ ಬಂಧನವಾಗಿರುವ ವಿದ್ಯಾರ್ಥಿಗಳಲ್ಲಿ ಯಾರು ಬಿಜೆಪಿ, ಕಾಂಗ್ರೆಸ್ ಮುಖಂಡರ ಮಕ್ಕಳಿಲ್ಲ. ಇದನ್ನು ವಿದ್ಯಾರ್ಥಿಗಳು ಅರ್ಥ ಮಾಡಿಕೊಳ್ಳಬೇಕು ಎಂದು ಕುಮಾರಸ್ವಾಮಿ ತಿಳಿಸಿದರು.



Read more

[wpas_products keywords=”deal of the day sale today offer all”]