Online Desk
ಬೆಂಗಳೂರು: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಮೊಹಮ್ಮದ್ ನಲಪಾಡ್ ಗುರುವಾರ ಅಧಿಕಾರ ಸ್ವೀಕಾರ ಮಾಡಿದ್ದು, ಅಧಿಕಾರ ಹಸ್ತಾಂತರ ಮಾಡಬೇಕಿದ್ದ ಮಾಜಿ ಅಧ್ಯಕ್ಷ ರಕ್ಷಾ ರಾಮಯ್ಯ ಅವರು ಕಾರ್ಯಕ್ರಮಕ್ಕೆ ಗೈರು ಹಾಜರಾಗಿದ್ದು ಹಲವು ಊಹಾಪೋಹಗಳಿಗೆ ದಾರಿ ಮಾಡಿಕೊಟ್ಟಿದೆ.
ಬೆಂಗಳೂರಿನ ಕ್ವೀನ್ಸ್ ರಸ್ತೆ ಬಳಿಯ ಕೆಪಿಸಿಸಿ ಕಚೇರಿ ಹಿಂಭಾಗದಲ್ಲಿರುವ ನೂತನ ಕಾಂಗ್ರೆಸ್ ಕಟ್ಟಡದಲ್ಲಿ ಮೊಹಮ್ಮದ್ ಹ್ಯಾರಿಸ್ ನಲಪಾಡ್ ರಾಜ್ಯ ಯುವ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದು, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಪ್ರಮುಖ ನಾಯಕರ ಸಮ್ಮುಖದಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಿತು.
ಅಧಿಕಾರ ಹಸ್ತಾಂತರ ಕಾರ್ಯಕ್ರಮಕ್ಕೆ ಯೂತ್ ಕಾಂಗ್ರೆಸ್ ನಿಕಟ ಪೂರ್ವ ಅಧ್ಯಕ್ಷ ರಕ್ಷಾ ರಾಮಯ್ಯ ಅವರನ್ನು ಆಹ್ವಾನಿಸಲಾಗಿತ್ತು. ಆದರೆ ರಕ್ಷಾ ರಾಮಯ್ಯ ಕಾರ್ಯಕ್ರಮಕ್ಕೆ ಗೈರಾಗಿರುವುದು ಕಂಡು ಬಂದಿದೆ.
ರಕ್ಷಾ ರಾಮಯ್ಯ ಅವರು ಗೈರು ಹಾಜರಾದ ಕಾರಣ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಹಾಗೂ ಇತರ ಮುಖಂಡರಿಂದ ಯೂತ್ ಕಾಂಗ್ರೆಸ್ ಧ್ವಜ ಪಡೆದುಕೊಳ್ಳುವ ಮೂಲಕ ನಲಪಾಡ್ ಅಧಿಕಾರ ಸ್ವೀಕಾರ ಮಾಡಿದರು.
Mohammed Haris Nalapad took charge as state youth congress president before KPCC president DK Shiva kumar and CLP leader Siddaramiah @XpressBengaluru @santwana99 @AshwiniMS_TNIE @NewIndianXpress #Congress #kpcc pic.twitter.com/5xV9VZVmFQ
— vinodkumart (@vinodkumart5) February 10, 2022
ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ನಲಪಾಡ್ ಅವರು, ಒಂದೊಂದು ದಿನ ಕೂಡಾ ನನಗೆ ಪಾಠವಾಗಿತ್ತು. ಕಳೆದ ವರ್ಷ ಫಲಿತಾಂಶ ಬಂದರೂ ಇವತ್ತು ಅಧಿಕಾರ ಸ್ವೀಕಾರ ಮಾಡುತ್ತಿದ್ದೇನೆ. ಕಳೆದ ಒಂದು ವರ್ಷದಲ್ಲಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಛಲ ತೊಟ್ಟಿದ್ದೆ. ಯೂತ್ ಕಾಂಗ್ರೆಸನ್ನು ಯಾವ ದಿಕ್ಕಿನಲ್ಲಿ ಕೊಂಡೊಯ್ಯಬೇಕಿದೆ ಎಂಬ ಅಜೆಂಡಾ ಸ್ಪಷ್ಟವಾಗಿದೆ ಎಂದು ಹೇಳಿದರು.
ಇದೇ ವೇಳೆ ಭಾವನಾತ್ಮಕವಾಗಿ ಮಾತನಾಡಿದ ಅವರು, ‘ನನ್ನಿಂದ ಒಂದು ತಪ್ಪಾಗಿತ್ತು. ಯೂತ್ ಕಾಂಗ್ರೆಸ್ ಚುನಾವಣೆಯಲ್ಲಿ ಗೆದ್ದರೂ ಅಧಿಕಾರ ಸಿಗದಿದ್ದಾಗ ಆ ತಪ್ಪಿನ ಅರಿವಾಯಿತು. ಆದರೆ ನಿಮ್ಮ ಮನೆ ಮಗನಾಗಿ ತಪ್ಪನ್ನು ಕ್ಷಮಿಸಬೇಕು’ ಎಂದು ಮನವಿ ಮಾಡಿದರು.
Read more
[wpas_products keywords=”deal of the day”]