Karnataka news paper

ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣ: ಕೇಂದ್ರ ಸಚಿವರ ಪುತ್ರ ಆಶಿಶ್ ಮಿಶ್ರಾಗೆ ಜಾಮೀನು ಮಂಜೂರು


Online Desk

ಅಲಹಾಬಾದ್: ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ, ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾಗೆ ಅಲಹಾಬಾದ್ ಹೈಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿದೆ.

ಕಳೆದ ವರ್ಷ ಅಕ್ಟೋಬರ್‌ 3ರಂದು ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಆಶಿಶ್‌ ಮಿಶ್ರಾ ಹಾಗೂ ಅವರ ಬೆಂಗಾವಲು ಪಡೆಯ ವಾಹನಗಳು ಚಲಿಸಿದ್ದವು. ಘಟನೆ ಬಳಿಕ ಹಿಂಸಾಚಾರ ಸ್ಥಳದಲ್ಲಿ ಹಿಂಸಾಚಾರ ನಡೆದಿತ್ತು. ಘಟನೆಯಲ್ಲಿ ನಾಲ್ವರು ರೈತರು ಸೇರಿದಂತೆ 8 ಮಂದಿ ಸಾವನ್ನಪ್ಪಿದ್ದರು.

ಪ್ರಕರಣ ದೇಶದಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಈ ಸಂಬಂಧ ಹೇಳಿಕೆ ನೀಡಿದ್ದ ವಿಶೇಷ ತನಿಖಾ ತಂಡ ಲಖಿಂಪುರ ಖೇರಿ ಹಿಂಸಾಚಾರ ಪೂರ್ವಯೋಜಿತ ಎಂದು ಹೇಳಿತ್ತು. 

ಇದನ್ನೂ ಓದಿ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಅಜಯ್ ಮಿಶ್ರಾ ವಿರುದ್ಧ ಸ್ಪರ್ಧೆ: ಲಖೀಂಪುರ ಹಿಂಸಾಚಾರ ಸಂತ್ರಸ್ತ ರೈತನ ಮಗ

ಪ್ರಕರಣಕ್ಕೆ ಸಂಬಂಧಿಸಿ ಬಂಧನದಲ್ಲಿರುವವರ ಮೇಲೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 279 (ಅಜಾಗರೂಕತೆಯಿಂದ ವಾಹನ ಚಾಲನೆ), 338 (ನಿರ್ಲಕ್ಷ್ಯದಿಂದ ಗಂಭೀರ ಗಾಯಗೊಳ್ಳಲು ಕಾರಣವಾಗುವುದು) ಹಾಗೂ 340 ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣರಾಗುವುದು) ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಇದರ ಬದಲಾಗಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 307ರ (ಕೊಲೆ ಯತ್ನ) ಅಡಿ ಪ್ರಕರಣ ದಾಖಲಿಸಬೇಕು ಎಂದು ಎಸ್‌ಐಟಿ ವಿನಂತಿ ಮಾಡಿತ್ತು.

ಉತ್ತರ ಪ್ರದೇಶದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದ್ದು, ಈ ನಡುವಲ್ಲೇ ಆಶಿಶ್ ಮಿಶ್ರಾಗೆ ಜಾಮೀನು ಮಂಜೂರಾಗಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ. 



Read more

[wpas_products keywords=”deal of the day”]