Karnataka news paper

ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಹಂಪಿ ಉತ್ಸವದ ಮಾದರಿಯಲ್ಲಿ ಬಳ್ಳಾರಿ ಉತ್ಸವ


The New Indian Express

ಬಳ್ಳಾರಿ: ಇತಿಹಾಸ ಪ್ರಸಿದ್ಧ ಹಂಪಿ ಉತ್ಸವದ ಮಾದರಿಯಲ್ಲಿ ಜಿಲ್ಲೆಯ ಪ್ರವಾಸಿ ಸ್ಥಳಗಳನ್ನು ಉತ್ತೇಜಿಸುವ ಮತ್ತು ಸಂಸ್ಕೃತಿಯನ್ನು ಹೆಚ್ಚಿನಮಟ್ಟದಲ್ಲಿ ಪ್ರತಿಬಿಂಬಿಸುವ ದೃಷ್ಟಿಯಿಂದ ಬಳ್ಳಾರಿ ಉತ್ಸವವನ್ನು ಆಯೋಜಿಸಲು ಜಿಲ್ಲಾಡಳಿತ ಮುಂದಾಗಿದೆ.

ಬಳ್ಳಾರಿ ಜಿಲ್ಲೆ ವಿಭಜನೆಯ ನಂತರ ಜಿಲ್ಲೆಯ ಪ್ರವಾಸಿ ತಾಣಗಳನ್ನು ಜನಪ್ರಿಯಗೊಳಿಸಲು ಒತ್ತು ನೀಡಲಾಗಿದೆ. ನೂತನ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅವರು ಬಳ್ಳಾರಿ ಉತ್ಸವದ ಆಯೋಜನೆಗೆ ಉತ್ಸುಕತೆ ತೋರಿದ್ದು, ಉತ್ಸವ ನಡೆಸಲು ಸಿದ್ಧತೆ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಈ ಕುರಿತು ರಾಜ್ಯ ಸರ್ಕಾರಕ್ಕೆ ಯೋಜನೆ ರೂಪಿಸುವಂತೆ ಶ್ರೀರಾಮುಲು ಅವರು ಜಿಲ್ಲಾ ಆಡಳಿತಕ್ಕೆ ಸೂಚನೆ ನೀಡಿದ್ದಾರೆ.

ಇದನ್ನು ಓದಿ: ಪಾರಂಪರಿಕ ಹಂಪಿ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಸರ್ಕಾರದ ಹೊಸ ಯೋಜನೆ

ಪ್ರತಿ ವರ್ಷ ಹಂಪಿ ಉತ್ಸವ ಮಾಡಲಾಗುತ್ತಿದ್ದು, ಈ ಬಾರಿ ವಿಜಯನಗರ ಜಿಲ್ಲೆಗೆ ಆ ಉತ್ಸವ ಬರುವುದರಿಂದ ನಮ್ಮ ಜಿಲ್ಲೆಯಲ್ಲಿಯೂ ಅದೇ ಮಾದರಿಯಲ್ಲಿ ಉತ್ಸವ ಮಾಡುವ ಅಗತ್ಯವಿದ್ದು, ಈ ಕುರಿತು ಸರ್ಕಾರಕ್ಕೆ ಶೀಘ್ರ ವರದಿ ಸಲ್ಲಿಸುವಂತೆ ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಈ ಬಗ್ಗೆ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ ಶ್ರೀರಾಮುಲು, ಉದ್ಯಮಕ್ಕೆ ಸರ್ಕಾರ ಮತ್ತು ಜಿಲ್ಲಾ ಆಡಳಿತದಿಂದ ಬೆಂಬಲ ದೊರೆತರೆ ಪ್ರವಾಸೋದ್ಯಮ ಕ್ಷೇತ್ರವು ಬಳ್ಳಾರಿಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಹೇಳಿದರು.

“ಬಳ್ಳಾರಿ ಉತ್ಸವ ನಡೆಸಬೇಕೆಂಬುದು ನನ್ನ ಬಹುದಿನಗಳ ಆಶಯವಾಗಿದೆ. ವಿಭಜನೆಯ ಹೊರತಾಗಿಯೂ ಎರಡೂ ಜಿಲ್ಲೆಗಳ(ಬಳ್ಳಾರಿ ಮತ್ತು ವಿಜಯನಗರ) ಜನರು ಸಹೋದರರಂತೆ ಇದ್ದಾರೆ. ಹಂಪಿ ಉತ್ಸವದಂತೆ ಬಳ್ಳಾರಿ ಉತ್ಸವವನ್ನು ಜಿಲ್ಲೆಯಾದ್ಯಂತ ಆಚರಿಸಲಾಗುವುದು. ಜಿಲ್ಲೆಯ ಸುಮಾರು 10 ಪ್ರಮುಖ ಪ್ರವಾಸೋದ್ಯಮ ಸ್ಥಳಗಳನ್ನು ಗುರುತಿಸಲಾಗಿದೆ,’’ ಎಂದು ಶ್ರೀರಾಮುಲು ತಿಳಿಸಿದ್ದಾರೆ.

ಬಳ್ಳಾರಿ ಏಕಶಿಲೆ ಕೋಟೆ, ಮಿಂಚೇರಿ ಬೆಟ್ಟ ಮತ್ತು ಸಂಗನಕಲ್ಲು ಬೆಟ್ಟ ಜಿಲ್ಲೆಯ ಪ್ರಮುಖ ಪ್ರವಾಸೋದ್ಯಮ ಆಕರ್ಷಣೆಗಳಾಗಿವೆ. ಈ ತಾಣಗಳನ್ನು ಮತ್ತಷ್ಟು ಸುಧಾರಿಸಲು ಸಲಹೆಗಳನ್ನು ಪಡೆಯಲು ಜಿಲ್ಲಾ ಮಟ್ಟದ ಸಮಿತಿಯನ್ನು ರಚಿಸಲಾಗಿದೆ. ಪ್ರವಾಸಿಗರಿಗೆ ಉತ್ತಮ ಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ ಎಂದಿದ್ದಾರೆ.



Read more

[wpas_products keywords=”deal of the day”]