Karnataka news paper

ಗಡಿನಾಡ ಸಂತ ಪುರುಷೋತ್ತಮರಿಗೆ ಗಡಿನಾಡ ಚೇತನ ಪ್ರಶಸ್ತಿ ಪ್ರದಾನ


Online Desk

ಬೆಂಗಳೂರು: ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘ ಹಾಗೂ ಗಡಿನಾಡ ಸಂತ ಬಿ ಪುರುಷೋತ್ತಮ ಮಾಸ್ತರ್ ಕಾಸರಗೋಡ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ ಪ್ರದಾನ ಮಾಡಿದರು.

ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕರ್ನಾಟಕ ಏಕೀಕರಣದ ಧೀಮಂತ ಹೋರಾಟಗಾರರಾದ ಡಾ. ಜಯದೇವಿ ತಾಯಿ ಲಿಗಾಡೆ ಹಾಗೂ ಕಯ್ಯಾರ ಕಿಂಞ್ಞಣ್ಣ ರೈ ಹೆಸರಿನಲ್ಲಿ ಸ್ಥಾಪಿಸಿರುವ ಗಡಿನಾಡ ಚೇತನ ಪ್ರಶಸ್ತಿಯನ್ನು ಪುರುಷೋತ್ತಮ್ ಅವರಿಗೆ ನೀಡಲಾಗಿದೆ.

ಕರ್ನಾಟಕ ವಿದ್ಯಾವರ್ಧಕ ಸಂಘದ ಪರವಾಗಿ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಪ್ರಶಸ್ತಿ ಸ್ವೀಕರಿಸಿದರು. ಪ್ರಾಧಿಕಾರದ ಅಧ್ಯಕ್ಷ ಡಾ. ಸಿ ಸೋಮಶೇಖರ್, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಕಾರ್ಯದರ್ಶಿ ಡಾ. ಎನ್ ಮಂಜುಳಾ, ನಾಡೋಜ ಪ್ರೊ. ಹಂಪ ನಾಗರಾಜಯ್ಯ, ಪತ್ರಕರ್ತ ರವೀಂದ್ರ ಭಟ್ ಮತ್ತು ಇತರರು ಉಪಸ್ಥಿತರಿದ್ದರು



Read more

[wpas_products keywords=”deal of the day”]