ANI
ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕಿನ ಅಬ್ಬರ ಮತ್ತಷ್ಟು ಕಡಿಮೆಯಾಗುತ್ತಿದೆ. ಗುರುವಾರ ಬೆಳಗ್ಗೆ 8 ಗಂಟೆಯ ಹೊತ್ತಿಗೆ ದೇಶದಲ್ಲಿ 67,084 ಹೊಸ ಕೋವಿಡ್ ಸೋಂಕಿನ ಪ್ರಕರಣಗಳು ವರದಿಯಾಗಿದ್ದು, ಇದೇ ಅವಧಿಯಲ್ಲಿ 1,241 ಸಾವು ಸಂಭವಿಸಿದೆ.ಈ ಮೂಲಕ ದೇಶದಲ್ಲಿ ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ 5,06,520 ಆಗಿದೆ.
ದೇಶದಲ್ಲಿ 67,084 ಹೊಸ ಪ್ರಕರಣಗಳು ಪತ್ತೆಯಾಗುವುದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 4,24,10,976ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 5,06,520ಕ್ಕೆ ತಲುಪಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 7,90,789 ಕ್ಕೆ ತಲುಪಿದೆ.ದಿನಂಪ್ರತಿಯ ಪಾಸಿಟಿವ್ ದರ ಶೇಕಡಾ 4.44ರಷ್ಟಿದೆ.
ಈ ಮಧ್ಯೆ, ಕಳೆದ 24 ಗಂಟೆಗಳಲ್ಲಿ 1,67,882 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೆ ದೇಶದಲ್ಲಿ ಕೋವಿಡ್ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 4,11,80,751ಕ್ಕೆ ಏರಿಕೆಯಾಗಿದೆ.
ಇನ್ನು ಭಾರತದಲ್ಲಿ ಒಂದೇ 13,46,534ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 74,29,08,121 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,71,28,19,947 ಡೋಸ್ ಲಸಿಕೆ ವಿತರಿಸಲಾಗಿದೆ.
Read more
[wpas_products keywords=”deal of the day”]