PTI
ಲಖನೌ: ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಗೆ ಫೆ.10 ರಂದು ನಡೆದ ಮೊದಲ ಹಂತದ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದೆ. 11 ಜಿಲ್ಲೆಗಳಲ್ಲಿ 58 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆದಿದ್ದು ಶೇ.60 ರಷ್ಟು ಮತದಾನ ದಾಖಲಾಗಿದೆ.
ಕೋವಿಡ್-19 ಶಿಷ್ಟಾಚಾರದ ಹಿನ್ನೆಲೆಯಲ್ಲಿ ಮತದಾನದ ಅವಧಿಯನ್ನು ಒಂದು ಗಂಟೆ ವಿಸ್ತರಿಸಲಾಗಿದ್ದು ಸಂಜೆ 6 ಗಂಟೆಗೆ ಮತದಾನ ಪೂರ್ಣಗೊಂಡಿದೆ.
ಕೆಲವು ಪ್ರದೇಶಗಳಲ್ಲಿ ಇವಿಎಂಗಳಲ್ಲಿ ಕೆಲವು ತಾಂತ್ರಿಕ ದೋಷಗಳನ್ನು ಹೊರತುಪಡಿಸಿದರೆ ಮತದಾನ ಪ್ರಕ್ರಿಯೆ ಬಹುತೇಕ ಶಾಂತಿಯುತವಾಗಿತ್ತು ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ. ಮುಖ್ಯ ಚುನಾವಣಾ ಅಧಿಕಾರಿ ಬಿಡಿ ರಾಮ್ ತಿವಾರಿ ಮಾತನಾಡಿ ತಾಂತ್ರಿಕ ದೋಷಗಳು ಎದುರಾದ ಪ್ರದೇಶಗಳಲ್ಲಿ ಇವಿಎಂ ಗಳನ್ನು ಬದಲಾವಣೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಇನ್ನು ಬಡ ಮತದಾರರಿಗೆ ದುಂದುಖೇಡದಲ್ಲಿ ಮತದಾನ ಮಾಡಲು ಅವಕಾಶ ನಿರಾಕರಿಸಲಾಗಿದೆ ಎಂಬ ಸಮಾಜವಾದಿ ಪಕ್ಷದ ಆರೋಪದ ಬಗ್ಗೆಯೂ ಅವರು ಪ್ರತಿಕ್ರಿಯೆ ನೀಡಿದ್ದು, ಸಂಬಂಧಪಟ್ಟ ಮ್ಯಾಜಿಸ್ಟ್ರೇಟ್ ಗೆ ಈ ವಿಷಯವಾಗಿ ಪರಿಶೀಲಿಸಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
Read more
[wpas_products keywords=”deal of the day”]