Karnataka news paper

ಹಿಜಾಬ್-ಕೇಸರಿ ಶಾಲು ವಿವಾದ; ಪೊಲೀಸರಿಂದ ಪಥಸಂಚಲನ


ಹೊಸಪೇಟೆ (ವಿಜಯನಗರ): ಹಿಜಾಬ್-ಕೇಸರಿ ವಿವಾದದ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಧೈರ್ಯ ಮೂಡಿಸಲು ಪೊಲೀಸರು ನಗರ ಸೇರಿದಂತೆ ಜಿಲ್ಲೆಯ ಎಲ್ಲ ತಾಲ್ಲೂಕು, ಹೋಬಳಿಗಳಲ್ಲಿ ಶುಕ್ರವಾರ ಪಥ ಸಂಚಲನ ನಡೆಸಿದರು.

ನಗರದಲ್ಲಿ ಡಿವೈಎಸ್ಪಿ ವಿಶ್ವನಾಥರಾವ್ ಕುಲಕರ್ಣಿ ನೇತೃತ್ವದಲ್ಲಿ ಪೊಲೀಸರು ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಪಥಸಂಚಲನ ನಡೆಸಿದರು.

ಜಿಲ್ಲೆಯ ಹರಪನಹಳ್ಳಿ, ಹೂವಿನಹಡಗಲಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಕೂಡ್ಲಿಗಿ, ಕಾನಹೊಸಹಳ್ಳಿ, ಮರಿಯಮ್ಮನಹಳ್ಳಿ, ಕಮಲಾಪುರದಲ್ಲಿ ಮಾರ್ಚ್ ನಡೆಸಿದರು.



Read more from source

[wpas_products keywords=”deal of the day sale today kitchen”]