Karnataka news paper

ಜಮ್ಮು-ಕಾಶ್ಮೀರ: ಜೆಇಎಂ ಉಗ್ರರ ಅಡಗುತಾಣಗಳ ಮೇಲೆ ದಾಳಿ, 11 ಭಯೋತ್ಪಾದಕ ಸಹಚರರ ಬಂಧನ


Online Desk

ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಅನಂತನಾಗ್ ಜಿಲ್ಲೆಯಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್-ಇ-ಮೊಹಮ್ಮದ್ (ಜೆಇಎಂ) ನ ಎರಡು ಅಡಗುತಾಣಗಳ ಮೇಲೆ ದಾಳಿ ನಡೆಸಿದ್ದು, ಮೂವರು ಸಕ್ರಿಯ ಭಯೋತ್ಪಾದಕರು ಸೇರಿದಂತೆ 11 ಮಂದಿ ಉಗ್ರರ ಸಹಚರರನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ. 

ದಾಳಿ ವೇಳೆ ಉಗ್ರರ ಸಹಚರರಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳು ಸೇರಿದಂತೆ ಅಪಾರ ಪ್ರಮಾಣದ ಅಕ್ರಮ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಗಳು ತಿಳಿಸಿವೆ.

ಶ್ರೀಗುಫ್ವಾರಾ ಗ್ರಾಮದ ಸಖ್ರಾಸ್ ಕ್ರಾಸಿಂಗ್‌ನಲ್ಲಿ ಅಂತಹ ಚೆಕ್‌ಪೋಸ್ಟ್‌ಗಳಲ್ಲಿ ಒಂದನ್ನು ಪರಿಶೀಲಿಸುತ್ತಿದ್ದ ಸಂದರ್ಭದಲ್ಲಿ ಬೈಕ್‌ನಲ್ಲಿ ಬಂದ ಮೂವರು ವ್ಯಕ್ತಿಗಳು ಪರಾರಿಯಾಗಲು ಪ್ರಯತ್ನಿಸಿದಾಗ ಅವರನ್ನು ತಡೆದು ಬಂಧಿಸಲಾಗಿತ್ತು. ವಿಚಾರಣೆ ವೇಳೆ ಅವರ ಬಳಿ ಎರಡು ಪಿಸ್ತೂಲ್ (ಚೈನೀಸ್) ಜೊತೆಗೆ ಮ್ಯಾಗಜೀನ್ ಮತ್ತು ಮದ್ದುಗುಂಡುಗಳು ಪತ್ತೆಯಾಗಿತ್ತು.

ಬಳಿಕ ಮೂವರನ್ನೂ ಬಂಧಿಸಿ ವಿಚಾರಣೆ ನಡೆಸಿದಾಗ ಇವರು ನೀಡದ ಮಾಹಿತಿ ಮೇರೆದೆ ಎರಡು ಅಡಗುತಾಣಗಳ ಮೇಲೆ ದಾಳಿ ನಡೆಸಲಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಜಮ್ಮು ಮತ್ತು ಕಾಶ್ಮೀರದ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.



Read more

[wpas_products keywords=”deal of the day”]