Karnataka news paper

ಕನ್ನಡ ಧ್ವಜಕ್ಕೆ ಬೆಂಕಿ: ನಟ ಜಗ್ಗೇಶ್‌ ತೀವ್ರ ಆಕ್ರೋಶ


ಬೆಂಗಳೂರು: ಕನ್ನಡ ಧ್ವಜಕ್ಕೆ ಬೆಂಕಿ ಇಟ್ಟಿರುವ ಮಹಾರಾಷ್ಟ್ರದ ಎಂಇಎಸ್‌ ಕಾರ್ಯಕರ್ತರ ವಿರುದ್ಧ ನಟ ಜಗ್ಗೇಶ್‌ ತೀವ್ರ ಆಕ್ರೋಶ ವ್ಯಕ್ತಪಡಿಸಿ ಟ್ವೀಟ್‌ ಮಾಡಿದ್ದಾರೆ.

ಬುಧವಾರ ಈ ಟ್ವೀಟ್‌ ಮಾಡಿದ್ದು ಈ ಕೃತ್ಯ ಕೈಗೊಂಡವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದ್ದಾರೆ.

ಬಿಜೆಪಿ ಮುಖಂಡರು ಆಗಿರುವ ಜಗ್ಗೇಶ್‌ ಅವರು ಸಾಮಾಜಿಕ ಜಾಲತಾಣಗಳ ಮೂಲಕ ಎಂಇಎಸ್‌ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಕನ್ನಡ ಧ್ವಜಕ್ಕೆ ಬೆಂಕಿ ಇಡುತ್ತಿರುವ ಚಿತ್ರವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿರುವ ಜಗ್ಗೇಶ್, ‘ಕನ್ನಡ ಬಾವುಟ ಅಪಮಾನಿಸಿದವರ ಮೇಲೆ ಕಾನೂನು ಕ್ರಮಕ್ಕೆ ಒತ್ತಾಯ. ಹಾಗೂ ಕನ್ನಡಪರ ಈ ವಿಷಯಕ್ಕೆ ಹೋರಾಟ ಮಾಡಿದ ಕನ್ನಡ ಸೈನಿಕರ ದಯಮಾಡಿ ಬಿಡುಗಡೆಗೊಳಿಸಿ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹಮಂತ್ರಿ ಆರಗ ಜ್ಞಾನೇಂದ್ರ ಅವರಿಗೆ ಟ್ಯಾಗ್ ಮಾಡಿ ಮನವಿ ಮಾಡಿದ್ದಾರೆ.

ಮುಂದುವರೆದು ‘ಕರ್ನಾಟಕದಲ್ಲಿ ಕನ್ನಡ ಭಾಷೆ ಸಾರ್ವಭೌಮ’ ಎಂದು ಜಗ್ಗೇಶ್ ಹೇಳಿದ್ದಾರೆ.

ಎಂಇಎಸ್‌ನವರ ಈ ಕ್ರಮಕ್ಕೆ ಹಲವರು ಟೀಕೆ ವ್ಯಕ್ತಪಡಿಸಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಖಂಡನೆ ವ್ಯಕ್ತವಾಗಿದೆ.



Read More…Source link