Karnataka news paper

ನಿಗದಿತ ವೇಳಾಪಟ್ಟಿಯಂತೆಯೇ ಪರೀಕ್ಷೆಗಳು ನಡೆಯಲಿವೆ: ಸಚಿವ ಅಶ್ವತ್ಥ್ ನಾರಾಯಣ್ 


The New Indian Express

ಬೆಂಗಳೂರು: ರಜೆ ನೀಡಿದ್ದರೂ ನಿಗದಿಯಾಗಿರುವ ಪರೀಕ್ಷೆಗಳು ನಿಗದಿತ ರೀತಿಯಲ್ಲಿಯೇ ನಡೆಯಲಿವೆ ಎಂದು ಸಚಿವ ಅಶ್ವತ್ಥ್ ನಾರಾಯಣ್ ಅವರು ಮಂಗಳವಾರ ಸ್ಪಷ್ಟಪಡಿಸಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡದ ಅವರು, ಫೆಬ್ರವರಿ 9 ರಿಂದ 11 ರವರೆಗಿನ ಮೂರು ದಿನಗಳ ರಜೆ ಸರ್ಕಾರಿ, ಅನುದಾನಿತ, ಅನುದಾನರಹಿತ ಪದವಿ ಕಾಲೇಜುಗಳು, ಡಿಪ್ಲೋಮಾ ಮತ್ತು ಎಂಜಿನಿಯರಿಂಗ್ ಕಾಲೇಜುಗಳಿಗೆ ಅನ್ವಯಿಸಲಿದ್ದು, ಶಾಲೆಗಳಲ್ಲಿ ನಿಗದಿತ ವೇಳಾಪಟ್ಟಿಯಂತೆಯೇ ಪರೀಕ್ಷೆಗಳು ನಡೆಯಲಿವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಿಜಾಬ್ Vs ಕೇಸರಿ: ರಾಜ್ಯಾದ್ಯಂತ ನಾಳೆಯಿಂದ ಮೂರು ದಿನ ಹೈಸ್ಕೂಲ್, ಕಾಲೇಜ್ ಗಳಿಗೆ ರಜೆ ಘೋಷಿಸಿದ ಸರ್ಕಾರ

ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ತೀರ್ಪು ಪ್ರಕಟಿಸುವವರೆಗೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಶಿಕ್ಷಣ ಸಂಸ್ಥೆಗಳ ತರಗತಿಗಳಲ್ಲಿ ಹಿಜಾಬ್ ಅಥವಾ ಕೇಸರಿ ಶಾಲು ಧರಿಸುವುದನ್ನು ಅನುಮತಿಸಲಾಗುವುದಿಲ್ಲ. ಯಾರೂ ಕಾನೂನನ್ನು ಕೈಗೆತ್ತಿಕೊಳ್ಳುವ ಸಾಹಸ ಮಾಡಬಾರದು. ಅಂತಿಮವಾಗಿ ನ್ಯಾಯಾಲಯದ ತೀರ್ಪನ್ನು ಗೌರವಿಸಬೇಕು ಎಂದು ತಿಳಿಸಿದ್ದಾರೆ. 

ಈ ಮಧ್ಯೆ, KAMS ನ ಪ್ರಧಾನ ಕಾರ್ಯದರ್ಶಿ ಡಿ ಶಶಿಕುಮಾರ್ ಅವರು ಮಾತನಾಡಿ, ಸಾಂಕ್ರಾಮಿಕ ರೋಗದಿಂದಾಗಿ ಶಾಲೆಗಳು ಬಹಳ ಸಮಯದ ನಂತರ ಆಫ್’ಲೈನ್ ತರಗತಿಗಳನ್ನು ಪ್ರಾರಂಭಿಸಿವೆ. ಈ ಸಮಯದಲ್ಲಿ ಶಿಕ್ಷಣ ಸಂಸ್ಥೆಗಳಲ್ಲಿ ಏನಾಗುತ್ತಿದೆ ಎಂಬುದು ಕಳಕಾರಿ ವಿಷಯವಾಗಿದೆ. ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳಲ್ಲಿ ಪ್ರೌಢಶಾಲೆಗಳಲ್ಲಿ ತರಗತಿಗಳು ಆನ್‌ಲೈನ್ ನಲ್ಲಿ ನಡೆಸಲಾಗುತ್ತದೆ ಎಂದಿದ್ದಾರೆ.



Read more

[wpas_products keywords=”deal of the day”]