Karnataka news paper

ಹಿಜಾಬ್‌ ವಿವಾದ: ಕಾಲೇಜುಗಳಿಗೆ ಫೆಬ್ರವರಿ 16ರವರೆಗೆ ರಜೆ ವಿಸ್ತರಣೆ


ಬೆಂಗಳೂರು: ಹಿಜಾಬ್ ಹಾಗೂ ಕೇಸರಿ ವಿವಾದದ ಹಿನ್ನೆಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಫೆಬ್ರವರಿ 16 ರವರೆಗೆ ಉನ್ನತ ಶಿಕ್ಷಣ ಇಲಾಖೆಯ ವ್ಯಾಪ್ತಿಗೊಳಪಡುವ ಶಿಕ್ಷಣ ಸಂಸ್ಥೆಗಳಿಗೆ ರಜೆ ಮುಂದುವರಿಸಿ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಎಲ್ಲಾ ವಿಶ್ವವಿದ್ಯಾಲಯಗಳು, ಹಾಗೂ ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಗೊಳಪಡುವ ಸರ್ಕಾರಿ, ಅನುದಾನಿಗೆ ಅನುದಾನ ರಹಿತ ಪದವಿ ಕಾಲೇಜುಗಳು, ಡಿಪ್ಲೊಮೊ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿದೆ.

ಆದರೆ ಈ ಅವಧಿಯಲ್ಲಿ ಪರೀಕ್ಷೆಗಳು ನಡೆಯುತ್ತಿದ್ದಲ್ಲಿ ಯಥಾವತ್ತಾಗಿ ನಡೆಯಲಿವೆ ಹಾಗೂ ಆನ್ ಲೈನ್ ತರಗತಿಗಳ ಮೂಲಕ ವ್ಯಾಸಂಗ ಕ್ರಮವನ್ನು ನಡೆಸುವಂತೆ ಸೂಚಿಸಲಾಗಿದೆ.

ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಹಿಜಾಬ್‌ ವಿವಾದ ಸೃಷ್ಟಿಯಾಗಿತ್ತು. ಹಿಜಾಬ್‌ ಧಾರಣೆ ನಂತರ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿಕೊಂಡು ಕಾಲೇಜಿಗೆ ಬಂದಿದ್ದು ತೀವ್ರ ಕೋಲಾಹಲಕ್ಕೆ ನಾಂದಿ ಹಾಡಿತು. ಕೆಲವು ಕಡೆಗಳಲ್ಲಿ ನಡೆದ ಪ್ರತಿಭಟನೆ ಹಿಂಸಾರೂಪಕ್ಕೆ ತಾಳಿದ ನಂತರ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಿ ರಾಜ್ಯ ಸರಕಾರ ಆದೇಶ ನೀಡಿತ್ತು.

Hijab Row: ಹಿಜಾಬ್ ವಿವಾದದ ಬಗ್ಗೆ ಹೈಕೋರ್ಟ್ ನೀಡಿದ ಆದೇಶದಲ್ಲಿ ಏನಿದೆ?: ಪೂರ್ಣ ವಿವರ ಬಹಿರಂಗ

ಈ ವಿವಾದ ಈ ಕೋರ್ಟ್‌ ಮೆಟ್ಟಿಲೇರಿದೆ. ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್‌ ನ್ಯಾಯಪೀಠ, ಮಧ್ಯಂತರ ಆದೇಶ ನೀಡಿ, ಧಾರ್ಮಿಕ ವಸ್ತ್ರಗಳನ್ನು ಶಾಲಾ-ಕಾಲೇಜುಗಳಿಗೆ ಧರಿಸಿ ಬರುವಂತಿಲ್ಲ ಎಂದು ಹೇಳಿದೆ.

ಕಾಲೇಜುಗಳಲ್ಲಿ ಮೊಬೈಲ್ ನಿಷೇಧ ಇಲ್ಲ: ಅಶ್ವತ್ಥನಾರಾಯಣ

ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ಫೋನ್ ಬಳಕೆಗೆ ನಿಷೇಧ ಹೇರುತ್ತಾರೆ ಎನ್ನುವುದು ಸುಳ್ಳು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗಾರರು ಶುಕ್ರವಾರದಂದು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, `ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ಬಳಸದಂತೆ ನಿರ್ಬಂಧಿಸಲಾಗುವುದು ಎಂದು ಕೆಲವರು ಗಾಳಿ ಸುದ್ದಿ ಹಬ್ಬಿಸುತ್ತಿದ್ದಾರೆ. ಬೋಧನಾ ವ್ಯವಸ್ಥೆಯು ಆನ್ ಲೈನ್ ರೂಪ ಪಡೆದಿರುವುದರಿಂದ ಮೊಬೈಲ್, ಕಂಪ್ಯೂಟರ್, ಲ್ಯಾಪ್ ಟಾಪ್ ಮುಂತಾದ ಆಧುನಿಕ ತಾಂತ್ರಿಕ ಸಾಧನಗಳು ವಿದ್ಯಾರ್ಥಿಗಳ ಕಲಿಕೆಯ ಅವಿಭಾಜ್ಯ ಅಂಗವೇ ಆಗಿಹೋಗಿವೆ. ಹೀಗಿರುವುದಾಗ ನಿಷೇಧದ ಮಾತು ಎಲ್ಲಿಂದ ಬರುತ್ತದೆ’ ಎಂದು ಪ್ರಶ್ನಿಸಿದರು.

ಆರು ಮಕ್ಕಳು ಮಾಡಿದ ವಿಷಯ ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗಿದೆ: ಬಿಸಿ ನಾಗೇಶ್‌

`ಇಂತಹ ಗಾಳಿಮಾತುಗಳನ್ನು ವಿದ್ಯಾರ್ಥಿಗಳಾಗಲಿ, ಪೋಷಕರಾಗಲಿ ನಂಬಬಾರದು. ಆಧುನಿಕ ಸಾಧನಗಳನ್ನು ಬಳಸಿಕೊಂಡು, ವಿದ್ಯಾರ್ಥಿಗಳಿಗೆ ಗುಣಮಟ್ಟದ ಬೋಧನೆ ಮತ್ತು ಶಿಕ್ಷಣ ಪೂರೈಸುವುದು ಸರಕಾರದ ಆದ್ಯತೆಯಾಗಿದೆ. ಮೊಬೈಲ್ ಬಳಕೆ ಎಂದಿನಂತೆ ಮುಂದುವರಿಯಲಿದೆ’ ಎಂದು ಸಚಿವರು ನುಡಿದರು.



Read more

[wpas_products keywords=”deal of the day sale today offer all”]