Karnataka news paper

ಮೇಕೆದಾಟು-2ಗೆ ಸಿದ್ಧತೆ; ಮತ್ತೆ ಕಾಂಗ್ರೆಸ್‌ ಪಾದಯಾತ್ರೆ


ಬೆಂಗಳೂರು: ಹಿಜಾಬ್‌ ವಿವಾದ ವ್ಯಾಪಕ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಅದರಿಂದ ಅಂತರ ಕಾಯ್ದುಕೊಂಡಿರುವ ಕಾಂಗ್ರೆಸ್‌, ಇದೀಗ ಮೇಕೆದಾಟು ಪಾದಯಾತ್ರೆ ಮುಂದುವರಿಸಲು ಸಿದ್ಧತೆ ಪ್ರಾರಂಭಿಸಿದೆ.

ಹಿಜಾಬ್‌ ವಿಚಾರದಲ್ಲಿ ಪ್ರಾರಂಭದಲ್ಲಿ ಪ್ರತಿಕ್ರಿಯಿಸಿದ್ದ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಹಿಜಾಬ್‌ ಧರಿಸುವುದು ಮೂಲಭೂತ ಹಕ್ಕು ಎಂದು ಪ್ರತಿಪಾದಿಸಿದ್ದರು. ಮತ್ತೊಂದೆಡೆ ಈ ಬೆಳವಣಿಗೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ರಕ್ಷಣಾತ್ಮಕವಾಗಿ ಪ್ರತಿಕ್ರಿಯಿಸಿದ್ದರು.

ಬೆಂಗಳೂರು: ಅವಾಚ್ಯ ಪದಗಳಿಂದ ನಿಂದಿಸಿದ ಟ್ರಾಫಿಕ್‌ ಪಿಎಸ್‌ಐ, ತನಿಖೆಯಿಂದ ಬಯಲು

ಬಳಿಕ ಬೆಂಗಳೂರಿನಲ್ಲಿ ಕಾಂಗ್ರೆಸ್‌ನ ಅಲ್ಪಸಂಖ್ಯಾತ ಮುಖಂಡರೊಂದಿಗೆ ಸಭೆ ನಡೆಸಿದ ಡಿ.ಕೆ.ಶಿವಕುಮಾರ್‌, ಈ ಬೆಳವಣಿಗೆಗೆ ಅತ್ಯಂತ ಎಚ್ಚರಿಕೆಯಿಂದ ಪ್ರತಿಕ್ರಿಯಿಸಬೇಕು. ರಾಜ್ಯದಲ್ಲಿ ಪಕ್ಷಕ್ಕೆ ಪೂರಕವಾದ ವಾತಾವರಣ ನಿರ್ಮಾಣವಾಗುತ್ತಿದೆ. ಇಂತಹ ಸಂದರ್ಭದಲ್ಲಿ ಯಾವುದೇ ಧರ್ಮವನ್ನು ಓಲೈಸುವ ಸಂದೇಶ ಹೋಗದಂತೆ ನೋಡಿಕೊಳ್ಳಬೇಕು. ಎಲ್ಲ ಧರ್ಮ, ಸಮುದಾಯದವರು ಬೆಂಬಲಿಸಿದರೆ ಮಾತ್ರ ಪಕ್ಷ ಅಧಿಕಾರಕ್ಕೆ ಬರುತ್ತದೆ. ಈ ಸಂಗತಿ ಎಲ್ಲರ ಮನಸ್ಸಿನಲ್ಲಿರಬೇಕು ಎಂಬ ಸೂಚನೆ ನೀಡಿದ್ದರು ಎಂದು ವರದಿಯಾಗಿತ್ತು.

ಇದರ ನಡುವೆ ಹಿಜಾಬ್‌, ಕೇಸರಿ ಶಾಲು ಧರಿಸಿ ಶಾಲೆ, ಕಾಲೇಜಿಗೆ ಹೋಗಬಾರದೆಂದು ಹೈಕೋರ್ಟ್‌ ಸೂಚಿಸಿದೆ. ಸರಕಾರ ಕೂಡ ತರಗತಿ ಪುನರಾರಂಭಕ್ಕೆ ಕ್ರಮ ಕೈಗೊಳ್ಳುತ್ತಿದೆ. ಈ ಹಂತದಲ್ಲಿ ಮೇಕೆದಾಟು ಪಾದಯಾತ್ರೆಯನ್ನು ಮುಂದುವರಿಸಲು ಕಾಂಗ್ರೆಸ್‌ ತಯಾರಿ ಮಾಡಿಕೊಳ್ಳುತ್ತಿದೆ.

ಮೆಟ್ರೋ ರೈಲು ಕಾಮಗಾರಿಗೆ ಅಡ್ಡಿಯಾಗಿರುವ 138 ಮರಗಳನ್ನು ಕತ್ತರಿಸಲು ಹೈಕೋರ್ಟ್‌ ಅನುಮತಿ

‘ಮೇಕೆದಾಟು 2.0 ಅತಿ ಶೀಘ್ರದಲ್ಲಿ ನಿಮ್ಮ ಮುಂದೆ’ ಎಂದು ಕೆಪಿಸಿಸಿ ಅಧಿಕೃತ ಹ್ಯಾಂಡಲ್‌ನಿಂದ ಟ್ವೀಟ್‌ ಮಾಡಲಾಗಿದೆ. ಜತೆಗೆ ಮೇಕೆದಾಟು ಬಗ್ಗೆ ಗಮನ ಸೆಳೆಯುವ ವೀಡಿಯೋ ಅಪ್‌ಲೋಡ್‌ ಮಾಡಲಾಗಿದೆ. ಮೇಕೆದಾಟು-2ರಲ್ಲಿ ಭಾಗಿಯಾಗಲು ನೋಂದಣಿ ಮಾಡಿಕೊಳ್ಳುವಂತೆಯೂ ಮನವಿ ಮಾಡಿಕೊಳ್ಳಲಾಗಿದೆ.

ಒಂದೇ ವಿಮಾನದಲ್ಲಿ ಸಿಎಂ, ಡಿಕೆಶಿ!

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಒಂದೇ ವಿಮಾನದಲ್ಲಿ ಶನಿವಾರ ಮಧ್ಯಾಹ್ನ ಬೆಳಗಾವಿಗೆ ಪ್ರಯಾಣ ಬೆಳೆಸಲಿದ್ದಾರೆ. ಮುಖ್ಯಮಂತ್ರಿಯು ಬೆಳಗಾವಿ ವಿಮಾನ ನಿಲ್ದಾಣದಲ್ಲಿಇಳಿದ ಬಳಿಕ ರಸ್ತೆ ಮೂಲಕ ಸ್ವಕ್ಷೇತ್ರ ಶಿಗ್ಗಾಂವ್‌ಗೆ ತೆರಳಲಿದ್ದಾರೆ. ಜಲ ಸಂಪನ್ಮೂಲ ಇಲಾಖೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ದೊಡ್ಡಕೆರೆಗೆ ಬಾಗಿನ ಅರ್ಪಿಸಲಿದ್ದಾರೆ. ಜತೆಗೆ ನಾನಾ ಸರಕಾರಿ ಕಾರ್ಯಕ್ರಮಗಳಲ್ಲೂ ಪಾಲ್ಗೊಳ್ಳಲಿದ್ದಾರೆ. ಡಿ.ಕೆ.ಶಿವಕುಮಾರ್‌ ಅವರು ಕಾಂಗ್ರೆಸ್‌ ಸದಸ್ಯತ್ವ ಅಭಿಯಾನದ ಪ್ರಗತಿ ಪರಿಶೀಲನೆ ಕೈಗೊಳ್ಳಲು ಬೆಳಗಾವಿಗೆ ಭೇಟಿ ನೀಡಲಿದ್ದಾರೆ.



Read more

[wpas_products keywords=”deal of the day sale today offer all”]