
ಹೌದು, ಬಿಎಸ್‌ಎನ್‌ಎಲ್ ಟೆಲಿಕಾಂ ತನ್ನ ದೀರ್ಘಾವಧಿ ಪ್ರಿಪೇಯ್ಡ್ ಪ್ಲಾನ್‌ಗಳಲ್ಲಿ ಅಧಿಕ ವ್ಯಾಲಿಡಿಟಿಯನ್ನು ನೀಡುತ್ತಿದೆ. ಬಿಎಸ್‌ಎನ್‌ಎಲ್‌ನ 2399 ರೂ. ಬೆಲೆಯ ಪ್ರಿಪೇಯ್ಡ್ ಪ್ಲಾನ್ ಹಿಂದೆ 365 ದಿನಗಳ ಮಾನ್ಯತೆಯನ್ನು ನೀಡಿತ್ತು. ಆದರೆ ಇದೀಗ ಅದನ್ನು 60 ದಿನಗಳವರೆಗೆ ವಿಸ್ತರಿಸಬಹುದಾಗಿದೆ. ಈ ಪ್ಲಾನ್ ಪ್ರಮೋಷನಲ್ ಆಫರ್ ಸ್ವರೂಪದ್ದಾಗಿದೆ, ಇದು ಡಿಸೆಂಬರ್ 31, 2021 ರವರೆಗೆ ಲಭ್ಯವಿರುತ್ತದೆ. ಹಾಗಾದ್ರೆ ಈ ಬಿಎಸ್‌ಎನ್‌ಎಲ್ ಪ್ರಮೋಷನಲ್ ಪ್ಲಾನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಬಿಎಸ್ಎನ್ಎಲ್ನ ದೀರ್ಘಾವಧಿ ವ್ಯಾಲಿಡಿಟಿ ನೀಡುವ 2399ರೂ ಪ್ಲಾನ್ ಇದೀಗ ಹೆಚ್ಚುವರಿಯಾಗಿ 60 ದಿನಗಳ ವ್ಯಾಲಿಡಿಟಿಯನ್ನು ಪಡೆದಿದೆ. ಅಂದರೆ ಈ ಪ್ಲಾನ್ ಮೂಲಕ ಬಳಕೆದಾರರು 425 ದಿನಗಳ ವ್ಯಾಲಿಡಿಟಿ ಸಿಗಲಿದೆ. ಇನ್ನು ಈ ಪ್ಲಾನ್ ದೈನಂದಿನ 3GB ಡೇಟಾ ಪ್ರಯೋಜನ ನೀಡಲಿದೆ. ಜೊತೆಗೆ 100 SMS ಪ್ರಯೋಜನವನ್ನು ನೀಡಲಿದೆ. ಅಲ್ಲದೆ BSNL ಟ್ಯೂನ್ಸ್ ಮತ್ತು Eros Now ವಿಷಯಕ್ಕೆ 425 ದಿನಗಳವರೆಗೆ ಪ್ರವೇಶವನ್ನು ನೀಡುತ್ತದೆ.

ಇನ್ನು ಬಿಎಸ್‌ಎನ್ಎಲ್ ಟೆಲಿಕಾಂನ ಇತರೆ ದೀರ್ಘಾವಧಿ ಪ್ಲಾನ್‌ಗಳನ್ನು ಪರಿಗಣಿಸುವುದಾದರೆ 1499ರೂ. ಬೆಲೆಯ ವಾರ್ಷಿಕ ಪ್ಲಾನ್ ಕೂಡ ಸೇರಿದೆ. ಈ ಪ್ರಿಪೇಯ್ಡ್ ಪ್ಲಾನ್ 365 ದಿನಗಳ ಮಾನ್ಯತೆಯನ್ನು ಹೊಂದಿದೆ. ಇದು 24GB ಡೇಟಾ, ಉಚಿತ ಧ್ವನಿ ಕರೆಗಳು ಮತ್ತು ದಿನಕ್ಕೆ 100 SMS ಪ್ರಯೋಜನ ನೀಡಲಿದೆ. ಇದಲ್ಲದೆ ಬಿಎಸ್ಎನ್‌ಎಲ್ 1999ರೂ. ಬೆಲೆಯ ವಾರ್ಷಿಕ ಪ್ಲಾನ್ ಹೊಂದಿದೆ. ಈ ಪ್ಲಾನ್‌ನಲ್ಲಿ 100GB ಹೆಚ್ಚುವರಿ ಡೇಟಾದೊಂದಿಗೆ 500GB ನಿಯಮಿತ ಡೇಟಾವನ್ನು ನೀಡುತ್ತದೆ. ಜೊತೆಗೆ ದಿನಕ್ಕೆ 100 ಎಸ್‌ಎಂಎಸ್‌ಗಳನ್ನು ನೀಡುತ್ತದೆ. ಇದು 365 ದಿನಗಳವರೆಗೆ Eros Now ಮನರಂಜನಾ ಸೇವೆಗೆ ಪ್ರವೇಶವನ್ನು ನೀಡುತ್ತದೆ.

ಇದಲ್ಲದೆ BSNL 1498ರೂ.ಬೆಲೆಯ ಪ್ರಿಪೇಯ್ಡ್ ವಾರ್ಷಿಕ ಡೇಟಾ ವೋಚರ್ ಅನ್ನು ಸಹ ಹೊಂದಿದೆ. ಈ ಡೇಟಾ ವೋಚರ್ ದೈನಂದಿನ 2GB ಡೇಟಾ ಪ್ರಯೋಜನ ನೀಡಲಿದೆ. ಮನೆಯಿಂದಲೇ ಕಾರ್ಯನಿರ್ವಹಿಸುವವರಿಗೆ ಇದು ಸೂಕ್ತವಾದ ಪ್ಲಾನ್ ಆಗಿದೆ. ಹಾಗೆಯೇ ಬಿಎಸ್‌ಎನ್‌ಎಲ್ ಟೆಲಿಕಾಂ 1199 ರೂ. ಬೆಲೆಯ ಪ್ರಿಪೇಯ್ಡ್ ಯೋಜನೆಯನ್ನು ಸಹ ನೀಡುತ್ತಿದೆ. ಈ ಯೋಜನೆಯು ಕೇರಳ ವಲಯದಲ್ಲಿ ಅನ್ವಯಿಸುತ್ತದೆ. ಇದು 24GB ಡೇಟಾ, ಅನಿಯಮಿತ ಕರೆಗಳು ಮತ್ತು ದಿನಕ್ಕೆ 100 SMS ನೀಡುತ್ತದೆ.

ಜಿಯೋದ ವಾರ್ಷಿಕ ಪ್ಲಾನ್
ಜಿಯೋದ 2879ರೂ. ಬೆಲೆಯ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದೆ. ಇದು 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಇನ್ನು ಈ ಪ್ಲಾನ್ ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಜಿಯೋದ 2545ರೂ. ಪ್ರೀಪೇಯ್ಡ್ ಪ್ಲಾನ್
ಜಿಯೋದ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 336 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 1.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಏರ್‌ಟೆಲ್‌ನ 2999ರೂ. ಪ್ರಿಪೇಯ್ಡ್ ಪ್ಲಾನ್
ಏರ್‌ಟೆಲ್ ಟೆಲಿಕಾಂನ ಈ ಪ್ರಿಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಏರ್‌ಟೆಲ್ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಏರ್‌ಟೆಲ್‌ನ 1799ರೂ. ಪ್ರಿಪೇಯ್ಡ್ ಪ್ಲಾನ್
ಏರ್‌ಟೆಲ್‌ನ ಈ ಪ್ರಿಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 24 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಏರ್‌ಟೆಲ್ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ವಿ ಟೆಲಿಕಾಂನ 2899ರೂ. ಪ್ರಿಪೇಯ್ಡ್ ಪ್ಲಾನ್
ವಿ ಟೆಲಿಕಾಂನ ಈ ಪ್ರಿಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 1.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ವಿ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇದರೊಂದಿಗೆ ವಿಕೆಂಡ್ ಡೇಟಾ ರೋಲ್ ಓವರ್ ಸೌಲಭ್ಯ ಲಭ್ಯ.

ವಿ ಟೆಲಿಕಾಂನ 1799ರೂ. ಪ್ರಿಪೇಯ್ಡ್ ಪ್ಲಾನ್
ವಿ ಟೆಲಿಕಾಂ ಈ ಪ್ರಿಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 24 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ವಿ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.