Karnataka news paper

ಹಿಜಾಬ್ ವಿವಾದದ ನಡುವೆ, ಅರುಣಾಚಲದಲ್ಲಿ ವಿದ್ಯಾರ್ಥಿಗಳು ಸಾಂಪ್ರದಾಯಿಕ ಉಡುಪು ಧರಿಸಿ ಶಾಲೆಗೆ ಬರಲು ಅವಕಾಶ


The New Indian Express

ಗುವಾಹಟಿ: ಕರ್ನಾಟಕದ ಹಿಜಾಬ್ ವಿವಾದ ದೇಶಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ ಅರುಣಾಚಲ ಪ್ರದೇಶದ ಖಾಸಗಿ ಶಾಲೆಗಳು ತಮ್ಮ ವಿದ್ಯಾರ್ಥಿಗಳಿಗೆ ಸಾಂಪ್ರದಾಯಿಕ ಉಡುಪು ಧರಿಸಲು ಅವಕಾಶ ಮಾಡಿಕೊಡಲು ನಿರ್ಧರಿಸಿವೆ.

2022-23ರ ಶೈಕ್ಷಣಿಕ ವರ್ಷದಿಂದ ಬುಡಕಟ್ಟು ಮತ್ತು ಇತರ ಸಮುದಾಯಗಳ ವಿದ್ಯಾರ್ಥಿಗಳು ಪ್ರತಿ ಸೋಮವಾರ ಸಾಂಪ್ರದಾಯಿಕ ಬಟ್ಟೆಗಳನ್ನು ಧರಿಸಿ ಶಾಲೆಗೆ ಬರಲು ಶಿಕ್ಷಣ ಸಂಸ್ಥೆಗಳು ಅವಕಾಶ ನೀಡಿವೆ.

ಇದನ್ನು ಓದಿ: ಹಿಜಾಬ್ ಸಂಘರ್ಷ ಕುರಿತು ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶ ಪ್ರಶ್ನಿಸಿ ಅರ್ಜಿ: ತುರ್ತು ವಿಚಾರಣೆ ನಡೆಸಲು ‘ಸುಪ್ರೀಂ’ ನಕಾರ

180ಕ್ಕೂ ಹೆಚ್ಚು ಶಾಲೆಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದ ಸಭೆಯಲ್ಲಿ ಅರುಣಾಚಲ ಪ್ರದೇಶ ಖಾಸಗಿ ಶಾಲೆಗಳು ಮತ್ತು ಮಕ್ಕಳ ಕಲ್ಯಾಣ ಸಂಘ ಈ ನಿರ್ಧಾರ ಕೈಗೊಂಡಿದೆ.

“ಅರುಣಾಚಲದಲ್ಲಿ 100ಕ್ಕೂ ಹೆಚ್ಚು ಬುಡಕಟ್ಟುಗಳು ಮತ್ತು ಉಪ ಬುಡಕಟ್ಟುಗಳಿವೆ. ಆದಿವಾಸಿಗಳು ಸೇರಿದಂತೆ ವಿದ್ಯಾರ್ಥಿಗಳು ಪ್ರತಿ ಸೋಮವಾರ ತಮ್ಮ ಸಾಂಪ್ರದಾಯಿಕ ಉಡುಗೆಯನ್ನು ಧರಿಸಿ ಶಾಲೆಗೆ ಹೋಗಬೇಕೆಂದು ನಾವು ನಿರ್ಧರಿಸಿದ್ದೇವೆ. ಇದು ಎಲ್ಲಾ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿರುತ್ತದೆ ಎಂದು ಸಂಘದ ಉಪಾಧ್ಯಕ್ಷ ತಾರ್ ಜೋನಿ ಶುಕ್ರವಾರ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

“ವಿದ್ಯಾರ್ಥಿಗಳು ತಮ್ಮ ಸಾಂಪ್ರದಾಯಿಕ ಉಡುಗೆಯನ್ನು ಧರಿಸುವ ಸ್ವಾತಂತ್ರ್ಯ ಹೊಂದಿರುತ್ತಾರೆ. ಯಾರಾದರೂ ನಿಶಿಯಾಗಿದ್ದರೆ, ಅವರು ನೈಶಿ ಉಡುಗೆಯನ್ನು ಧರಿಸುತ್ತಾರೆ. ಗ್ಯಾಲೋಸ್ ತಮ್ಮ ಸಾಂಪ್ರದಾಯಿಕ ಉಡುಗೆಯನ್ನು ಧರಿಸುತ್ತಾರೆ. ಅದೇ ರೀತಿ ಬುಡಕಟ್ಟು ಜನಾಂಗದವರಲ್ಲದವರು ತಮ್ಮ ಸಾಂಪ್ರದಾಯಿಕ ಉಡುಗೆ ತೊಡುವ ಸ್ವಾತಂತ್ರ್ಯವನ್ನು ಹೊಂದಿರುತ್ತಾರೆ ಎಂದು ಜೋನಿ ವಿವರಿಸಿದ್ದಾರೆ.



Read more

[wpas_products keywords=”deal of the day”]