The New Indian Express
ಗದಗ: ಮಹದಾಯಿ ನದಿ ನೀರಿಗಾಗಿ ನರಗುಂದದಲ್ಲಿ ನಡೆಯುತ್ತಿರುವ ಹೋರಾಟಕ್ಕೆ 2,400 ದಿನ ತುಂಬಿದೆ. ಆದರೆ, ಯೋಜನೆಯಲ್ಲಿ ಯಾವುದೇ ಪ್ರಗತಿಯಾಗಿಲ್ಲ.
ಬೆಂಗಳೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಭೇಟಿ ಮಾಡಿದ ಪ್ರತಿಭಟನಾಕಾರರ ಗುಂಪೊಂದು, ಯೋಜನೆಯನ್ನು ಶೀಘ್ರ ಅನುಷ್ಠಾನಗೊಳಿಸುವಂತೆ ಒತ್ತಾಯಿಸಿದೆ. ಸರ್ಕಾರ ಭರವಸೆ ನೀಡಿದಂತೆ ಹೋರಾಟಗಾರರ ವಿರುದ್ಧದ ಕೇಸ್ ಗಳನ್ನು ಹಿಂಪಡೆಯಬೇಕೆಂದು ಅವರು ಕೋರಿದ್ದಾರೆ.
ಕೇಂದ್ರ ಬಜೆಟ್ ನಲ್ಲಿ ಮಹದಾಯಿ ಯೋಜನೆ ಬಗ್ಗೆ ಯಾವುದೇ ಉಲ್ಲೇಖವಿಲ್ಲದಿರುವುದರಿಂದ ಮಾರ್ಚ್ ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಲಿರುವ ರಾಜ್ಯ ಬಜೆಟ್ ನಲ್ಲಿ ಈ ವಿಷಯಕ್ಕೆ ಆದ್ಯತೆ ನೀಡುವ ಸಾಧ್ಯತೆಯಿರುವುದಾಗಿ ಪ್ರತಿಭಟನಾಕಾರರು ವಿಶ್ವಾಸ ಹೊಂದಿದ್ದಾರೆ. ಮಹದಾಯಿಗೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಬೇಕು, ಈ ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಮುಖ್ಯಮಂತ್ರಿ ಭೇಟಿ ಮಾಡಿ, ಮಹದಾಯಿ ಮತ್ತು ಈ ಭಾಗದ ರೈತರಿಗೆ ಸಂಬಂಧಿಸಿದ ಇತರ ಸಮಸ್ಯೆಗಳ ಬಗ್ಗೆ ಮಾತುಕತೆ ನಡೆಸಲಾಗುವುದು ಎಂದು ಕರ್ನಾಟಕ ರೈತ ಸೇನಾ ರಾಜ್ಯಾಧ್ಯಕ್ಷ ಶಂಕರ್ ಅಂಬಲಿ ಹೇಳಿದ್ದಾರೆ.
ಇದನ್ನೂ ಓದಿ: ಮೇಕೆದಾಟು ರೀತಿಯಲ್ಲೇ ಮತ್ತೊಂದು ಪಾದಯಾತ್ರೆ ಸುಳಿವು ಕೊಟ್ಟ ಕಾಂಗ್ರೆಸ್ ನಾಯಕರು!
ವಿರೇಶ್ ಸೊಬರದಮಠ ನೇತೃತ್ವದಲ್ಲಿ ರಾಜ್ಯ ರೈತ ಸೇನಾ ಬ್ಯಾನರ್ ಅಡಿಯಲ್ಲಿ ರೈತರ ಗುಂಪೊಂದರಿಂದ 2015ರಲ್ಲಿ ಮಹದಾಯಿ ಹೋರಾಟ ಆರಂಭವಾಯಿತು. ಇದು ಕ್ಷಿಪ್ರಗತಿಯಲ್ಲಿ ಹುಬ್ಬಳ್ಳಿ- ಧಾರವಾಡ ಅವಳಿ ನಗರ ಸೇರಿದಂತೆ ಮಲ್ಲಪ್ರಭಾ ನದಿ ಅಚ್ಚುಕಟ್ಟು ಪ್ರದೇಶಗಳಲ್ಲಿನ ಪಟ್ಟಣಗಳಿಗೆ ವ್ಯಾಪಿಸಿತ್ತು.
ಕನ್ನಡ ಫಿಲಂ ಇಂಡಸ್ಟ್ರಿ ಸೇರಿದಂತೆ ಎಲ್ಲಾ ವರ್ಗದವರು ಈ ಹೋರಾಟಕ್ಕೆ ಬೆಂಬಲ ವ್ಯಕ್ತವಾಗಿತ್ತು. ಈ ಹೋರಾಟ ನರಗುಂದ ಮತ್ತು ನವಲಗುಂದದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಕೋವಿಡ್ ಸಾಂಕ್ರಾಮಿಕ ಸಂದರ್ಭದಲ್ಲೂ ಪ್ರತಿಭಟನೆ ಮುಂದುವರೆದಿತ್ತು.
ಮಹದಾಯಿ ನದಿ ನೀರಿಗಾಗಿ ಹಲವು ವರ್ಷಗಳಿಂದ ಹೋರಾಟ ನಡೆಯುತ್ತಿದ್ದರೂ ಯಾವುದೇ ಪ್ರಗತಿಯಾಗಿಲ್ಲ, ಮಹದಾಯಿಯ ಎರಡು ಉಪನದಿಗಳಾದ ಕಳಸಾ ಮತ್ತು ಬಂಡೂರಿಗೆ ಅಣೆಕಟ್ಟುಗಳನ್ನು ನಿರ್ಮಿಸಿ 7.56 ಟಿಎಂಸಿ ಅಡಿ ನೀರನ್ನು ಮಲಪ್ರಭಾಕ್ಕೆ ತಿರುಗಿಸುವ ಉದ್ದೇಶವನ್ನು ಒಳಗೊಂಡಿದೆ. ಈ ಯೋಜನೆಯು ಧಾರವಾಡ, ಬೆಳಗಾವಿ, ಬಾಗಲಕೋಟೆ ಮತ್ತು ಗದಗ ಜಿಲ್ಲೆಗಳ ಕುಡಿಯುವ ನೀರಿನ ಅಗತ್ಯವನ್ನು ಪೂರೈಸುವ ನಿರೀಕ್ಷೆಯಿದೆ.
Read more
[wpas_products keywords=”deal of the day”]