Karnataka news paper

ಆರಂಭದಲ್ಲೇ ಶಾಂತಿಯುತವಾಗಿ ಸಮಸ್ಯೆ ಬಗೆಹರಿಸಬಹುದಿತ್ತು: ಹಿಜಾಬ್ ವಿವಾದಕ್ಕೆ ಈಶ್ವರಪ್ಪ ಪ್ರತಿಕ್ರಿಯೆ


The New Indian Express

ಚಿತ್ರದುರ್ಗ: ಕಾಲೇಜಿಗೆ ಆರು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಾಗಲೇ ಸಮಸ್ಯೆಯನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳಬಹುದಿತ್ತು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.

ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಆರಂಭದಲ್ಲಿಯೇ ವಿವಾದವನ್ನು ಬಗೆಹರಿಸಬಹುದಿತ್ತು ಎಂಬುದು ನನ್ನ ಅಭಿಪ್ರಾಯ ಎಂದಿದ್ದಾರೆ. ಕಾಂಗ್ರೆಸ್ ಹಿಜಾಬ್ ವಿವಾದವನ್ನು ತನ್ನ ಅನುಕೂಲಕ್ಕೆ ತಕ್ಕಂತೆ ಬಳಸಿಕೊಳ್ಳುತ್ತಿದೆ ಎಂದು ಈಶ್ವರಪ್ಪ ದೂರಿದ್ದಾರೆ.

ಜವಾಬ್ದಾರಿಯುತ ಜನರ ಸಮಸ್ಯೆಯನ್ನು ಸೂಕ್ಷ್ಮವಾಗಿ ಪರಿಹರಿಸಬೇಕು, ಸಮವಸ್ತ್ರದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಸೂಕ್ಷ್ಮವಾಗಿ ಅರಿವು ಮೂಡಿಸಬೇಕಾಗಿತ್ತು, ಆದರೆ ಅದನ್ನು ಮಾಡಲಾಗಿಲ್ಲ, ಸಮಸ್ಯೆಯನ್ನು ಒಂದು ವರ್ಗದ ಜನ ತಮ್ಮ ಲಾಭಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ, ಕೋಮುವಾದಗೊಳಿಸುತ್ತಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ: ಹಿಜಾಬ್ ವಿವಾದ: ತರಗತಿ ತೆರೆಯಲು ಅವಕಾಶ; ಧಾರ್ಮಿಕ ವಸ್ತ್ರ ಬಳಕೆಗೆ ಅವಕಾಶವಿಲ್ಲ; ವಿಚಾರಣೆ ಫೆ.14ಕ್ಕೆ ಮುಂದೂಡಿದ ಸಿಜೆ!

ಮುಂಬರುವ ಚುನಾವಣೆಯ ಹಿನ್ನೆಲೆಯಲ್ಲಿ ಸಮಸ್ಯೆ ರೂಪುಗೊಂಡಿದೆ ಎಂದು ಆರೋಪಿಸಿದ ಸಚಿವರು, ವಿದ್ಯಾರ್ಥಿಗಳು ಶಿಫಾರಸು ಮಾಡಿದ ಸಮವಸ್ತ್ರವನ್ನು ಧರಿಸಿ ಶಾಲೆಗೆ ಬರುವಂತೆ ಮನವಿ ಮಾಡಿದರು. ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡ ಅವರು ರಾಜ್ಯದಲ್ಲಿನ ಕ್ರಿಶ್ಚಿಯನ್ ಶಾಲೆಗಳು ಹಿಜಾಬ್ ನಿಷೇಧಿಸಿವೆ ಎಂದರು.



Read more

[wpas_products keywords=”deal of the day”]