The New Indian Express
ಗುರುಗ್ರಾಮ: ಗುರುಗ್ರಾಮದಲ್ಲಿ ಅಪಾರ್ಟ್ ಮೆಂಟ್ ಕಟ್ಟಡ ಕುಸಿದು ಬಿದ್ದಿದ್ದು ಅವಶೇಷಗಳಡಿಯಲ್ಲಿ ಇಬ್ಬರು ಸಿಲುಕಿಕೊಂಡಿದ್ದರೆ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ.
ಫೆ.10 ರಂದು ಸಂಜೆ ಈ ಘಟನೆ ನಡೆದಿದ್ದು ಪ್ರಾಥಮಿಕ ವರದಿಗಳ ಪ್ರಕಾರ ಚಿಂಟೆಲ್ಸ್ ಪ್ಯಾರಡಿಸೊ ವಸತಿ ಸಂಕೀರ್ಣದಲ್ಲಿರುವ 6 ನೇ ಮಹಡಿಯಲ್ಲಿರುವ ಕಟ್ಟಡ ಕುಸಿದಿದೆ.
ಎನ್ ಡಿಆರ್ ಫ್ ಹಾಗೂ ಎಸ್ ಡಿಆರ್ ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ, ಅರ್ತ್ ಮೂವಿಂಗ್ ಯಂತ್ರಗಳು ಹಾಗೂ ಅಗ್ನಿಶಾಮಕ ವಾಹನಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ.
ಜಿಲ್ಲಾಧಿಕಾರಿ ನಿಶಾಂತ್ ಯಾದವ್ ಈ ಬಗ್ಗೆ ಮಾತನಾಡಿದ್ದು ಓರ್ವ ವ್ಯಕ್ತಿ ಈ ಘಟನೆಯಲ್ಲಿ ಮೃತಪಟ್ಟಿರುವುದನ್ನು ಸ್ಪಷ್ಟಪಡಿಸಿದ್ದಾರೆ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಓರ್ವ ವ್ಯಕ್ತಿಯನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರೆದಿದ್ದು ಓರ್ವ ಮಹಿಳೆಯೂ ಸಿಲುಕಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
Read more
[wpas_products keywords=”deal of the day”]