Karnataka news paper

ಹಿಜಾಬ್ ಸಂಘರ್ಷದ ಹಿನ್ನೆಲೆ, ಪರಿಸ್ಥಿತಿ ಪರಿಶೀಲಿಸಿ ಪಿಯು ಕಾಲೇಜು ಆರಂಭಿಸಲು ತೀರ್ಮಾನ – ಬೊಮ್ಮಾಯಿ


ಬೆಂಗಳೂರು: ರಾಜ್ಯಾದ್ಯಂತ ಹಿಜಾಬ್ ವಿವಾದ ತಲೆದೋರಿರುವ ಹಿನ್ನೆಲೆಯಲ್ಲಿ ಸೋಮವಾರ ಏನು ಆಗಲಿದೆ ಅಂತ ನೋಡಿಕೊಂಡು ಪದವಿ ಪೂರ್ವ ಕಾಲೇಜು ಆರಂಭಿಸುವ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ‌ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬೆಂಗಳೂರು ನಗರದ ಆರ್‌.ಟಿ. ನಗರ ನಿವಾಸದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪದವಿ ಪೂರ್ವ ಕಾಲೇಜು ಆರಂಭಿಸುವ ವಿಚಾರವಾಗಿ ಸಚಿವರು ಮಾಹಿತಿ ನೀಡಲಿದ್ದಾರೆ ಎಂದು ತಿಳಿಸಿದರು.

ಎರಡು ದಿನ ಶಿಗ್ಗಾಂವ ಪ್ರವಾಸಕ್ಕೆ ತೆರಳುತ್ತಿದ್ದೇನೆ. ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದೇನೆ. ಕೆಲ ಸ್ನೇಹಿತರನ್ನ ಭೇಟಿ ಮಾಡಬೇಕಾಗಿದೆ ಹಾಗಾಗಿ ಇಂದು ಶಿಗ್ಗಾಂವಿಗೆ ಹೋಗುತ್ತಿದ್ದೇನೆ ಎಂದು ಮಾಹಿತಿ ನೀಡಿದರು.

ಹಿಜಾಬ್‌ ಕೇಸರಿ ಸಂಘರ್ಷ: ಇಕ್ಕಟ್ಟಿನಲ್ಲಿ ಕಾಂಗ್ರೆಸ್‌, ಮುಖಂಡರಲ್ಲಿ ಭಿನ್ನ ನಿಲುವು!
ಒಬಿಸಿ ಮೀಸಲಾತಿ- ಸ್ಥಿತಿಗತಿ ಚರ್ಚಿಸಲು ಸಭೆ

ಇನ್ನು ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯತಿ ಚುನಾವಣೆಗೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಅದರ ಪರಿಣಾಮಗಳೇನು ಹಾಗೂ ರಾಜ್ಯದ ಸ್ಥಿತಿಗತಿಯ ಬಗ್ಗೆ ಚರ್ಚಿಸಲು ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದೇ ಸಂದರ್ಭದಲ್ಲಿ ತಿಳಿಸಿದರು.

ಹಿಜಾಬ್‌ ವಿವಾದ: ಕಾಲೇಜುಗಳಿಗೆ ಫೆಬ್ರವರಿ 16ರವರೆಗೆ ರಜೆ ವಿಸ್ತರಣೆ
ರಾಜ್ಯದಲ್ಲಿ ಇತರೆ ಹಿಂದುಳಿದ ವರ್ಗಗಳಿಗೆ ನೀಡಲಾಗಿರುವ ಮೀಸಲಾತಿಯನ್ನು ಉಳಿಸಿಕೊಂಡು ಯಾವ ರೀತಿ ಚುನಾವಣೆಯನ್ನು ನಡೆಸಬೇಕು ಎಂಬುದರ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಫೆಬ್ರವರಿ 14, 15 ರಂದೂ ಪಿಯು ಕಾಲೇಜುಗಳಿಗೆ ರಜೆ

ಶಾಂತಿ-ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪದವಿಪೂರ್ವ ಕಾಲೇಜುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಫೆಬ್ರವರಿ 12, 13ರ ಭಾನುವಾರದ ರಜೆಯ ಜತೆಗೆ 14 ಮತ್ತು 15ರವರೆಗೆ ರಜೆ ಘೋಷಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಾಲಾ ಇಲಾಖೆ ಆದೇಶದಲ್ಲಿ ತಿಳಿಸಿದೆ..



Read more

[wpas_products keywords=”deal of the day sale today offer all”]