ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಯಶಸ್ವಿ ಚಿತ್ರಗಳನ್ನು ಕೊಟ್ಟಿರುವ ಆರ್‌ಎಸ್ ಪ್ರೊಡಕ್ಷನ್ಸ್ ಸಂಸ್ಥೆ ಮೂಲಕ ಆರ್ ಶ್ರೀನಿವಾಸ್ ನಿರ್ಮಿಸುತ್ತಿರುವ ಇಪ್ಪತ್ತನೆಯ ಚಿತ್ರ ‘ಕಾಟನ್ ಪೇಟೆ ಗೇಟ್’ .
ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿದೆ. ಬೆಂಗಳೂರು, ಹೈದರಾಬಾದ್‌ನಲ್ಲಿ ಚಿತ್ರೀಕರಣ ನಡೆದಿದೆ.
ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರವನ್ನು ವೈ. ರಾಜಕುಮಾರ್ ನಿರ್ದೇಶಿಸುತ್ತಿದ್ದಾರೆ. ಕನ್ನಡದಲ್ಲಿ ‘ಕಾಟನ್‌ಪೇಟೆ ಗೇಟ್’ ಎಂದು, ತೆಲುಗಿನಲ್ಲಿ ‘ಸೀತಣ್ಣಪೇಟಾ ಗೇಟ್’ ಎಂಬ ಹೆಸರಿನಲ್ಲಿ ನಿರ್ಮಾಣವಾಗುತ್ತಿದೆ.
ನಾಲ್ಕು ಹಾಡುಗಳಿರುವ ಈ ಚಿತ್ರಕ್ಕೆ ಎನ್.ಎಸ್.ಪ್ರಸು ಸಂಗೀತ ನೀಡುತ್ತಿದ್ದಾರೆ. ಚಿಡತಾಲ ನವೀನ್ ಹಾಗೂ ಯೋಗಿ ರೆಡ್ಡಿ ಛಾಯಾಗ್ರಹಣ, ಶಿವ ಸರ್ವಣಿ ಸಂಕಲನ ಹಾಗೂ ಬಯ್ಯವರಪು ರವಿ ಸಂಭಾಷಣೆ ಬರೆದಿದ್ದಾರೆ.
ವೇಣುಗೋಪಾಲ್, ಯಶ್ವನ್, ಸುರಭಿ ತಿವಾರಿ, ಅನುಶಾ ಜೈನ್, ಸುಧಿಕ್ಷ, ಕಿಸ್ಲೆ ಚೌಧರಿ , ಪಾರ್ಥು ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
Read More…Source link
[wpas_products keywords=”deal of the day party wear for men wedding shirt”]