Karnataka news paper

ಬೆಂಗಳೂರಿಗೂ ಕಾಲಿಟ್ಟ ಹಿಜಾಬ್ ವಿವಾದ: ಶಾಲೆಯೊಂದರ ಮುಂದೆ ಹೈಡ್ರಾಮಾ, ಹೈಕೋರ್ಟ್ ಮಧ್ಯಂತರ ಆದೇಶಕ್ಕೆ ಡೋಂಟ್ ಕೇರ್


Online Desk

ಬೆಂಗಳೂರು: ಹಿಜಾಬ್ ವಿವಾದ ರಾಜಧಾನಿ ಬೆಂಗಳೂರಿಗೂ ಕಾಲಿಟ್ಟಿದೆ. ಇಷ್ಟು ದಿನ ಈ ವಿವಾದದಲ್ಲಿ ಬೆಂಗಳೂರು ನಗರ ದೂರವುಳಿದಿತ್ತು. 

ಆದರೆ ಇಂದು ಚಂದ್ರಾ ಲೇ ಔಟ್ ನ ವಿದ್ಯಾಸಾಗರ್ ಶಾಲೆಯಲ್ಲಿ ಕೆಲವು ಮಕ್ಕಳು ಹಿಜಾಬ್ ಧರಿಸಿ ಬಂದಾಗ ಶಿಕ್ಷಕರು ಅದನ್ನು ತೆಗೆಯುವಂತೆ ಸೂಚಿಸಿದರು. ಹಾಗೂ ಶಿಕ್ಷಕಿಯೊಬ್ಬರು ತರಗತಿಯ ಬೋರ್ಡ್ ನಲ್ಲಿ ಹಿಜಾಬ್ ಮತ್ತು ಮುಸ್ಲಿಂ ಜನಾಂಗಕ್ಕೆ ಸಂಬಂಧಿಸಿದಂತೆ ಅವಾಚ್ಯ ಶಬ್ದಗಳನ್ನು ಬರೆದಿದ್ದಾರೆ ಎಂದು ವಿದ್ಯಾರ್ಥಿಗಳು ಮತ್ತು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಚಂದ್ರಾ ಲೇ ಔಟ್ ನ ವಿದ್ಯಾಸಾಗರ್ ಶಾಲೆಯಲ್ಲಿ ಗೊಂದಲದ ಉದ್ವಿಗ್ನ ವಾತಾವರಣ ಉಂಟಾಗಿದ್ದು ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಹರಸಾಹಸಪಡುತ್ತಿದ್ದಾರೆ. ಇದುವರೆಗೆ ಹೈಸ್ಕೂಲ್, ಕಾಲೇಜಿನಲ್ಲಿ ಕಂಡುಬಂದಿದ್ದ ಹಿಜಾಬ್ ವಿವಾದ ಈಗ ಪ್ರಾಥಮಿಕ ಶಾಲೆಗೂ ಲಗ್ಗೆಯಿಟ್ಟಿದೆ. 

ವಿದ್ಯಾಸಾಗರ್ ಪಬ್ಲಿಕ್ ಸ್ಕೂಲ್ ಬಳಿ ವಿದ್ಯಾರ್ಥಿಗಳ ಜೊತೆಗೆ ಪೋಷಕರು ದೌಡಾಯಿಸಿದ್ದು, ಶಾಲೆ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬೆಂಗಳೂರು ಚಂದ್ರ ಲೇಔಟ್‌ನಲ್ಲಿರುವ ವಿದ್ಯಾಸಾಗರ್ ಪಬ್ಲಿಕ್ ಶಾಲೆ ಬಳಿ ಬಂದ ಪೋಷಕರು ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಆಡಳಿತ ಮಂಡಳಿ ಮತ್ತು ಪೋಷಕರ ನಡುವಿನ ವಾಗ್ವಾದದಿಂದ ಮತ್ತಷ್ಟು ಗೊಂದಲ ಸೃಷ್ಟಿಯಾಗಿದ್ದು, ಪರಿಸ್ಥಿತಿ ತಿಳಿಗೊಳಿಸುವ ನಿಟ್ಟಿನಲ್ಲಿ ಪೊಲೀಸರು ಚರ್ಚೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಹಿಜಾಬ್ ಸಂಘರ್ಷ ಕುರಿತು ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶ ಪ್ರಶ್ನಿಸಿ ಅರ್ಜಿ: ತುರ್ತು ವಿಚಾರಣೆ ನಡೆಸಲು ‘ಸುಪ್ರೀಂ’ ನಕಾರ

ಸ್ಥಳಕ್ಕೆ ಬೆಂಗಳೂರು ದಕ್ಷಿಣ ವಿಭಾಗದ ಡಿಡಿಪಿಐ ರಾಜೇಂದ್ರ ಭೇಟಿ ನೀಡಿದ್ದು, ರಾಜಿ ಸಂಧಾನ ನಡೆಸುತ್ತಿದ್ದಾರೆ. ಹಿಜಾಬ್ ಬಗ್ಗೆ ಮಾತನಾಡಿಲ್ಲ: ಹಿಜಾಬ್ ಬಗ್ಗೆ ಮಾತನಾಡಿಲ್ಲ ಎಂದ ಶಿಕ್ಷಕಿ: ಹಿಜಾಬ್ ಧರಿಸದಂತೆ ವಿದ್ಯಾರ್ಥಿಗಳ ಎದುರು ಬೋರ್ಡ್ ಮೇಲೆ ಬರೆದಿದ್ದಾರೆ ಎಂದು ಆರೋಪಿಸಲಾದ ಶಿಕ್ಷಕಿ ಜೊತೆಗೆ ಶಿಕ್ಷಣಾಧಿಕಾರಿ ಬೈಲಾಂಜನಪ್ಪ ಚರ್ಚೆ ನಡೆಸಿದ್ದಾರೆ. ಶಿಕ್ಷಕಿ ಶಶಿಕಲಾ ಬಳಿ ಘಟನೆ ಕುರಿತು ಮಾಹಿತಿ ಪಡೆದುಕೊಂಡಿದ್ದೇನೆ. ಶಾಲೆಯಲ್ಲಿ ಪಾಠವನ್ನು ಬಿಟ್ಟು ಬೇರೆ ಯಾವ ವಿಷಯದ ಬಗ್ಗೆ ಪ್ರಸ್ತಾಪಿಸಿಲ್ಲ. ಹಿಜಾಬ್ ವಿವಾದದ ಬಗ್ಗೆ ತರಗತಿಯಲ್ಲಿ ಮಾತನಾಡಿಲ್ಲ ಎಂಬುದಾಗಿ ಶಿಕ್ಷಕಿ ತಿಳಿಸಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬೈಲಾಂಜನಪ್ಪ ಸ್ಪಷ್ಟನೆ ನೀಡಿದ್ದಾರೆ.

ಹೈಕೋರ್ಟ್ ಆದೇಶಕ್ಕೆ ಡೋಂಟ್ ಕೇರ್: ಹಿಜಾಬ್ ವಿವಾದ ಸದ್ಯ ಹೈಕೋರ್ಟ್ ನಲ್ಲಿ ವಿಚಾರಣೆ ಹಂತದಲ್ಲಿದೆ. ಮೊನ್ನೆ ಮಧ್ಯಂತರ ಆದೇಶ ಹೊರಡಿಸಿದ್ದ ಹೈಕೋರ್ಟ್ ಮುಂದಿನ ಆದೇಶದವರೆಗೆ ಯಾವ ಮಕ್ಕಳೂ ಶಾಲಾ-ಕಾಲೇಜುಗಳಿಗೆ ಧಾರ್ಮಿಕ ಗುರುತು ಹೊಂದಿರುವ ಬಟ್ಟೆಗಳನ್ನು ಧರಿಸಿಕೊಂಡು ಹೋಗಬಾರದು, ಕೇವಲ ಸಮವಸ್ತ್ರ ಮಾತ್ರ ಧರಿಸಿಕೊಂಡು ಹೋಗಬೇಕು ಎಂದು ಮಧ್ಯಂತರ ಆದೇಶ ನೀಡಿತ್ತು. ಆದರೆ ನ್ಯಾಯಾಲಯ ಆದೇಶಕ್ಕೂ ಜನರು ಡೋಂಟ್ ಕೇರ್ ಅನ್ನುವಂತಿದೆ. 

ಇದನ್ನೂ ಓದಿ: ಹಿಜಾಬ್ ವಿವಾದ: ಹೈಕೋರ್ಟ್ ಮಧ್ಯಂತರ ಆದೇಶ ಪ್ರಕಟ, ಆದೇಶದಲ್ಲಿ ಏನು ಹೇಳಿದೆ?

ಇಂದು ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಹಾಗೂ ಬಾಗಲಕೋಟೆಯ ಶಾಲೆಯೊಂದರಲ್ಲಿ ಪ್ರಾಥಮಿಕ ತರಗತಿಯಲ್ಲಿ ಓದುತ್ತಿರುವ ಮಕ್ಕಳು ನಮಾಜ್ ಮಾಡುತ್ತಿರುವ ವಿಡಿಯೊ ವೈರಲ್ ಆಗಿದೆ. 



Read more

[wpas_products keywords=”deal of the day”]