The New Indian Express
ಕಲಬುರಗಿ: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಅಂತಿಮ ಆದೇಶ ಬಾಕಿ ಇರುವ ಹಿನ್ನೆಲೆಯಲ್ಲಿ ಜೂನಿಯರ್ ಕಾಲೇಜುಗಳು ಮತ್ತು ಇತರ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಪುನರಾರಂಭ ಮಾಡಲು ವಿಳಂಬ ಮಾಡುತ್ತಿದೆ ಎಂಬ ಆರೋಪವನ್ನು ರಾಜ್ಯ ಸರ್ಕಾರ ಶನಿವಾರ ಸ್ಪಷ್ಟವಾಗಿ ತಳ್ಳಿಹಾಕಿದೆ.
ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಸಿ ಎನ್ ಅಶ್ವಥ್ ನಾರಾಯಣ್ ಅವರು, ಕರ್ನಾಟಕ ಹೈಕೋರ್ಟ್ ಈಗಾಗಲೇ ಮಧ್ಯಂತರ ಆದೇಶ ಹೊರಡಿಸಿದೆ ಮತ್ತು ಶಿಕ್ಷಣ ಸಂಸ್ಥೆಗಳನ್ನು ತೆರೆಯಲು ಸರ್ಕಾರಕ್ಕೆ ನಿರ್ದೇಶನ ನೀಡಿದೆ. ನ್ಯಾಯಾಲಯದ ಆದೇಶವನ್ನು ಗೌರವಿಸಿ ಸೋಮವಾರದಿಂದ 10ನೇ ತರಗತಿವರೆಗಿನ ಶಾಲೆಗಳನ್ನು ತೆರೆಯಲು ಸರ್ಕಾರ ನಿರ್ಧರಿಸಿದೆ. ಆದರೆ ಜ್ಯೂನಿಯರ್ ಕಾಲೇಜುಗಳು ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳನ್ನು ತೆರೆಯಲು ಸರ್ಕಾರ, ಗೃಹ ಇಲಾಖೆಯ ವರದಿಗಾಗಿ ಕಾಯುತ್ತಿದೆ. ಏಕೆಂದರೆ ಪರಿಸ್ಥಿತಿಯನ್ನು ನಿಭಾಯಿಸಲು ಸರ್ಕಾರ ಸಿದ್ಧವಾಗಿರಬೇಕು ಎಂದು ಅವರು ಹೇಳಿದ್ದಾರೆ.
ಇದನ್ನು ಓದಿ: ಹಿಜಾಬ್ ಬೆನ್ನಲ್ಲೇ ಮತ್ತೊಂದು ರಗಳೆ: ಬಾಗಲಕೋಟೆ, ಮಂಗಳೂರಿನ ಶಾಲೆಯಲ್ಲಿ ವಿದ್ಯಾರ್ಥಿಗಳ ‘ನಮಾಜ್’ ವಿಡಿಯೋ ವೈರಲ್
ರಾಜ್ಯ ಸರ್ಕಾರ ವಿವಾದ ಸೃಷ್ಟಿಸಿ ಕಾನೂನು ಸುವ್ಯವಸ್ಥೆ ನಿಯಂತ್ರಿಸುವಲ್ಲಿ ವಿಫಲವಾಗಿದೆ ಎಂಬ ವಿರೋಧ ಪಕ್ಷಗಳ ನಾಯಕರ ಆರೋಪಕ್ಕೆ ಉತ್ತರಿಸಿದ ಅಶ್ವಥ್ ನಾರಾಯಣ್, ಬಿಜೆಪಿ ಸರ್ಕಾರ ವಿವಾದ ಸೃಷ್ಟಿಸುವ ಅಗತ್ಯವಿಲ್ಲ ಎಂದು ಹೇಳಿದರು.
ಪ್ರತಿಪಕ್ಷಗಳ ನಾಯಕರು ಆತ್ಮಾವಲೋಕನ ಮಾಡಿಕೊಳ್ಳಲಿ ಮತ್ತು ಮಹಾರಾಷ್ಟ್ರದಲ್ಲಿ (ಸಮ್ಮಿಶ್ರ ಸರ್ಕಾರದ ಪ್ರಮುಖ ಪಾಲುದಾರರಾಗಿರುವ ಕಾಂಗ್ರೆಸ್) ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯವೇ ಅಥವಾ ಇಲ್ಲವೇ ಎಂದು ತಿಳಿಸಲಿ ಎಂದು ತಿರುಗೇಟು ನೀಡಿದರು.
Read more
[wpas_products keywords=”deal of the day”]