ರಾಜ್ಯ ವಿಪತ್ತು ತುರ್ತು ನಿರ್ವಹಣಾ ತಂಡ (ಎಸ್‌ಡಿಆರ್‌ಎಫ್) ಸಿಬ್ಬಂದಿ ಜತೆಗೆ ಸ್ಥಳೀಯ ಅಧಿಕಾರಿಗಳು ಅವಶೇಷಗಳನ್ನು ತೆರವುಗೊಳಿಸಿ, ಉಳಿದ ಕಾರ್ಮಿಕರನ್ನು ರಕ್ಷಿಸಲು ಪ್ರಯತ್ನ ಮುಂದುವರಿಸಿದ್ದಾರೆ. ಜಬಲ್ಪುರದಿಂದ ಎಸ್‌ಡಿಆರ್‌ಎಫ್ ತಂಡ ಆಗಮಿಸಿದೆ ಎಂದು ಕಟ್ನಿ ಜಿಲ್ಲಾಧಿಕಾರಿ ಪ್ರಿಯಾಂಕ್ ಮಿಶ್ರಾ ತಿಳಿಸಿದ್ದಾರೆ. ಶನಿವಾರ ರಾತ್ರಿ ಈ ದುರಂತ ಸಂಭವಿಸಿದೆ.
ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿತ: ಭೀಕರ ಅವಘಡದಲ್ಲಿ ಐವರು ಕಾರ್ಮಿಕರ ದುರ್ಮರಣ
ರಾಜ್ಯ ಕಾರ್ಯಾಲಯದಿಂದ ನಡೆಯುತ್ತಿರುವ ರಕ್ಷಣಾ ಪರಿಹಾರ ಕಾರ್ಯಾಚರಣೆಗಳು ಮಧ್ಯಪ್ರದೇಶ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಗೃಹ) ರಾಜೇಶ್ ರಾಜೋರಾ ಅವರ ನಿಗಾವಣೆಯಲ್ಲಿ ನಡೆಯುತ್ತಿದೆ.
“ಕುಸಿದ ಕಲ್ಲು ಮಣ್ಣುಗಳನ್ನು ಅಗೆದು ತೆಗೆಯುವ ಮೂಲಕ ಅಡಿಯಲ್ಲಿ ಸಿಲುಕಿರುವ ಕಾರ್ಮಿಕರನ್ನು ತಲುಪಲು ಅಗತ್ಯವಾದ ಎಲ್ಲ ಸಲಕರಣೆಗಳನ್ನು ಎಸ್‌ಡಿಆರ್‌ಎಫ್ ತಂಡ ಹೊಂದಿದೆ. ಜಿಲ್ಲಾಧಿಕಾರಿ ಮತ್ತು ಎಸ್‌ಪಿ ಇಬ್ಬರೂ ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದು, ರಕ್ಷಣಾ ಕಾರ್ಯಾಚರಣೆಯ ಉಸ್ತುವಾರಿ ನಡೆಸುತ್ತಿದ್ದಾರೆ” ಎಂದು ರಾಜೋರಾ ತಿಳಿಸಿದ್ದಾರೆ.
ಸ್ಲೀಮನಾಬಾದ್‌ನಲ್ಲಿ ನಡೆದಿರುವ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಕಟ್ನಿ ಜಿಲ್ಲಾಧಿಕಾರಿ ಜತೆಗೆ ದೂರವಾಣಿ ಸಂಭಾಷಣೆ ಮೂಲಕ ಮಾಹಿತಿ ಪಡೆದಿದ್ದು, ವರದಿ ನೀಡುವಂತೆ ಸೂಚಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅವರು ಸೂಚನೆ ನೀಡಿದ್ದಾರೆ.
Read more
[wpas_products keywords=”deal of the day sale today offer all”]