Avinash Kadesivalaya | Vijaya Karnataka Web | Updated: Feb 13, 2022, 1:34 PM
ನಾಳೆಯಿಂದ ಫ್ರೌಡ ಶಾಲೆಗಳನ್ನ ಆರಂಭಿಸುತ್ತೇವೆ. ಈಗಾಗಲೇ ಜಿಲ್ಲಾಧಿಕಾರಿಗಳು, ಡಿಡಿಪಿಐ, ಶಾಲಾಡಳಿತ ಮಂಡಳಿಗಳಿಗೆ ಶಾಂತಿ ಸಭೆ ಮಾಡಲು ತಿಳಿಸಿದ್ದೇನೆ. ನಾಳೆಯಿಂದ ಶಾಂತಿಯುತವಾಗಿ ಎಲ್ಲಾ ತರಗತಿಗಳು ನಡೆಯುತ್ತವೆ ಎಂದು ತಿಳಿಸಿದರು. ಪರಿಸ್ಥಿತಿ ನೋಡಿಕೊಂಡು ಕಾಲೇಜುಗಳ ಆರಂಭದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತೆ. ಈ ನಿಟ್ಟಿನಲ್ಲಿ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

Karnataka Chief Minister Basavaraj Bommai
ಹೈಲೈಟ್ಸ್:
- ಹಿಜಾಬ್ ವಿಚಾರದಲ್ಲಿ ವಿವಾದ ಸೃಷ್ಟಿಸಿದ್ರೆ ಕಟ್ಟು ನಿಟ್ಟಿನ ಕ್ರಮ
- ವಿವಾದ ಸೃಷ್ಟಿಸಲು ಯತ್ನಿಸುವವರ ಮೇಲೆ ನಿಗಾ ಇಡಲಾಗಿದೆ
- ಹುಬ್ಬಳ್ಳಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಎಚ್ಚರಿಕೆ
ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆಯಿಂದ ಫ್ರೌಡ ಶಾಲೆಗಳನ್ನ ಆರಂಭಿಸುತ್ತೇವೆ. ಈಗಾಗಲೇ ಜಿಲ್ಲಾಧಿಕಾರಿಗಳು, ಡಿಡಿಪಿಐ, ಶಾಲಾಡಳಿತ ಮಂಡಳಿಗಳಿಗೆ ಶಾಂತಿ ಸಭೆ ಮಾಡಲು ತಿಳಿಸಿದ್ದೇನೆ. ನಾಳೆಯಿಂದ ಶಾಂತಿಯುತವಾಗಿ ಎಲ್ಲಾ ತರಗತಿಗಳು ನಡೆಯುತ್ತವೆ ಎಂದು ತಿಳಿಸಿದರು. ಪರಿಸ್ಥಿತಿ ನೋಡಿಕೊಂಡು ಕಾಲೇಜುಗಳ ಆರಂಭದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತೆ. ಈ ನಿಟ್ಟಿನಲ್ಲಿ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ಮೊದಲಿನ ಹಾಗೇ ಸೌಹಾರ್ದಯುತವಾಗಿ ಶಾಲಾ ಕಾಲೇಜುಗಳನ್ನು ಆರಂಭಿಸುತ್ತೇವೆ. ಶಾಲಾ ಕಾಲೇಜುಗಳನ್ನು ಆರಂಭಿಸುವುದು ನಮ್ಮ ಮೊದಲ ಆದ್ಯತೆ. ಹಿಜಾಬ್ ವಿಚಾರದಲ್ಲಿ ವಿವಾದ ಸೃಷ್ಟಿಸಲು ಯತ್ನಿಸುವವರ ಬಗ್ಗೆ ನಿಗಾ ವಹಿಸುತ್ತಿದ್ದೇವೆ ಎಂದು ಹೇಳಿದರು.
ಸೌಹಾರ್ದಯುತ ವಾತಾವರಣ ನಿರ್ಮಾಣಕ್ಕೆ ಒತ್ತು
ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನೆ ನೀಡುವ, ಸುಳ್ಳು ಸಂದೇಶವನ್ನು ಹರಿಬಿಡುವವರ ಮೇಲೆ ಸರಕಾರ ಕಣ್ಣಿಟ್ಟಿದ್ದಾರೆ. ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಶಾಲಾ ಕಾಲೇಜುಗಳಲ್ಲಿ ಸೌಹಾರ್ದಯುತ ವಾತಾವರಣ ನಿರ್ಮಿಸುವುದು ಮೊದಲ ಗುರಿಯಾಗಿದೆ. ಈ ಹಿಂದಿನಂತೆ ಶಾಲಾ ಕಾಲೇಜುಗಳಲ್ಲಿ ಕಲಿಕೆಗೆ ಸೌಹಾರ್ದಯುತ ವಾತಾವರಣ ನಿರ್ಮಿಸಲು ಒತ್ತು ನೀಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಸಮೀಪದ ನಗರಗಳ ಸುದ್ದಿ
Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್ ಮಾಡಿಕೊಳ್ಳಿ ಹಾಗೂ ರಿಪೋರ್ಟ್ ಕಳಿಸಿ
ಕೀವರ್ಡ್ಸ್
Web Title : we will take strict action if there is controversy over hijab; basavaraj bommai warns
Kannada News from Vijaya Karnataka, TIL Network
Kannada News from Vijaya Karnataka, TIL Network
Read more
[wpas_products keywords=”deal of the day sale today offer all”]