ಹಿಜಾಬ್ ಹಾಕುವುದು ಮುಸ್ಲಿಂ ಮಹಿಳೆಯರ ಹಕ್ಕು. ನೂರಾರು ವರ್ಷದಿಂದ ಅವರು ಹಿಜಾಬ್ ಹಾಕಿಕೊಂಡು ಬರುತ್ತಿದ್ದಾರೆ ಎಂದು ಹೇಳಿರುವ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್, ಹಿಜಾಬ್ ವಿವಾದ ಆರಂಭವಾದ ವೇಳೆ ಸರ್ಕಾರ ಅದನ್ನು ಸರಳವಾಗಿ ತೆಗೆದುಕೊಳ್ತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿಜಾಬ್ ಧಾರಣೆ ಕಡ್ಡಾಯವೇನೂ ಅಲ್ಲ. ಆದ್ರೆ, ಯಾರಿಗೆ ತಮ್ಮ ಸೌಂದರ್ಯ ರಕ್ಷಣೆ ಮಾಡಿಕೊಳ್ಳಬೇಕು ಎಂಬ ಮನಸ್ಸಿರುತ್ತದೋ ಅವರು ಹಿಜಾಬ್ ಧರಿಸುತ್ತಾರೆ ಎಂದು ಜಮೀರ್ ಹೇಳಿದ್ದಾರೆ.
ಇದೀಗ ಹಿಜಾಬ್ ವಿವಾದದ ಕುರಿತಾಗಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಕೋರ್ಟ್ ತೀರ್ಪು ಏನಾಗುತ್ತದೆ ಎಂದು ನೋಡೋಣ. ಹಾಗೆ ನೋಡಿದ್ರೆ ದೇಶಕ್ಕೆ ಸ್ವಾತಂತ್ರ್ಯ ಬರುವ ಕಾಲಕ್ಕಿಂತಾ ಮೊದಲಿನಿಂದಲೂ ಮುಸ್ಲಿಂ ಮಹಿಳೆಯರು ಹಿಜಾಬ್ ಧರಿಸುತ್ತಿದ್ದರು. ಈಗಲೂ ಹಾಕಿಕೊಳ್ಳುತ್ತಿದ್ದಾರೆ. ಆದ್ರೆ, ಬಿಜೆಪಿಯವರು ಮಕ್ಕಳ ಮನಸ್ಸಿನಲ್ಲಿ ಜಾತಿಯ ವಿಷ ಬೀಜ ಬಿತ್ತನೆ ಮಾಡುತ್ತಿದ್ದಾರೆ ಎಂದು ಜಮೀರ್ ಆಕ್ರೋಶ ವ್ಯಕ್ತಪಡಿಸಿದರು.
ಇನ್ನು ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕೋರ್ಟ್ ಆದೇಶವು ನಮ್ಮ ಪರವಾಗಿಯೇ ಬರುತ್ತೆ ಎಂದು ಆಶಯ ವ್ಯಕ್ತಪಡಿಸಿದ ಜಮೀರ್, ಬಿಜೆಪಿಯವರು ಕೇವಲ ರಾಜಕೀಯ ಲಾಭದಿಂದ ಮಾತ್ರ ಈ ರೀತಿ ಮಾಡ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹಿಜಾಬ್ ಹಾಕೋದು ಮಹಿಳೆಯರ ಹಕ್ಕು ಎಂದು ಪುನರುಚ್ಛರಿಸಿದ ಕಾಂಗ್ರೆಸ್ ನಾಯಕ ಜಮೀರ್, ರಾಮ ಮಂದಿರ ಕುರಿತಾಗಿ ಕೋರ್ಟ್ ತೀರ್ಪು ಬಂದಾಗ ನಾವು ಸ್ವಾಗತಿಸಿದೆವು. ಆದ್ರೆ, ಇದೀಗ ರಾಮಮಂದಿರ ವಿಚಾವೇ ಬೇರೆ, ಹಿಜಾಬ್ ವಿಚಾರವೇ ಬೇರೆ ಎಂದು ಸ್ಪಷ್ಟಪಡಿಸಿದರು. ಅಷ್ಟೇ ಅಲ್ಲ, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿ ಎಂದು ನಾವು ರಾಜ್ಯಾದ್ಯಂತ ಪ್ರವಾಸ ಮಾಡ್ತಿದ್ದೇವೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಾತ್ರ ಜನರಿಗೆ ಒಳ್ಳೆಯದಾಗುತ್ತೆ ಎಂದು ಜಮೀರ್ ಅಹಮದ್ ಖಾನ್ ಹೇಳಿದರು.
ಈ ಹಿಂದೆ ರೇಣುಕಾಚಾರ್ಯ ನೀಡಿದ್ದರು ವಿವಾದಾತ್ಮಕ ಹೇಳಿಕೆ..!
ಬಿಜೆಪಿ ಶಾಸಕ ರೇಣುಕಾಚಾರ್ಯ ಕೂಡಾ ಈ ಹಿಂದೆ ಇದೇ ರೀತಿಯ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಮಹಿಳೆಯರು ಧರಿಸುವ ಉಡುಪು ಪುರುಷರನ್ನು ಪ್ರಚೋದಿಸುತ್ತದೆ ಎಂದು ಅವರು ಹೇಳಿಕೆ ನೀಡಿದ್ದರು. ರೇಣುಕಾಚಾರ್ಯ ಅವರ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಕಾಂಗ್ರೆಸ್ ನಾಯಕರು ರೇಣುಕಾಚಾರ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.
ಮಹಿಳೆಯರು ಬಿಕಿನಿ ಬೇಕಾದ್ರೂ ಹಾಕಿಕೊಂಡು ಬರಲಿ, ಅದು ಅವರ ಮೂಲಭೂತ ಹಕ್ಕು ಎಂಬ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಟ್ವೀಟ್‌ಗೆ ಪ್ರತಿಕ್ರಿಯೆ ನೀಡಲು ಹೋಗಿ ಬಿಜೆಪಿ ಶಾಸಕ ಎಂ. ಪಿ. ರೇಣುಕಾಚಾರ್ಯ ಎಡವಟ್ಟು ಮಾಡಿಕೊಂಡಿದ್ರು. ಮಹಿಳೆಯರ ಬಟ್ಟೆ ನೋಡಿ ಪುರುಷರು ಉದ್ವೇಗಕ್ಕೆ ಒಳಗಾಗುತ್ತಾರೆ. ಇದರಿಂದ ಅತ್ಯಾಚಾರದಂತಹ ಪ್ರಕರಣಗಳು ಹೆಚ್ಚಾಗಿವೆ ಎಂದು ರೇಣುಕಾಚಾರ್ಯ ಹೇಳಿಕೆ ನೀಡಿದ್ದರು.
Read more
[wpas_products keywords=”deal of the day sale today offer all”]