The New Indian Express
ಮುಂಬೈ: ರಾಹುಲ್ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವಾ ಶರ್ಮಾ ವಿರುದ್ಧ ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಶನಿವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಶರ್ಮಾ ಅಸಹ್ಯಕರ ಹೇಳಿಕೆ ಬಿಜೆಪಿ ಮತ್ತು ಆರ್ ಎಸ್ ಎಸ್ ಸಂಸ್ಕೃತಿಯನ್ನು ತೋರಿಸುತ್ತದೆ ಎಂದು ನಾನಾ ಪಟೋಲೆ ಸುದ್ದಿಗಾರರಿಗೆ ಹೇಳಿದರು. ಇಂತಹ ಹೇಳಿಕೆ ನೀಡುವ ಮೂಲಕ ಶರ್ಮಾ ಅವರ ಮಾನಸಿಕ ಸ್ಥಿಮಿತತೆ ಕ್ಷೀಣಿಸಿರುವುದು ಗೊತ್ತಾಗುತ್ತದೆ. ಅವರಿಗೆ ಒಳ್ಳೆಯ ಆಸ್ಪತ್ರೆಯಲ್ಲಿ ಚಿಕಿತ್ಸೆಯ ಅಗತ್ಯವಿದೆ ಎಂದರು.
ಉತ್ತರಾಖಂಡದಲ್ಲಿ ಶುಕ್ರವಾರ ಚುನಾವಣಾ ಪ್ರಚಾರ ಸಂದರ್ಭದಲ್ಲಿ 2016ರಲ್ಲಿ ನಡೆದ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಪುರಾವೆಗಾಗಿ ಒತ್ತಾಯಿಸಿದ್ದ ರಾಹುಲ್ ಗಾಂಧಿ, ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಮಗ ಎಂಬುದಕ್ಕೆ ಬಿಜೆಪಿ ಎಂದಾದರೂ ಪುರಾವೆ ಕೇಳಿದೆಯೇ ಎಂದು ಪ್ರಶ್ನಿಸಿದರು.
ರಾಹುಲ್ ಗಾಂಧಿ ವಿರುದ್ಧ ಪದೇ ಪದೇ ಅವಹೇಳನಕಾರಿ ಭಾಷೆಗಳನ್ನು ಬಿಜೆಪಿ ಮುಖಂಡರು ಬಳಸುತ್ತಿದ್ದಾರೆ. ಇದು ಅವರ ಸಂಸ್ಕೃತಿ, ಕಾಂಗ್ರೆಸ್ ಸಂಸ್ಕೃತಿ ಅಲ್ಲ. ಮಾನಸಿಕ ಕಾಯಿಲೆಯಿಂದ ಶರ್ಮಾ ಬೇಗ ಗುಣಮುಖರಾಗಲಿ ಎಂದು ಹಾರೈಸುವುದಾಗಿ ಪಟೋಲೆ ಹೇಳಿದರು.
ಇದೇ ವಿಚಾರವಾಗಿ ಮಾತನಾಡಿರುವ ತೆಲಂಗಾಣ ಮುಖ್ಯಮಂತ್ರಿ ಕೆ. ಸಿ. ಆರ್ ಚಂದ್ರಶೇಖರ್, ಕೂಡಲೇ ಹಿಮಾಂತ ಬಿಸ್ವಾ ಶರ್ಮಾ ಅವರಿಂದ ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ಪಡೆಯಬೇಕೆಂದು ಒತ್ತಾಯಿಸಿದ್ದಾರೆ.
Read more
[wpas_products keywords=”deal of the day”]