Karnataka news paper

ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರ ಮುಷ್ಕರ ಇಂದಿನಿಂದ


ಬೆಂಗಳೂರು: ಆರೋಗ್ಯ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 30 ಸಾವಿರ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ಸಮಾನ ವೇತನ, ಸೇವಾ ಭದ್ರತೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೋಮವಾರದಿಂದ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ.

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ನೇತೃತ್ವದಲ್ಲಿ ಮುಷ್ಕರ ನಡೆಯಲಿದೆ.

‘14ರಿಂದ ಕಪ್ಪುಪಟ್ಟಿ ಧರಿಸಿ ಮುಷ್ಕರ ನಡೆಸುತ್ತೇವೆ. ಫೆ.21ರಿಂದ ಎರಡನೇ ಹಂತದಲ್ಲಿ ಧರಣಿ ಮಾಡಲಾಗುವುದು. ನೌಕರರು ಆತ್ಮಸ್ಥೈರ್ಯದಿಂದ ಕೆಲಸ ಮಾಡುವಂತೆ ಅಸ್ಸಾಂ, ಹರಿಯಾಣ, ಮಣಿಪುರ ಹಾಗೂ ಇತರೆ ರಾಜ್ಯಗಳು ಕೈಗೊಂಡ ಉತ್ತಮ ನಿರ್ಧಾರಗಳನ್ನು ರಾಜ್ಯದಲ್ಲಿಯೂ ಕೈಗೊಳ್ಳಬೇಕು’ ಎಂದು ಸಂಘದ ರಾಜ್ಯ ಘಟಕದ ಅಧ್ಯಕ್ಷ ವಿಶ್ವಾರಾಧ್ಯ ಎಚ್.ವೈ. ಆಗ್ರಹಿಸಿದ್ದಾರೆ.

‘ನೌಕರರ ಕುಂದುಕೊರತೆಗಳ ಬಗ್ಗೆ ನಿವೃತ್ತ ಐಎಎಸ್ ಅಧಿಕಾರಿ ಪಿ.ಎನ್.ಶ್ರೀನಿವಾಸಾಚಾರಿ ಅಧ್ಯಕ್ಷತೆಯ ಮಾನವ ಸಂಪನ್ಮೂಲ ಸಮಿತಿ ಸರ್ಕಾರಕ್ಕೆ ಸಲ್ಲಿಸಿರುವ ವರದಿ ಅನುಷ್ಠಾನಗೊಳಿಸಲು ಹಲವಾರು ಬಾರಿ ಮನವಿ ಸಲ್ಲಿಸಲಾಗಿದೆ. ಹೋರಾಟ ನಡೆಸಿದರೂ ಸರ್ಕಾರ ಸ್ಪಂದಿಸಿಲ್ಲ. ಹೀಗಾಗಿ, ಮುಷ್ಕರದ ಹಾದಿ ಹಿಡಿಯುತ್ತಿದ್ದೇವೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Read more from source

[wpas_products keywords=”deal of the day sale today kitchen”]