ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಮತ್ತಷ್ಟು ಇಳಿಕೆಯಾಗಿದೆ. 24 ಗಂಟೆಗಳ ಅವಧಿಯಲ್ಲಿ 2,372 ಮಂದಿ ಸೋಂಕಿತರಾಗಿರುವುದು ದೃಢಪಟ್ಟಿದೆ.
ಈ ಸಂಖ್ಯೆ ಕಳೆದ ತಿಂಗಳು 50 ಸಾವಿರದ ಗಡಿ ದಾಟಿತ್ತು. ಈ ತಿಂಗಳು ಹೊಸ ಪ್ರಕರಣಗಳ ಸಂಖ್ಯೆ ಇಳಿಮುಖ ಮಾಡಿದೆ. ಒಂದು ದಿನದ ಅವಧಿಯಲ್ಲಿ 1.02 ಲಕ್ಷ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ಸೋಂಕು ದೃಢ ಪ್ರಮಾಣ ಶೇ 2.31 ರಷ್ಟು ವರದಿಯಾಗಿದೆ. ಈವರೆಗೆ ವರದಿಯಾದ ಒಟ್ಟು ಪ್ರಕರಣಗಳ ಸಂಖ್ಯೆ 39.26 ಲಕ್ಷಕ್ಕೆ ಏರಿಕೆಯಾಗಿದೆ.
ಎರಡು ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಮೂರು ಅಂಕಿ, 23 ಜಿಲ್ಲೆಗಳಲ್ಲಿ ಎರಡು ಅಂಕಿಯಲ್ಲಿ ಇದೆ. ಬೆಂಗಳೂರಿನಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಮತ್ತಷ್ಟು ಇಳಿಕೆ ಕಂಡಿದ್ದು, 1,059 ಮಂದಿ ಸೋಂಕಿತರಾಗಿದ್ದಾರೆ. ಮೈಸೂರಿನಲ್ಲಿ 148 ಹಾಗೂ ಬಳ್ಳಾರಿಯಲ್ಲಿ 112 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು 100 ಕ್ಕಿಂತ ಕಡಿಮೆ ಇವೆ.
ಸೋಂಕಿತರಲ್ಲಿ ಬೆಂಗಳೂರಿನಲ್ಲಿ 2,501 ಮಂದಿ ಸೇರಿದಂತೆ ರಾಜ್ಯದಲ್ಲಿ 5,395 ಮಂದಿ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಈವರೆಗೆ ಗುಣಮುಖರಾದವರ ಒಟ್ಟು ಸಂಖ್ಯೆ 38.51 ಲಕ್ಷಕ್ಕೆ ತಲುಪಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 35,697ಕ್ಕೆ ಇಳಿಕೆಯಾಗಿದೆ.
ಕೊರೊನಾ ಸೋಂಕಿತರಲ್ಲಿ 27 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಏಳು, ಮೈಸೂರಿನಲ್ಲಿ ನಾಲ್ವರು, ದಕ್ಷಿಣ ಕನ್ನಡದಲ್ಲಿ ಮೂವರು, ತುಮಕೂರು, ಧಾರವಾಡ ಹಾಗೂ ದಾವಣಗೆರೆಯಲ್ಲಿ ತಲಾ ಇಬ್ಬರು, ಬಾಗಲಕೋಟೆ, ಹಾವೇರಿ, ಕಲಬುರಗಿ, ಕೊಡಗು, ಉಡುಪಿ, ವಿಜಯಪುರ ಹಾಗೂ ಯಾದಗಿರಿಯಲ್ಲಿ ತಲಾ ಒಬ್ಬರು ಸಾವಿಗೀಡಾಗಿದ್ದಾರೆ.
ರಾಜ್ಯದಲ್ಲಿ ಮರಣ ಪ್ರಮಾಣ ದರವು ಶೇ 1.13ಕ್ಕೆ ಏರಿಕೆಯಾಗಿದೆ. ಈವರೆಗೆ ಕೋವಿಡ್‌ಗೆ
ಸಾವಿಗೀಡಾದವರ ಒಟ್ಟು ಸಂಖ್ಯೆ 39,640ಕ್ಕೆ ತಲುಪಿದೆ.
Read more from source
[wpas_products keywords=”deal of the day sale today kitchen”]