Karnataka news paper

ನೋಕಿಯಾ G11 ಸ್ಮಾರ್ಟ್‌ಫೋನ್‌ ಬಿಡುಗಡೆ! ಆಕರ್ಷಕ ಫೀಚರ್ಸ್‌!


ಸ್ಮಾರ್ಟ್‌ಫೋನ್‌

ಹೌದು, ಹೆಚ್‌ಎಂಡಿ ಗ್ಲೋಬಲ್‌ ಕಂಪೆನಿ ಹೊಸ ನೋಕಿಯಾ G11 ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ ಪಡೆದಿದೆ. ಇದು 90Hz ರಿಫ್ರೆಶ್‌ ರೇಟ್‌ ಹೊಂದಿರುವ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ವಾಟರ್‌ಡ್ರಾಪ್-ಶೈಲಿಯ ಡಿಸ್‌ಪ್ಲೇ ನಾಚ್‌ನೊಂದಿಗೆ ಬರುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್‌ ಎರಡು ವಿಭಿನ್ನ ಬಣ್ಣದ ಆಯ್ಕೆಗಳನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ನೋಕಿಯಾ G11 ಸ್ಮಾರ್ಟ್‌ಫೋನ್‌ 720×1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಇದು 90Hz ರಿಫ್ರೆಶ್ ರೇಟ್‌ ಹೊಂದಿದ್ದು, 180Hz ಟಚ್‌ ಸ್ಯಾಪ್ಲಿಂಗ್‌ ರೇಟ್‌ ಅನ್ನು ಒಳಗೊಂಡಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಇನ್ನು ಈ ಸ್ಮಾರ್ಟ್‌ಫೋನ್‌ ಯುನಿಸೊಕ್ T606 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. 3GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಆಯ್ಕೆಯನ್ನು ಹೊಂದಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ನೋಕಿಯಾ G11 ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಒಳಗೊಂಡಿದೆ. ಎರಡನೇ ಕ್ಯಾಮರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದು ಎಲ್ಇಡಿ ಫ್ಲ್ಯಾಷ್‌ನೊಂದಿಗೆ ಜೋಡಿಸಲ್ಪಟ್ಟಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ನೋಕಿಯಾ G11 ಸ್ಮಾರ್ಟ್‌ಫೋನ್‌ 5,050mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಫೋನ್, ಬಾಕ್ಸ್‌ನಲ್ಲಿ 10W ಚಾರ್ಜರ್‌ನೊಂದಿಗೆ ಬಂಡಲ್ ಆಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi 802.11ac, ಬ್ಲೂಟೂತ್ v5.0, GPS/ A-GPS, FM ರೇಡಿಯೋ, USB ಟೈಪ್-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಬೆಂಬಲಿಸಲಿದೆ. ಇದಲ್ಲದೆ ಆಕ್ಸಿಲೆರೋಮೀಟರ್‌, ಆಂಬಿಯೆಟ್‌ ಲೈಟ್‌ ಸೆನ್ಸಾರ್‌, ಪ್ರಾಕ್ಸಿಮಿಟಿ ಸೆನ್ಸಾರ್‌ ಹೊಂದಿದೆ. ಜೊತೆಗೆ ಈ ಫೋನ್ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ನೊಂದಿಗೆ ಬರುತ್ತದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ನೋಕಿಯಾ G11 ಸ್ಮಾರ್ಟ್‌ಫೋನ್‌ 3GB RAM + 32GB ಸ್ಟೋರೇಜ್ ರೂಪಾಂತರಕ್ಕಾಗಿ AED 499 (ಅಂದಾಜು 10,200ರೂ) ಗೆ ನಿಗದಿಪಡಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಚಾರ್ಕೋಲ್ ಮತ್ತು ಐಸ್ ಬಣ್ಣಗಳಲ್ಲಿ ಬರುತ್ತದೆ. ಪ್ರಸ್ತುತ ಈ ಫೋನ್‌ ಮಾರ್ಚ್‌ ತಿಂಗಳಿನಿಂದ ಯುಎಇ ಮತ್ತು ಯುಕೆ ಮಾರುಕಟ್ಟೆಗಳಲ್ಲಿ ಲಭ್ಯವಾಗಲಿದೆ. ಭಾರತದಲ್ಲಿ ಈ ಸ್ಮಾರ್ಟ್‌ಫೋನ್‌ ಯಾವಾಗ ಲಭ್ಯವಾಗಲಿದೆ ಅನ್ನೊದರ ಬಗ್ಗೆ ಯಾವುದೇ ಮಾಹಿತಿ ಇನ್ನೂ ಬಹಿರಂಗವಾಗಿಲ್ಲ.



Read more…

[wpas_products keywords=”smartphones under 15000 6gb ram”]