Karnataka news paper

ಹಿಜಾಬ್ ಬೆಂಬಲಿಸಿ ತರಗತಿ ಬಹಿಷ್ಕಾರ; ಉಪ್ಪಿನಂಗಡಿ ಸರ್ಕಾರಿ ಕಾಲೇಜಿಗೆ 2 ದಿನ ರಜೆ ಘೋಷಣೆ


ಉಪ್ಪಿನಂಗಡಿ: ಹಿಜಾಬ್ ಧರಿಸಿದವರಿಗೆ ತರಗತಿಗೆ ಪ್ರವೇಶ ನೀಡದಿರುವುದನ್ನು ವಿರೋಧಿಸಿ ಅವರ ಬೆಂಬಲವಾಗಿ ಇನ್ನು ಕೆಲವು ವಿದ್ಯಾರ್ಥಿಗಳು ತರಗತಿಯನ್ನು ಬಹಿಷ್ಕರಿಸಿದ ಘಟನೆ ಉಪ್ಪಿನಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದಿದೆ.

ಹಿಜಾಬ್ ಬೆಂಬಲಿಸಿ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟಿಸಿದ ಬೆನ್ನಲ್ಲೇ ಇನ್ನಷ್ಟು ಗೊಂದಲಗಳಿಗೆ ಕಾರಣವಾಗುವುದು ಬೇಡ ಎಂದು ಉಪ್ಪಿನಂಗಡಿಯ ಪ್ರಥಮ ದರ್ಜೆ ಕಾಲೇಜಿಗೆ ಎರಡು ದಿನಗಳ ಕಾಲ ರಜೆ ಸಾರಲಾಗಿದೆ. ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕೆಲ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡು ಕಾಲೇಜಿಗೆ ಬಂದಿದ್ದು, ಅವರಿಗೆ ತರಗತಿ ಕೊಠಡಿಯೊಳಗೆ ಪ್ರವೇಶ ನಿರಾಕರಿಸಿದ ಪ್ರಾಂಶುಪಾಲರು, ಸರಕಾರದ ಮತ್ತು ನ್ಯಾಯಾಲಯದ ಆದೇಶವನ್ನು ಮನವರಿಕೆ ಮಾಡಿಕೊಟ್ಟರು.
ಸಮವಸ್ತ್ರ ಸಂಘರ್ಷ; ಹಿಜಾಬ್ ಧರಿಸಿ ಬಂದಿದ್ದ ಉಡುಪಿಯ ಡಿಗ್ರಿ ವಿದ್ಯಾರ್ಥಿನಿಯರಿಗೂ ಪ್ರವೇಶ ನಿರಾಕರಣೆ!
ಕಾಲೇಜು ಕೊಠಡಿಯೊಳಗೆ ಸಮವಸ್ತ್ರ ಮಾತ್ರ ಬಳಸಲು ಅವಕಾಶವೆಂದು ಪ್ರಾಂಶುಪಾಲರು ಸ್ಪಷ್ಟ ಪಡಿಸಿದರು. ಈ ವೇಳೆ ನಿಯಮಪಾಲಿಸಲು ಒಪ್ಪದ ಹಿಜಾಬ್ ಧರಿಸಿದ್ದ ವಿದ್ಯಾರ್ಥಿನಿಯರು ಕಾಲೇಜಿನ ಆವರಣದಲ್ಲೇ ಕುಳಿತುಕೊಂಡರು. ಈ ಸಂದರ್ಭ ಅವರನ್ನು ಬೆಂಬಲಿಸಿ ಕೆಲ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಕಾಲೇಜಿನ ಹೊರಗಡೆ ಬಂದು ಕುಳಿತುಕೊಂಡರು. ಪರಿಸ್ಥಿತಿಯ ಸೂಕ್ಷ್ಮತೆ ಅರಿತ ಪ್ರಾಂಶುಪಾಲರು ಇನ್ನು ಕಾಲೇಜಿನಲ್ಲಿ ಯಾವುದೇ ಗೊಂದಲಗಳಾಗುವುದು ಬೇಡ ಎಂದು ಎರಡು ದಿನಗಳ ಕಾಲ ಕಾಲೇಜಿಗೆ ರಜೆ ಸಾರಿದರು.

ತರಗತಿ ನಡೆಸಲು ಮನವಿ:
ಇತ್ತ ಇನ್ನುಳಿದ ವಿದ್ಯಾರ್ಥಿಗಳು ತರಗತಿ ನಡೆಸುವಂತೆ ಪ್ರಾಂಶುಪಾಲರಲ್ಲಿ ಮನವಿ ಮಾಡಿದ್ದು, ವಿದ್ಯಾರ್ಥಿಗಳ ಆ ಬಣಕ್ಕೂ ಪರಿಸ್ಥಿತಿಯ ಸೂಕ್ಷ್ಮತೆ ಮನವರಿಕೆ ಮಾಡಿದ ಪ್ರಾಂಶುಪಾಲರು, ಸೂಕ್ಷ್ಮತೆಯಿದ್ದಲ್ಲಿ ಕಾಲೇಜಿಗೆ ರಜೆ ಸಾರುವಂತೆ ಜಿಲ್ಲಾಧಿಕಾರಿಯವರ ಆದೇಶವಿದ್ದು, ಅದರಂತೆ ರಜೆ ಸಾರಲಾಗುವುದಾಗಿ ತಿಳಿಸಿದರು.



Read more

[wpas_products keywords=”deal of the day sale today offer all”]