ಕಲಬುರಗಿಯಲ್ಲಿ ಕಾರ್ಯಕರ್ತರು ವಶಕ್ಕೆ!
ಇನ್ನು ಹೇಳಿಕೆ ಖಂಡಿಸಿ ಗುರುವಾರ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಚೇರಿಗೆ ಮುಂದೆ ಪ್ರತಿಭಟನೆ ಮಾಡಿ ಮುನ್ನವೇ ಪೋಲಿಸರು ಇಪ್ಪತ್ತಕ್ಕೂ ಹೆಚ್ಚು ಸದಸ್ಯರನ್ನು ಬಂಧಿಸಿ ವಶಕ್ಕೆ ಪಡೆದುಕೊಂಡರು. ಕೆಪಿಸಿಸಿ ಜಿಲ್ಲಾ ಘಟಕ ಕಾರ್ಮಿಕ ಘಟಕ ಮತ್ತು ಮಹಿಳಾ ಘಟಕದ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಬಿಜೆಪಿ ಕಚೇರಿಗೆ ಮೆರವಣಿಗೆ ಹೊರಟು ಪ್ರತಿಭಟನೆ ಮಾಡಲು ನಿರ್ಧರಿಸಿದ್ದರು.
ಈ ಮುನ್ನ ಪ್ರತಿಭಟನಾಕಾರರನ್ನು ಕಾಂಗ್ರೆಸ್ ಕಚೇರಿಯ ಮುಂದೆಯೇ ಪೊಲೀಸರು ಪ್ರತಿಭಟನೆ ಮಾಡದಂತೆ ವಿನಂತಿಸಿದರು. ಈ ವೇಳೆ ಕಾಂಗ್ರೆಸ್ ಮುಖಂಡರು ಮತ್ತು ಪೊಲೀಸರ ಮಧ್ಯೆ ಕೆಲಕಾಲ ವಾಗ್ವಾದ ನಡೆಯಿತು. ಆದರೂ ಕಾಂಗ್ರೆಸ್ ಕಾರ್ಯಕರ್ತರು ಮುನ್ನಡೆದಾಗ ಅನಿವಾರ್ಯವಾಗಿ ಪೊಲೀಸರು ಎಲ್ಲರನ್ನು ವಶಕ್ಕೆ ಪಡೆದು ವಾಹನಗಳಲ್ಲಿ ತುಂಬಿಕೊಂಡು ಕರೆದೊಯ್ದರು. ಈ ವೇಳೆ ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷ ಪ್ರಕಾಶಂ, ಜಿಲ್ಲಾ ಅಧ್ಯಕ್ಷ ಜಗದೇವ ಗುತ್ತೇದಾರ, ಯುವ ಘಟಕದ ರಾಜ್ಯ ಕಾರ್ಯದರ್ಶಿ ಶಿವಾನಂದ ಹೊನಗುಂಟಿ ಸೇರಿದಂತೆ ಅನೇಕರು ಿದ್ದರು.
ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ವಿರುದ್ಧ ಪ್ರತಿಭಟಿಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು
ಬಾಗಲಕೋಟೆಯಲ್ಲಿ ಪ್ರತಿಭಟನೆ!
ಇನ್ನು ಈಶ್ವರಪ್ಪ ಹೇಳಿಕೆ ಖಂಡಿಸಿ ಬಾಗಲಕೋಟೆಯಲ್ಲಿ ಪ್ರತಿಭಟನೆ ನಡೆದಿದೆ. ಕಾಂಗ್ರೆಸ್ ಪ್ರತಿಭಟನೆ ವೇಳೆ ಕೈ ಕಾಯ೯ಕತ೯ರು ಮತ್ತು ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ತಳ್ಳಾಟ, ನೂಕಾಟ ನಡೆದಿದೆ. ಬಿಜೆಪಿ ಕಚೇರಿಗೆ ದಿಢೀರ್ ಮುತ್ತಿಗೆ ಹಾಕಲು ಕಾಂಗ್ರೆಸ್ ಪ್ರತಿಭಟನಾಕಾರರಿಂದ ಯತ್ನಿಸಿದಾಗ ಈ ಘಟನೆ ನಡೆದಿದೆ.
ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಸಿಪಿಐ ವಿಜಯ್ ಬರಗುಂಡಿ ನೇತೃತ್ವದಲ್ಲಿ ಅಡ್ಡಗಟ್ಟಿದ್ದಾರೆ. ಅಡ್ಡಗಟ್ಟಿದ ಪೊಲೀಸರನ್ನು ಲೆಕ್ಕಿಸದೆ ಪ್ರತಿಭಟನಾ ಮೆರವಣಿಗೆಗೆ ಪ್ರತಿಭಟನಾಕಾರರು ಮುಂದಾದರು. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆದಿದೆ. ನಗರದ ಬಸವೇಶ್ವರ ವೃತ್ತದ ಬಳಿ ಪ್ರತಿಭಟನೆ ನಡೆದಿದ್ದು, ಸಚಿವ ಈಶ್ವರಪ್ಪ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು.
Read more
[wpas_products keywords=”deal of the day sale today offer all”]