The New Indian Express
ಲಖಿಂಪುರ: ಉತ್ತರ ಪ್ರದೇಶದ ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ಕೇಂದ್ರ ಸಚಿವ ಅಜಯ್ ಕುಮಾರ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರು ಮಂಗಳವಾರ ಸಂಜೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.
ಆಶಿಶ್ ಮಿಶ್ರಾಗೆ ಅಲಹಾಬಾದ್ ಹೈಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಇಂದು ಜಾಮೀನು ಷರತ್ತುಗಳನ್ನು ಪೂರೈಸಿದ ನಂತರ ಲಖಿಂಪುರ ಜೈಲಿನಿಂದ ಬಿಡುಗಡೆಗೊಂಡಿದ್ದಾರೆ.
ಜಾಮೀನು ಪ್ರಕ್ರಿಯೆಗಳು ಮುಗಿದ ನಂತರ ಆರೋಪಿಯನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ ಎಂದು ಲಖಿಂಪುರ ಖೇರಿ ಜೈಲಿನ ಅಧೀಕ್ಷಕ ಪಿಪಿ ಸಿಂಗ್ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ. ಅಲಹಾಬಾದ್ ಹೈಕೋರ್ಟ್‌ನ ಲಖನೌ ಪೀಠ ಕಳೆದ ವಾರ ಆಶಿಶ್ ಮಿಶ್ರ್‌ಗೆ ಜಾಮೀನು ನೀಡಿತ್ತು.
ಇದನ್ನೂ ಓದಿ: ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣ: ಕೇಂದ್ರ ಸಚಿವರ ಪುತ್ರ ಆಶಿಶ್ ಮಿಶ್ರಾಗೆ ಜಾಮೀನು ಮಂಜೂರು
ಆಶಿಶ್ ಮಿಶ್ರಾ ಅವರ ಪರ ವಕೀಲರು ಜಾಮೀನಿಗಾಗಿ ತಲಾ 3 ಲಕ್ಷ ರೂಪಾಯಿಗಳ 2 ಜಾಮೀನು ಬಾಂಡ್‌ಗಳನ್ನು ಕೋರ್ಟ್ಗೆ ಸೋಮವಾರ ಸಲ್ಲಿಸಿದ್ದಾರೆ. ಲಖೀಂಪುರ ಖೇರಿಯಲ್ಲಿ ಭುಗಿಲೆದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಅಕ್ಟೋಬರ್ 9ರಂದು ಆಶಿಶ್ ಮಿಶ್ರಾ ಅವರನ್ನು ಬಂಧಿಸಲಾಗಿತ್ತು.
ಟಿಕೋನಿಯಾದಲ್ಲಿ ರೈತರ ಪ್ರತಿಭಟನೆ ಸಂದರ್ಭದಲ್ಲಿ ನಡೆದ ಘರ್ಷಣೆಯಲ್ಲಿ ನಾಲ್ವರು ರೈತರು ಸೇರಿದಂತೆ 8 ಮಂದಿ ಸಾವನ್ನಪ್ಪಿದ್ದರು. ಇದರಲ್ಲಿ ನಾಲ್ವರು ರೈತರು ಕೇಂದ್ರ ಸಚಿವರ ಮಗನಿದ್ದ ಕಾರು ಹರಿದ ಪರಿಣಾಮವಾಗಿ ಸಾವನ್ನಪ್ಪಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ. ಆದರೆ, ಇದನ್ನು ಸಚಿವರ ಪುತ್ರ ನಿರಾಕರಿಸಿದ್ದಾರೆ.
Read more
[wpas_products keywords=”deal of the day”]