
ಹೌದು, ಒಪ್ಪೋ ರೆನೋ 7 ಸ್ಮಾರ್ಟ್‌ಫೋನ್ ಮೊದಲ ಮಾರಾಟ ಇಂದು ನಡೆಯಲಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದು 6.4 ಇಂಚಿನ ಫುಲ್ ಹೆಚ್‌ಡಿ ಹೆಚ್‌ಡಿ + ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಹಾಗೆಯೇ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಒಪ್ಪೋ ರೆನೋ 7 ಸ್ಮಾರ್ಟ್‌ಫೋನ್ 28,999ರೂ. ಬೆಲೆಯನ್ನು ಪಡೆದುಕೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಒಪ್ಪೋ ರೆನೋ 7 ಸ್ಮಾರ್ಟ್‌ಫೋನ್ 6.4 ಇಂಚಿನ ಫುಲ್ ಹೆಚ್‌ಡಿ ಹೆಚ್‌ಡಿ + ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು 1,080×2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ ಪಡೆದಿದೆ. ಇನ್ನು ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಪಡೆದಿದ್ದು, 180Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಪಡೆದುಕೊಂಡಿದೆ.

ಪ್ರೊಸೆಸರ್ ಯಾವುದು?
ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ ಕಲರ್ ಒಎಸ್ 12 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ RAM ಸಾಮರ್ಥ್ಯವನ್ನು ನೀವು ಹೆಚ್ಚು ಅಗತ್ಯವಿರುವಾಗ ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ
ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮರಾ ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಒಪ್ಪೋ ರೆನೋ 7 ಸ್ಮಾರ್ಟ್‌ಫೋನ್ 4500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 65W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2, GPS/ A-GPS, NFC, USB ಟೈಪ್-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಬೆಂಬಲಿಸಲಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಗೈರೊಸ್ಕೋಪ್, ಪೆಡೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್ ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಒಪ್ಪೋ ರೆನೋ 7 5G ಸ್ಮಾರ್ಟ್‌ಫೋನ್ 8GB RAM + 256GB ಸ್ಟೋರೇಜ್ ಆಯ್ಕೆಗೆ 28,999ರೂ.ಬೆಲೆ ಹೊಂದಿದೆ. ಈ ಸ್ಮಾರ್ಟ್‌ಫೋನ್ ಸ್ಟ್ಯಾರಿ ಬ್ಲ್ಯಾಕ್ ಮತ್ತು ಸ್ಟಾರ್‌ಟ್ರೇಲ್ಸ್ ಬ್ಲೂ ಕಲರ್ ಆಯ್ಕೆಗಳಲ್ಲಿ ಲಭ್ಯವಿದೆ. ಇನ್ನು ಆಕ್ಸಿಸ್ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ ಮತ್ತು ಸ್ಟ್ಯಾಂಡರ್ಡ್ ಚಾರ್ಟರ್ಡ್ ಬ್ಯಾಂಕ್ ಕಾರ್ಡ್‌ಗಳನ್ನು ಬಳಸಿಕೊಂಡು ಖರೀದಿಮಾಡಿದರೆ 10% ರಿಯಾಯಿತಿ ಕೂಡ ಪಡೆದುಕೊಳ್ಳಬಹುದಾಗಿದೆ.
Read more…
[wpas_products keywords=”smartphones under 15000 6gb ram”]