Karnataka news paper

ಮಲಯಾಳಂ ಜನಪ್ರಿಯ ನಟ ಕೊಟ್ಟಾಯಂ ಪ್ರದೀಪ್ ನಿಧನ


ಕೊಟ್ಟಾಯಂ: ಮಲಯಾಳಂ ಚಿತ್ರನಟ ಕೊಟ್ಟಾಯಂ ಪ್ರದೀಪ್  ಗುರುವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾದರು.

ಅವರಿಗೆ 61 ವರ್ಷ ವಯಸ್ಸಾಗಿತ್ತು. ಪ್ರದೀಪ್‌ ಅವರ ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಕೆಲವು ದಿನಗಳಿಂದ ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಬೆಳಗ್ಗೆ ಹೃದಯಾಘಾತವಾಗಿ ನಿಧನರಾದರು ಎಂದು ಅವರ ಕುಟುಂಬದವರು ತಿಳಿಸಿದ್ದಾರೆ.

ಪ್ರದೀಪ್‌ ನಿಧನಕ್ಕೆ ಮಲಯಾಳಂ ಸಿನಿಮಾರಂಗದ ಗಣ್ಯರು ಹಾಗೂ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಸಂತಾಪ ಸೂಚಿಸಿದ್ದಾರೆ.

ಮಲಯಾಳಂ ಮತ್ತು ತಮಿಳು ಚಿತ್ರಗಳಲ್ಲಿ ಅವರು ನಟಿಸಿದ್ದರು. ಹೆಚ್ಚಾಗಿ ಪೋಷಕ ಪಾತ್ರಗಳನ್ನು ಮಾಡುತ್ತಿದ್ದರು. ಮಲಯಾಳಂನಲ್ಲಿ ಹಾಸ್ಯ ಪಾತ್ರಗಳಲ್ಲಿ ನಟಿಸುವ ಮೂಕ ಜನಪ್ರಿಯತೆ ಪಡೆದಿದ್ದರು. 

‘ಈ ನಾಡು ಇನ್ನಲೇ ವರೇ’, ‘ವಿನ್ನೈತ್ತಾಂಡಿ ವರುವಯ್ಯ’, ‘ಲಾಲ್ ಬಹದ್ದೂರ್ ಶಾಸ್ತ್ರಿ’  ‘ಫಿಲಿಪ್ಸ್ ಮತ್ತು ಮಂಕಿ ಪೆನ್’ ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ನಟಿಸಿದ್ದರು.



Read More…Source link

[wpas_products keywords=”deal of the day party wear for men wedding shirt”]