PTI
ನವದೆಹಲಿ: 59 ಜನರ ಸಾವಿಗೆ ಕಾರಣವಾಗಿದ್ದ ಉಪಹಾರ್ ಚಿತ್ರ ಮಂದಿರದ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅಮಾನತು ಕೋರಿ ಅನ್ಸಾಲ್ ಸಹೋದರರು ಸಲ್ಲಿಸಿದ್ದ ಮನವಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದೆ.
1997ರಲ್ಲಿ 59 ಜನರ ಸಾವಿಗೆ ಕಾರಣವಾದ ದೆಹಲಿಯ ಉಪಹಾರ್ ಚಿತ್ರಮಂದಿರದಲ್ಲಿ ಸಂಭವಿಸಿದ ಅಗ್ನಿ ದುರಂತಕ್ಕೆ ಸಂಬಂಧಿಸಿದ ಸಾಕ್ಷ್ಯಾಧಾರಗಳನ್ನು ತಿರುಚಿದ ಆರೋಪದಲ್ಲಿ ಉಪಹಾರ್ ಚಿತ್ರ ಮಂದಿರದ ಮಾಲೀಕರು ಮತ್ತು ರಿಯಲ್ ಎಸ್ಟೇಟ್ ಉದ್ಯಮಿಗಳಾದ ಸುಶೀಲ್ ಅನ್ಸಾಲ್ ಹಾಗೂ ಗೋಪಾಲ್ ಅನ್ಸಾಲ್ ಅವರಿಗೆ ಏಳು ವರ್ಷಗಳ ಜೈಲು ಶಿಕ್ಷೆಯಾಗಿತ್ತು. ಈ ಶಿಕ್ಷೆಯನ್ನು ಅಮಾನತುಗೊಳಿಸುವಂತೆ ಕೋರಿ ಅನ್ಸಾಲ್ ಸಹೋದರರು ಸಲ್ಲಿಸಿದ್ದ ಅರ್ಜಿಯನ್ನು ಇದೀಗ ದೆಹಲಿ ಹೈಕೋರ್ಟ್ ತಿರಸ್ಕರಿಸಿದೆ.
ಆದರೆ ಈ ಆದೇಶದ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಅವರಿಗೆ ಇನ್ನೂ ಅವಕಾಶವಿದೆ ಎಂದು ಕಾನೂನು ತಜ್ಞರು
ಈ ಪ್ರಕರಣದ ವಿಚಾರಣೆ ನಡೆಸಿದ ದೆಹಲಿ ವಿಚಾರಣಾ ನ್ಯಾಯಾಲಯವು ಅವರಿಗೆ ಏಳು ವರ್ಷಗಳ ಜೈಲು ಶಿಕ್ಷೆ ಹಾಗೂ ತಲಾ 2.25-ಕೋಟಿ ರೂ. ದಂಡ ವಿಧಿಸಿದ ನಂತರ ನವೆಂಬರ್ 2021 ರಿಂದ ಸಹೋದರರು ಜೈಲಿನಲ್ಲಿದ್ದಾರೆ.
ಏನಿದು ಪ್ರಕರಣ?
1997 ರ ಉಪಹಾರ್ ಅಗ್ನಿ ದುರಂತ ಪ್ರಕರಣದಲ್ಲಿ ನಿರ್ಣಾಯಕ ಸಾಕ್ಷ್ಯವನ್ನು ತಿರುಚಿದ ಪ್ರಕರಣದಲ್ಲಿ ಉದ್ಯಮಿಗಳಾದ ಸುಶೀಲ್ ಅನ್ಸಾಲ್ ಹಾಗೂ ಗೋಪಾಲ್ ಅನ್ಸಾಲ್ ಮತ್ತು ಅವರ ಇಬ್ಬರು ಉದ್ಯೋಗಿಗಳನ್ನು ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿದೆ. ಅನ್ಸಾಲ್ ಸಹೋದರರ ಜೊತೆಗೆ ನ್ಯಾಯಾಲಯ ಸಿಬ್ಬಂದಿ ದಿನೇಶ್ ಚಂದ್ ಶರ್ಮಾ ಹಾಗೂ ಇತರರಾದ ಪಿ.ಪಿ. ಬಾತ್ರಾ, ಹರ್ ಸ್ವರೂಪ್ ಪನ್ವಾರ್, ಅನೂಪ್ ಸಿಂಗ್ ಹಾಗೂ ಧರಂವೀರ್ ಮಲ್ಹೋತ್ರಾ ಅವರ ವಿರುದ್ಧ ಸಾಕ್ಷ್ಯಾಧಾರಗಳನ್ನು ನಾಶಪಡಿಸಿದ ಪ್ರಕರಣವನ್ನು ದಾಖಲಿಸಲಾಗಿದೆ.
1997 ರಲ್ಲಿ ಬಾಲಿವುಡ್ ಚಲನಚಿತ್ರ ‘ಬಾರ್ಡರ್’ ಚಿತ್ರ ಪ್ರದರ್ಶನದ ವೇಳೆ ಚಿತ್ರಮಂದಿರದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 59 ಮಂದಿ ಸಾವನ್ನಪ್ಪಿದ್ದು,100 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.
Read more
[wpas_products keywords=”deal of the day”]