ಡಿಲಿಮಿಟೇಶನ್ ಜನಸಂಖ್ಯೆ ಆಧಾರದಲ್ಲಿ ನಡೆಯುತ್ತದೆ ದಕ್ಷಿಣದ ರಾಜ್ಯಗಳು ಉತ್ತರದ ರಾಜ್ಯಗಳಿಗೆ ಹೋಲಿಸಿದರೆ ಜನಸಂಖ್ಯೆಯನ್ನು ನಿಯಂತ್ರಿಸಿದೆ ಎಂದು ಕೆಲವು ಭಾವಿಸಿದ್ದಾರೆ. ಆದರೆ ಈ ಕುರಿತು ಯಾರಿಗೂ ಸ್ಪಷ್ಟ ಚಿತ್ರಣವಿಲ್ಲ. ಹೀಗಾಗಿ ಈ ವಿಚಾರವಾಗಿ ನಾವೆಲ್ಲಾ ಕಾಯುವುದು ಒಳಿತು..” ಎಂದು ಕೇಂದ್ರ ಸಚಿವರು ಇದೇ ವೇಳೆ ಸಲಹೆ ನೀಡಿದರು.
“ಜನಸಂಖ್ಯೆಯ ಆಧಾರದ ಮೇಲೆ ಲೋಕಸಭಾ ಕ್ಷೇತ್ರಗಳ ಸಂಖ್ಯೆ ಕಡಿಮೆಯಾಗುತ್ತದೆ ಎಂಬುದರ ಬಗ್ಗೆ ಚರ್ಚೆ ನಡೆಯಬೇಕು. ಆದರೆ ಅದಕ್ಕೂ ಮೊದಲೇ ಕೇಂದ್ರ ಸರ್ಕಾರ ನಮಗೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸುವುದು ಸರಿಯಲ್ಲ. ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಎಲ್ಲ ರಾಜ್ಯಗಳನ್ನೂ ಸಮಾನ ದೃಷ್ಟಿಯಲ್ಲಿ ನೋಡುತ್ತದೆ..” ಎಂದು ಮಾಜಿ ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.
“ತಮಿಳುನಾಡು ರಾಜ್ಯ ಸರ್ಕಾರ ಮೊದಲಿನಿಂದಲೂ ಕೇಂದ್ರದ ನೀತಿಗಳನ್ನು ಟೀಕಿಸುತ್ತಾ ಬರುತ್ತಿದೆ. ಆದರೆ ಕ್ಷೇತ್ರ ಮರುವಿಂಗಡಣೆ ಬಗ್ಗೆ ಯಾವುದೇ ಸ್ಪಷ್ಟ ಚಿತ್ರಣ ಇಲ್ಲದಿರುವಾಗಲೂ, ಅದು ರಾಜಕೀಯ ಲಾಭಕ್ಕಾಗಿ ಕೇಂದ್ರ ಸರ್ಕಾರವನ್ನು ಟೀಕಿಸುತ್ತಿರುವುದು ಸರಿಯಲ್ಲ..” ಎಂದು ಹೆಚ್‌ಡಿ ಕುಮಾರಸ್ವಾಮಿ ಅಸಮಾಧಾನ ಹೊರಹಾಕಿದರು.
“ಇನ್ನು ತ್ರಿಭಾಷಾ ಸೂತ್ರ ವಿಚಾರವಾಗಿಯೂ ಅನಗತ್ಯ ಗೊಂದಲ ಸೃಷ್ಟಿಸಲಾಗುತ್ತಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಎಲ್ಲ ರಾಜ್ಯಗಳಿಗೂ ಅನ್ವಯವಾಗುತ್ತದೆ. ಆದರೆ ತಮಿಳುನಾಡು ವಿನಾಕಾರಣ ಕ್ಯಾತೆ ತಗೆದು ಗೊಂದಲಗಳಿಗೆ ಎಡೆ ಮಾಡಿಕೊಡುತ್ತಿದೆ. ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡುವ ಹಕ್ಕು ಯಾರಿಗೂ ಇಲ್ಲ..” ಎಂದು ಹೆಚ್‌ಡಿಕೆ ಸೂಚ್ಯವಾಗಿ ಹೇಳಿದರು.
“ಕರ್ನಾಟಕದಲ್ಲಿಯೂ ಕೆಲವರು ತಮಿಳುನಾಡು ಮುಖ್ಯಮಂತ್ರಿಯ ಮಾತಿಗೆ ಧ್ವನಿಗೂಡಿಸುತ್ತಿದ್ದಾರೆ. ಆದರೆ ಕ್ಷೇತ್ರ ಮರುವಿಂಗಡಣೆ ಮತ್ತು ತ್ರಿಭಾಷಾ ಸೂತ್ರದ ವಿಚಾರವಾಗಿ ಜನರನ್ನು ತಪ್ಪು ದಾರಿಗೆಳೆಯುವುದನ್ನು ನಿಲ್ಲಿಸಬೇಕು..” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹೆಚ್‌ಡಿ ಕುಮಾರಸ್ವಾಮಿ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.
ಕ್ಷೇತ್ರ ಮರುವಿಂಗಡಣೆ ಮತ್ತು ತ್ರಿಭಾಷಾ ಸೂತ್ರವನ್ನು ತೀವ್ರವಾಗಿ ವಿರೋಧಿಸುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, “ರಾಜ್ಯದ ಜನತೆ ಒಗ್ಗಟ್ಟಿನಿಂದ ಮತ್ತೊಂದು ಸುತ್ತಿನ ಭಾಷಾ ಯುದ್ಧಕ್ಕೆ ಸಜ್ಜಾಗಬೇಕು. ತಮಿಳುನಾಡಿನ ಅಸ್ಮಿತೆ ಉಳಿಸಿಕೊಳ್ಳಲು ಇದೊಂದೇ ಮಾರ್ಗ..” ಎಂದು ಕರೆ ನೀಡಿರುವುದನ್ನು ಇಲ್ಲಿ ಸ್ಮರಿಸಬಹುದು.
Read more
[wpas_products keywords=”deal of the day sale today offer all”]