ಖರ್ಗೆಯತ್ತ ಬೆಟ್ಟು ಮಾಡಿದ ಡಿಕೆ ಶಿವಕುಮಾರ್
“ಅಧಿಕಾರ ಹಂಚಿಕೆ ವಿಚಾರವಾಗಿ ಚರ್ಚೆ ಮಾಡದಂತೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಸೂಚನೆ ನೀಡಿದ್ದು, ನಾನು ಅವರ ಮಾತಿಗೆ ಬದ್ಧನಾಗಿದ್ದೇನೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
ವೀರಪ್ಪ ಮೊಯ್ಲಿ ಏನಂದ್ರು?
ಉಡುಪಿ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಕರ್ನಾಟಕ ಮಾಜಿ ಸಿಎಂ ವೀರಪ್ಪ ಮೊಯ್ಲಿ, ” ಡಿಕೆ ಶಿವಕುಮಾರ್ ಸದ್ಯದಲ್ಲೇ ಮುಖ್ಯಮಂತ್ರಿ ಆಗಬೇಕು. ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷ ಸಂಕಷ್ಟದಲ್ಲಿರುವಾಗ ಸಂಚಲನ ಮೂಡಿಸಿದ್ದಾರೆ. ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಹೋರಾಟ ಮಾಡಿದ್ದು, ಮುಖ್ಯಮಂತ್ರಿಯಾಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಯಾರು ಕೂಡ ಆತಂಕ ಪಡಬೇಕಾದ ಅವಶ್ಯಕತೆ ಇಲ್ಲ. ಇದು ತೀರ್ಮಾನ ಆಗಿರುವ ವಿಷಯ. ಜನರ ಮನಸ್ಸಿನಲ್ಲಿ ತೀರ್ಮಾನವಾಗಿದೆ. ಕೋಟಿ ಕೋಟಿ ಪ್ರಯತ್ನ ಮಾಡಿದರೂ ಮುಖ್ಯಮಂತ್ರಿ ಹುದ್ದೆ ತಪ್ಪಿಸಲು ಸಾಧ್ಯವಿಲ್ಲ ಅನ್ನೋದು ಶತಸಿದ್ಧ ” ಎಂದು ಹೇಳಿದ್ದರು.
ಡಿಕೆಶಿ ಸಿಎಂ ಆಗ್ತಾರೆ- ರಕ್ತದಲ್ಲಿ ಬರೆದುಕೊಡುವೆ ಎಂದ ಶಾಸಕ
ರಕ್ತದಲ್ಲಿ ಬೇಕಾದರೆ ಬರೆದುಕೊಡುತ್ತೇನೆ. ಡಿಸೆಂಬರ್ ಒಳಗೆ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆ’ ಎಂದು ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ವಿಶ್ವಾಸ ವ್ಯಕ್ತಪಡಿಸಿದರು. ದಾವಣಗೆರೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಡಿಕೆ ಶಿವಕುಮಾರ್ ಹಗಲಿರುಳು ಕಾಂಗ್ರೆಸ್ ಗಾಗಿ ದುಡಿದಿದ್ದಾರೆ. ಈ ಕಾರಣದಿಂದಲೇ ಶಾಸಕರು ಗೆದ್ದಿದ್ದಾರೆ. ಪಕ್ಷ ಅಧಿಕಾರಕ್ಕೆ ಬರಲು ಅವರ ಪಾತ್ರ ಇದೆ. ಅವರು ಏನೇ ನಿರ್ಧಾರ ತೆಗೆದುಕೊಂಡರೂ ಅದಕ್ಕೆ ನಾವು ಬದ್ಧರಾಗಿರುತ್ತೇವೆ ಎಂದು ಹೇಳಿದರು. ಈ ವರ್ಷದ ಡಿಸೆಂಬರ್ ನಿಂದ ಮುಂದಿನ 5 ವರ್ಷ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ. ಅಂದರೆ ಏಳುವರೆ ವರ್ಷ ಅವರೇ ಸಿಎಂ ಆಗಿಯೇ ಮುಂದುವರಿಯುತ್ತಾರೆ ” ಎಂದು ಭವಿಷ್ಯ ನುಡಿದರು.
Read more
[wpas_products keywords=”deal of the day sale today offer all”]