ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಿಎಂ ನೀಡಿರುವ ಈ ಹೇಳಿಕೆ ಅಧಿಕಾರ ಹಂಚಿಕೆ ಸೂತ್ರದ ಕುರಿತಾದ ಡಿಕೆ ಶಿವಕುಮಾರ್ ವಾದಕ್ಕೆ ನೈತಿಕ ಶಕ್ತಿಯನ್ನು ತುಂಬಿದ್ದು, ಇತ್ತ ಸಿಎಂ ಸಿದ್ದರಾಮಯ್ಯ ಬಣ ವಿರೋಧಿಸಲು ಆಗದೆ ಸಮರ್ಥಿಸಲೂ ಆಗದೆ ಇಕ್ಕಟ್ಟಿನಲ್ಲಿ ಸಿಲುಕಿದೆ.
ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದಿದ್ದ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ವೀರಪ್ಪ ಮೊಯ್ಲಿ, “ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವುದು ತೀರ್ಮಾನ ಆಗಿರುವ ವಿಷಯ. ಮೊದಲು ಡಿಕೆ ಶಿವಕುಮಾರ್ ಗೆ ಎಂಎಲ್‌ಎ ಟಿಕೆಟ್ ಕೊಡಿಸಿದ್ದು ನಾನೇ. ಈಗ ಅವರು ಪಕ್ಷದಲ್ಲಿ ಯಶಸ್ವಿ ನಾಯಕರಾಗಿ ಬೆಳೆದಿರುವುದು ಖುಷಿಯ ಸಂಗತಿ” ಎಂದಿದ್ದರು. ಅಲ್ಲದೆ, ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಸಿಎಂ ಚರ್ಚೆಗೆ ನೀವು ಯಾವುದಕ್ಕೂ ಪ್ರತಿಕ್ರಿಯೆ ಕೊಡಬೇಡಿ. ನಿಮ್ಮ ವಿರುದ್ಧ ಹೇಳಿಕೆಗಳು ಬರುತ್ತೆ ಹೋಗುತ್ತೆ ಅದರ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ ಎಂದು ಸಲಹೆ ನೀಡಿದ್ದಾರೆ.
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ಬಹಿರಂಗ ಬೆಂಬಲ ಇದೀಗ ಡಿಕೆಶಿಗೆ ಮತ್ತಷ್ಟು ಬಲ ಬಂದಿದೆ. ಸಿಎಂ ಸಿದ್ದರಾಮಯ್ಯ ಪರವಾಗಿ ಕಾಂಗ್ರೆಸ್ ಘಟಾನುಘಟಿ ನಾಯಕರು ಬೆಂಬಲ ಸೂಚಿಸಿ ಪದೇ ಪದೇ ಹೇಳಿಕೆ ನೀಡುತ್ತಿದ್ದರು. ಅದರಲ್ಲೂ ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಕೆ ಎನ್ ರಾಜಣ್ಣ, ಸತೀಶ್ ಜಾರಕಿಹೊಳಿ ಬಹಿರಂಗವಾಗಿಯೇ ಡಿಕೆಶಿ ವಿರುದ್ಧ ಮಾತನಾಡಿದ್ದರು.
ಇಕ್ಕಟ್ಟಿನಲ್ಲಿ ಸಿದ್ದರಾಮಯ್ಯ ಬಣ, ಯಾರು ಏನಂದ್ರು?
ಇನ್ನು ವೀರಪ್ಪ ಮೊಯ್ಲಿ ವಿಚಾರವಾಗಿ ಮಾತನಾಡಿದ ಸಚಿವ ಸಂತೋಷ್ ಲಾಡ್ “ ಈ ಹೇಳಿಕೆಯ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಅದು ಅವರ ವೈಯಕ್ತಿಕ ಅಭಿಪ್ರಾಯ, ಎಲ್ಲಕ್ಕೂ ಹೈಕಮಾಂಡ್ ಸುಪ್ರೀಂ ಆಗಿದೆ. ಪಕ್ಷದಲ್ಲಿ ಭಿನ್ನ ಅಭಿಪ್ರಾಯಕ್ಕೆ ಅವಕಾಶ ಇದೆ. ನಮ್ಮ ಪಕ್ಷದಲ್ಲಿ ಪ್ರಜಾಪ್ರಭುತ್ವ ಇದೆ. ಪಕ್ಷದ ನಿಯಮಗಳಿಗೆ ಎಲ್ಲರೂ ಬದ್ಧರಾಗಬೇಕು” ಎಂದು ಅಡ್ಡ ಗೋಡೆ ಮೇಲೆ ದೀಪ ಇಟ್ಟಂತೆ ಹೇಳಿಕೆಯನ್ನು ನೀಡಿದ್ದಾರೆ.
ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿ “ ವೀರಪ್ಪ ಮೊಯ್ಲಿ ಹೇಳಿಕೆ ನೀಡಿರುವುದನ್ನು ಗಮನಿಸಿದ್ದೇನೆ. ಆದರೆ ಅಂತಿಮ ನಿರ್ಧಾರ ಹೈಕಮಾಂಡ್‌ಗೆ ಬಿಟ್ಟಿದ್ದು. ಇದರಿಂದ ಸರ್ಕಾರಕ್ಕೆ ಡ್ಯಾಮೇಜ್ ಆಗುವುದಾದರೆ ಇದನ್ನು
ಕೇಳುವವರು ಕೇಳಬೇಕು ಅಷ್ಟೇ . ಅಂತಿಮವಾಗಿ ಹೈಕಮಾಂಡ್ ತಿರ್ಮಾನಕ್ಕೆ ಬಿಟ್ಟಿದ್ದು. ನಾವು ಮಾತಾಡೋವಾಗ ಸುಮ್ಮನಿರುವಂತೆ ಸೂಚನೆ ನೀಡಿದ್ದರು. ಈಗ ಎಲ್ಲರಿಗೂ ಒಂದೇ ಮಾನದಂಡ ವಾಗಿರಬೇಕಲ್ವಾ” ಎಂದು ಪ್ರಶ್ನಿಸಿದರು.
ಸಚಿವ ಕೆ ಎನ್ ರಾಜಣ್ಣ ಮಾತನಾಡಿ “ ವೀರಪ್ಪ ಮೋಯ್ಲಿ ಮಾಜಿ ಸಿಎಂ ಆಗಿದ್ರು. ಕೇಂದ್ರ ಸಚಿವರಾಗಿಯೂ ಕೆಲಸ ಮಾಡಿದ್ದರು. 50 ವರ್ಷ ನಮ್ಮ ಪಕ್ಷದಲ್ಲಿದ್ದು ಸೇವೆ ಸಲ್ಲಿಸಿದ್ದಾರೆ. ಅವರ ಅಭಿಪ್ರಾಯ ವ್ಯಕ್ತಪಡಿಸಿದ್ದನ್ನು ನಾನ ವಿರೋಧ ಮಾಡಲ್ಲ. ಅದು ಅವರ ವೈಯಕ್ತಿಕ ಅಭಿಪ್ರಾಯ. ಹೈಕಮಾಂಡ್ ಎಲ್ಲವನ್ನು ನಿರ್ಧರಿಸುತ್ತದೆ. ನಾನು ಸೇರಿದಂತೆ ಬಹಳಷ್ಟು ಜನ ಪೂರ್ಣ ಅವಧಿಗೆ ಸಿಎಂ ಅವರು ಇರಬೇಕು ಅಂತ ಅಭಿಪ್ರಾಯ ಹೊಂದಿದ್ದೆವೆ. ಹೈಕಮಾಂಡ್ ಎಲ್ಲಾ ನಿರ್ಧಾರ ಕೈಗೊಳ್ಳುತ್ತದೆ” ಎಂದರು.
Read more
[wpas_products keywords=”deal of the day sale today offer all”]